ಬ್ರೇಕಿಂಗ್ ನ್ಯೂಸ್
18-01-23 01:55 pm Source: news18 ಕ್ರೀಡೆ
ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಟೀಂ ಇಂಡಿಯಾ ಸಜ್ಜಾಗಿದೆ. ಭಾರತ ಮತ್ತು ಕಿವೀಸ್ ನಡುವಿನ ಮೊದಲ ಏಕದಿನ ಪಂದ್ಯ ಇಂದು ಉಪ್ಪಲ್ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.
ಈ ಪಂದ್ಯಕ್ಕಾಗಿ ಉಭಯ ತಂಡಗಳು ಹೈದರಾಬಾದ್ ತಲುಪಿವೆ. ಕಿವೀಸ್ ಆಟಗಾರರು ಮೂರು ದಿನ ಮುಂಚಿತವಾಗಿ ಹೈದರಾಬಾದ್ ತಲುಪಿದ್ದರು. ಸೋಮವಾರ ಸಂಜೆಯೇ ಭಾರತದ ಆಟಗಾರರು ಮುತ್ತಿನ ನಗರಿಗೆ ಆಗಮಿಸಿದ್ದಾರೆ.
4 ವರ್ಷಗಳ ಸುದೀರ್ಘ ಅಂತರದ ಬಳಿಕ ಉಪ್ಪಲ್ ಕ್ರೀಡಾಂಗಣದಲ್ಲಿ ಮತ್ತೊಂದು ಏಕದಿನ ಪಂದ್ಯ ನಡೆಯಲಿದೆ. 2019ರಲ್ಲಿ ಇಲ್ಲಿ ಕೊನೆಯ ಏಕದಿನ ಪಂದ್ಯ ನಡೆದಿತ್ತು. ಆ ನಂತರ ಮತ್ತೆ ಏಕದಿನ ಮಾದರಿಯಲ್ಲಿ ಪಂದ್ಯಗಳು ನಡೆದಿರಲಿಲ್ಲ.
ಉಪ್ಪಲ್ ಕ್ರೀಡಾಂಗಣದಲ್ಲಿ ಟೀಂ ಇಂಡಿಯಾ ಎಷ್ಟು ಪಂದ್ಯಗಳಲ್ಲಿ ಕಣಕ್ಕಿಳಿದಿದೆ? ಅದರಲ್ಲಿ ಎಷ್ಟು ಪಂದ್ಯಗಳನ್ನು ಗೆದ್ದಿದೆ ಎಂಬ ಅಂಕಿಅಂಶಗಳನ್ನು ನೋಡುವದಾದರೆ, ಇಲ್ಲಿ ಭಾರತ ಇಲ್ಲಿಯವರೆಗೆ ಈ ಮೈದಾನದಲ್ಲಿ 6 ಏಕದಿನ ಪಂದ್ಯಗಳನ್ನು ಆಡಿದೆ. ಆರರಲ್ಲಿ ಮೂರರಲ್ಲಿ ಸೋಲನ್ನು ಅನುಭವಿಸಿತ್ತು.
2005 ರಲ್ಲಿ ಉಪ್ಪಲ್ ಸ್ಟೇಡಿಯಂ ಮೊದಲ ಬಾರಿಗೆ ದಕ್ಷಿಣ ಆಫ್ರಿಕಾ ಮತ್ತು ಭಾರತ ನಡುವಿನ ಪಂದ್ಯವನ್ನು ಆಯೋಜಿಸಿತ್ತು. ಭಾರತ 5 ವಿಕೆಟ್ಗಳಿಂದ ಸೋತಿತ್ತು. ಅದರ ನಂತರ 2007 ಮತ್ತು 2009ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಎರಡು ODIಗಳನ್ನು ಆಡಿದ್ದರು. ಈ ಎರಡರಲ್ಲೂ ಆಸೀಸ್ ಗೆಲುವು ಸಾಧಿಸಿತ್ತು.
ಆದರೆ 2011 ರಿಂದ ಇಲ್ಲಿ ಆಡಿದ ಎಲ್ಲಾ ಮೂರು ಏಕದಿನ ಪಂದ್ಯಗಳನ್ನು ಭಾರತ ಗೆದ್ದಿದೆ. 2011ರಲ್ಲಿ ಇಂಗ್ಲೆಂಡ್ ವಿರುದ್ಧ. 2014ರಲ್ಲಿ ಶ್ರೀಲಂಕಾ ವಿರುದ್ಧ ಮತ್ತು 2019ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಗೆಲುವು ದಾಖಲಿಸಿದೆ. ಕಳೆದ ವರ್ಷ ಆಸ್ಟ್ರೇಲಿಯಾ ವಿರುದ್ಧದ ಟಿ20 ಪಂದ್ಯವನ್ನೂ ಭಾರತ ಗೆದ್ದಿತ್ತು.
ಉಪ್ಪಲ್ ಕ್ರೀಡಾಂಗಣದಲ್ಲಿ ಏಕದಿನ ಮಾದರಿಯಲ್ಲಿ ಟೀಂ ಇಂಡಿಯಾದ ದಾಖಲೆ 50-50 ಆಗಿದೆ. ಅಲ್ಲದೇ ಇದೀಗ ನ್ಯೂಜಿಲ್ಯಾಂಡ್ ತಂಡ ಸಹ ಅದ್ಭುತ ಫಾರ್ಮ್ನಲ್ಲಿದೆ. ಪಾಕಿಸ್ತಾನವನ್ನು ತವರಿನಲ್ಲಿ 2-1ರ ಅಂತರದಲ್ಲಿ ಕಿವೀಸ್ ಸೋಲಿಸಿ ಸರಣಿ ಗೆದ್ದಿದೆ. ಹೀಗಾಗಿ ಇಂದಿನ ಪಂದ್ಯವು ಹೆಚ್ಚು ರೋಚಕವಾಗಿರುವ ಸಾಧ್ಯತೆ ಇದೆ.
ಈಗಾಗಲೇ ಪಂದ್ಯದ ಸಂಪೂರ್ಣ ಟಿಕೆಟ್ಗಳು ಮಾರಾಟವಾಗಿದ್ದು, ಇಂದಿನ ಪಂದ್ಯವು ಭಾರತೀಯ ಕಾಲಮಾನ ಮಧ್ಯಾಹ್ನ 1:30ಕ್ಕೆ ಆರಂಭವಾಗಲಿದೆ.
IND vs NZ1st odi live scores update team india records at Rajiv Gandhi international cricket stadium Hyderabad.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 11:22 am
HK News Desk
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
13-10-25 07:47 pm
Udupi Correspondent
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
Honey Bees Attack in Puttur: ಪುತ್ತೂರು ; ಹೆಜ್ಜ...
12-10-25 09:53 pm
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
14-10-25 11:19 am
Mangalore Correspondent
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm