ಬ್ರೇಕಿಂಗ್ ನ್ಯೂಸ್
27-01-23 12:47 pm Source: Vijayakarnataka ಕ್ರೀಡೆ
ಕಳೆದ ಮೂರು ವರ್ಷಗಳಿಂದ ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಎಲ್ಲಾ ಸ್ವರೂಪದಲ್ಲಿಯೂ ಫಾರ್ಮ್ ಕಳೆದುಕೊಂಡು ಸಾಕಷ್ಟು ತೊಂದರೆ ಅನುಭವಿಸಿದ್ದರು. 2019ರ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಶತಕ ಸಿಡಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ವಿರಾಟ್ ಕೊಹ್ಲಿ ಟೀಕೆಗಳನ್ನು ಎದುರಿಸಿದ್ದರು.
ಆದರೆ, 2022ರ ಇಂಗ್ಲೆಂಡ್ ಪ್ರವಾಸದ ಬಳಿಕ ವಿರಾಟ್ ಕೊಹ್ಲಿ ವೆಸ್ಟ್ ಇಂಡೀಸ್ ಹಾಗೂ ಜಿಂಬಾಬ್ವೆ ವಿರುದ್ದದ ಪ್ರವಾಸಗಳಿಂದ ವಿಶ್ರಾಂತಿ ಪಡೆದಿದ್ದರು. ಈ ವೇಳೆ ಬಿಸಿಸಿಐ ಅಧ್ಯಕ್ಷರಾಗಿದ್ದ ಸೌರವ್ ಗಂಗೂಲಿ ಅವರು ವಿರಾಟ್ ಕೊಹ್ಲಿ ವಿರಾಮ ಪಡೆದ ನಂತರ ಫಾರ್ಮ್ಗೆ ಕಮ್ಬ್ಯಾಕ್ ಮಾಡಲಿದ್ದಾರೆಂದು ಹೇಳಿದ್ದರು. ಅದರಂತೆ ವಿರಾಟ್ ಕೊಹ್ಲಿ ಏಷ್ಯಾ ಕಪ್ ಹಾಗೂ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗಳಲ್ಲಿ ಅತ್ಯುತ್ತಮ ಪ್ರದರ್ಶನ ತೋರುವ ಮೂಲಕ ಫಾರ್ಮ್ಗೆ ಮರಳಿದ್ದರು.
ಏಷ್ಯಾ ಕಪ್ ಟೂರ್ನಿಯಲ್ಲಿ ಅಫಘಾನಿಸ್ತಾನ ವಿರುದ್ದದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಚೊಚ್ಚಲ ಟಿ20 ಅಂತಾರಾಷ್ಟ್ರೀಯ ಶತಕವನ್ನು ಸಿಡಿಸಿದ್ದರು. ಈ ಟೂರ್ನಿಯಲ್ಲಿ ಭಾರತ ತಂಡ ಫೈನಲ್ಗೆ ಪ್ರವೇಶಿಸುವಲ್ಲಿ ಎಡವಿದ್ದರೂ ವಿರಾಟ್ ಕೊಹ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದರು.
ನಂತರ, ಇದೇ ಲಯವನ್ನು ಅವರು ಟಿ20 ವಿಶ್ವಕಪ್ ಟೂರ್ನಿಯಲ್ಲಿಯೂ ಮುಂದುವರಿಸಿದ್ದರು. ಈ ಟೂರ್ನಿಯಲ್ಲಿ ಭಾರತ ತಂಡ ಸೆಮಿಫೈನಲ್ ಪಂದ್ಯದಲ್ಲಿ ಸೋತು ಹೊರಬಿದ್ದರೂ, ವಿರಾಟ್ ಕೊಹ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ಅಗ್ರ ಸ್ಥಾನ ಅಲಂಕರಿಸಿದ್ದರು. ಇದೀಗ ಅವರು ಬಾಂಗ್ಲಾದೇಶ ಹಾಗೂ ಶ್ರೀಲಂಕಾ ವಿರುದ್ದದ ಏಕದಿನ ಸರಣಿಗಳಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ತೋರಿದ್ದರು.
ಒಟ್ಟಾರೆ ಸೀಮಿತ ಓವರ್ಗಳ ಸ್ವರೂಪದಲ್ಲಿ ವಿರಾಟ್ ಕೊಹ್ಲಿ ಅತ್ಯುತ್ತಮ ಫಾರ್ಮ್ ಅನ್ನು ಮುಂದುವರಿಸಿದ್ದಾರೆ. ಅವರು ಆಡಿದ ಮೂರು ಇನಿಂಗ್ಸ್ಗಳಿಂದ ಎರಡು ಶತಕ ಸಿಡಿಸಿದ್ದಾರೆ. ಇದೀಗ ಅವರು ಟೆಸ್ಟ್ ಕ್ರಿಕೆಟ್ನಲ್ಲಿ ಶತಕ ಸಿಡಿಸಲು ಎದುರು ನೋಡುತ್ತಿದ್ದಾರೆ. ಫೆಬ್ರವರಿ 9 ರಿಂದ ನಾಗ್ಪುರ್ನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮೊದಲನೇ ಟೆಸ್ಟ್ ಪಂದ್ಯದಲ್ಲಿ ಸೆಣಸಲಿವೆ. ಈ ಸರಣಿಯಲ್ಲಿ ವಿರಾಟ್ ಕೊಹ್ಲಿ ಮೂರಂಕಿ ವೈಯಕ್ತಿಕ ದಾಖಲಿಸಲು ಎದುರು ನೋಡುತ್ತಿದ್ದಾರೆ.
ಈ ಬಗ್ಗೆ ಸ್ಪೋರ್ಟ್ಸ್ ತಕ್ ಜೊತೆ ಮಾತನಾಡಿರುವ ಸೌರವ್ ಗಂಗೂಲಿ, "ಹೌದು ವಿರಾಟ್ ಕೊಹ್ಲಿ ಅತ್ಯುತ್ತಮ ಪ್ರದರ್ಶನ ತೋರುತ್ತಿದ್ದಾರೆ. ಶ್ರೀಲಂಕಾ ಹಾಗೂ ಬಾಂಗ್ಲಾದೇಶ ವಿರುದ್ಧ ಕೊಹ್ಲಿ ತಮ್ಮ ಬ್ಯಾಟಿಂಗ್ನಲ್ಲಿ ಪ್ರಾಬಲ್ಯ ಸಾಧಿಸಿದ್ದರು. ಆದರೆ, ಅವರು ಟೆಸ್ಟ್ ಕ್ರಿಕೆಟ್ನಲ್ಲಿ ಇನ್ನಷ್ಟು ಸುಧಾರಣೆ ಕಂಡುಕೊಳ್ಳಬೇಕಾಗಿದೆ. ಏಕೆಂದರೆ ಆಸ್ಟ್ರೇಲಿಯಾ ವಿರುದ್ದದ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಗೆ ಭಾರತ ತಂಡದ ಪಾಲಿಗೆ ನಿರ್ಣಾಯಕವಾಗಿದೆ," ಎಂದರು.
"ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಮುಂಬರುವ ಟೆಸ್ಟ್ ಸರಣಿ ಅತ್ಯಂತ ಸ್ಪರ್ಧಾತ್ಮಕವಾಗಿ ಕೂಡಿರುತ್ತದೆ ಎಂದು ನಾನು ಭಾವಿಸುತ್ತೇನೆ. ಎರಡೂ ತಂಡಗಳು ಕೂಡ ಅತ್ಯಂತ ಬಲಿಷ್ಠವಾಗಿವೆ. ಹಾಗಾಗಿ ಎರಡನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗುವ ಸಾಧ್ಯತೆ ಇದೆ," ಎಂದು ಸೌರವ್ ಗಂಗೂಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Ind Vs Aus He Will Have To Improve In Tests Sourav Gangulys Challenge For Kohli Ahead Of India Vs Australia Series.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm