ಬ್ರೇಕಿಂಗ್ ನ್ಯೂಸ್
19-01-23 01:29 pm Source: news18 ಕ್ರೀಡೆ
ಶುಭಮನ್ ಗಿಲ್ ಕೇವಲ 23 ವರ್ಷ 132 ದಿನಗಳ ವಯಸ್ಸಿನಲ್ಲಿ ದೊಡ್ಡ ಸಾಧನೆ ಮಾಡಿದ್ದಾರೆ. ಏಕದಿನ ಕ್ರಿಕೆಟ್ನಲ್ಲಿ ದ್ವಿಶತಕ ಸಿಡಿಸಿದ ಅತ್ಯಂತ ಕಿರಿಯ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಮೊದಲ ODI (IND vs NZ) ನಲ್ಲಿ ಅವರು ಈ ಇತಿಹಾಸವನ್ನು ಸೃಷ್ಟಿಸಿದರು.
ಗಿಲ್ ನ್ಯೂಜಿಲೆಂಡ್ ವಿರುದ್ಧ 149 ಎಸೆತಗಳಲ್ಲಿ 208 ರನ್ ಗಳಿಸಿದರು. 19 ಬೌಂಡರಿ ಮತ್ತು 9 ಸಿಕ್ಸರ್ಗಳನ್ನು ಬಾರಿಸಿದರು. ಏಕದಿನ ಕ್ರಿಕೆಟ್ನಲ್ಲಿ ದ್ವಿಶತಕ ಸಿಡಿಸಿದ 5ನೇ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾದರು. ಈ ಹಿಂದೆ ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್, ರೋಹಿತ್ ಶರ್ಮಾ ಮತ್ತು ಇಶಾನ್ ಕಿಶನ್ ಈ ಸಾಧನೆ ಮಾಡಿದ್ದಾರೆ. ರೋಹಿತ್ 3 ಬಾರಿ ಈ ಸಾಧನೆ ಮಾಡಿದ್ದಾರೆ.
ಗಿಲ್ ಅವರ ತಂದೆ ಲಖ್ವಿಂದರ್ ಸಿಂಗ್ ಒಬ್ಬ ರೈತ. ಮಗನನ್ನು ಕ್ರಿಕೆಟಿಗನನ್ನಾಗಿ ಮಾಡಲು ಫಾರ್ಮ್ ನಲ್ಲಿಯೇ ಪಿಚ್ ಸಿದ್ಧಪಡಿಸಿದ್ದರು. ಗಿಲ್ ಇಲ್ಲಿ ತಯಾರಾದ ಟರ್ಫ್ ಪಿಚ್ನಲ್ಲಿ ಕ್ರಿಕೆಟ್ ಕಲಿಯಲು ಪ್ರಾರಂಭಿಸಿದರು. ಗಿಲ್ನ ವಿಕೆಟ್ ಪಡೆದವರಿಗೆ ಅವರ ತಂದೆ 100 ರೂಪಾಯಿ ನೀಡುತ್ತಿದ್ದರು. ಶುಭ್ಮನ್ ಗಿಲ್ ಅವರನ್ನು ಕ್ರಿಕೆಟಿಗನನ್ನಾಗಿ ಮಾಡಲು ಅವರು ಹಳ್ಳಿಯನ್ನು ತೊರೆದು ಮೊಹಾಲಿಗೆ ಬಂದಿದ್ದರು. ಇಲ್ಲಿ ಗಿಲ್ ಅಕಾಡೆಮಿ ಆಫ್ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ಗೆ ಸೇರಿಕೊಂಡರು. 2014ರಲ್ಲಿ ಅಂತರ ಜಿಲ್ಲಾ ಟೂರ್ನಿಯಲ್ಲಿ ಗಿಲ್ 351 ರನ್ ಗಳಿಸಿ ಎಲ್ಲರ ಗಮನ ಸೆಳೆದಿದ್ದರು.
ಅವರು 2018ರಲ್ಲಿ ನಡೆದ ಅಂಡರ್-19 ವಿಶ್ವಕಪ್ಗೆ ಭಾರತೀಯ ತಂಡದ ಉಪನಾಯಕರಾಗಿದ್ದರು. ಅವರು ತಂಡಕ್ಕಾಗಿ ಗರಿಷ್ಠ 372 ರನ್ ಗಳಿಸಿದರು. ಅಲ್ಲದೇ ತಂಡವನ್ನು ಚಾಂಪಿಯನ್ ಮಾಡುವಲ್ಲಿ ಗಮನಾರ್ಹ ಕೊಡುಗೆ ನೀಡಿದರು. ಆಗಸ್ಟ್ 2019 ರಲ್ಲಿ ಗಿಲ್ ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ ದ್ವಿಶತಕ ಗಳಿಸಿದ ಕಿರಿಯ ಭಾರತೀಯ ಬ್ಯಾಟ್ಸ್ಮನ್ ಎನಿಸಿಕೊಂಡರು. 19 ವರ್ಷ 334 ದಿನಗಳ ವಯಸ್ಸಿನಲ್ಲಿ ಅವರು ವೆಸ್ಟ್ ಇಂಡೀಸ್ ಎ ವಿರುದ್ಧ ಭಾರತ ಎ ಪರ 204 ರನ್ ಗಳಿಸಿದರು. ದೇಶಿ ಕ್ರಿಕೆಟ್ ನಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಆಯ್ಕೆಗಾರರ ಗಮನ ಸೆಳೆಯುತ್ತಿದ್ದರು.
31 ಜನವರಿ 2019 ರಂದು, ಅವರು ತಮ್ಮ ಅಂತರರಾಷ್ಟ್ರೀಯ ಚೊಚ್ಚಲ ಪಂದ್ಯವನ್ನು ಮಾಡುವ ಅವಕಾಶವನ್ನು ಪಡೆದರು. ನ್ಯೂಜಿಲೆಂಡ್ ವಿರುದ್ಧದ ಏಕದಿನ ತಂಡದಲ್ಲಿ ಸ್ಥಾನ ಪಡೆದರು. ಗಿಲ್ ಡಿಸೆಂಬರ್ 2020ರಲ್ಲಿ ಮೊದಲ ಬಾರಿಗೆ ಟೆಸ್ಟ್ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದರು. ಟೀಂ ಇಂಡಿಯಾ ಪರ ಇದುವರೆಗೆ 13 ಟೆಸ್ಟ್, 19 ODI ಮತ್ತು 3 T20 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. ಅವರು ಟೆಸ್ಟ್ನಲ್ಲಿ ಒಂದು ಶತಕ ಮತ್ತು ಏಕದಿನದಲ್ಲಿ ಮೂರು ಶತಕಗಳನ್ನು ಗಳಿಸಿದ್ದಾರೆ.
IND vs NZ 1st odi shubman gill father used to give 100 Rupees to wicket takers.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 11:22 am
HK News Desk
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
13-10-25 07:47 pm
Udupi Correspondent
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
Honey Bees Attack in Puttur: ಪುತ್ತೂರು ; ಹೆಜ್ಜ...
12-10-25 09:53 pm
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
14-10-25 11:19 am
Mangalore Correspondent
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm