ಬ್ರೇಕಿಂಗ್ ನ್ಯೂಸ್
14-02-23 02:10 pm Source: news18 ಕ್ರೀಡೆ
ಮಹಿಳಾ ಐಪಿಎಲ್ 2023ರ ಮೊದಲ ಆವೃತ್ತಿಯ ಆಟಗಾರರ ಹರಾಜು ಪ್ರಕ್ರಿಯೆಯಲ್ಲಿ ಟೀಂ ಇಂಡಿಯಾ ಆಟಗಾರ್ತಿ ಸ್ಮೃತಿ ಮಂಧಾನ ಬರೋಬ್ಬರಿ 3.40 ಕೋಟಿ ರೂಪಾಯಿಗೆ ಆರ್ಸಿಬಿ ಪಾಲಾಗಿದ್ದಾರೆ. ಬಿಡ್ಡಿಂಗ್ ವೇಳೆ ಮುಂಬೈ ಇಂಡಿಯನ್ಸ್ ಹಾಗೂ ಬೆಂಗಳೂರು ರಾಯಲ್ ಚಾಲೆಂಜರ್ಸ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟ ಕಾರಣ ಭಾರೀ ಮೊತ್ತ ಪಡೆದುಕೊಂಡಿದ್ದಾರೆ.
ಸ್ಮೃತಿ ಮಂಧಾನ ಮೂಲ ಬೆಲೆ 50 ಲಕ್ಷ ರೂಪಾಯಿ ನಿಗದಿ ಮಾಡಲಾಗಿತ್ತು. ಸದ್ಯ ಅವರು ಆರ್ಸಿಬಿ ಪಾಲಾಗಿರುವ ಕಾರಣ ಅವರೇ ಆರ್ಸಿಬಿ ತಂಡವನ್ನು ಮುನ್ನಡೆಸಲಿದ್ದಾರೆ ಎನ್ನಲಾಗಿದೆ. ಈ ನಡುವೆ ಪಾಕಿಸ್ತಾನ ತಂಡ ಬಾಬರ್ ಆಜಮ್ ಅವರನ್ನು ಕ್ರಿಕೆಟ್ ಅಭಿಮಾನಿಗಳು ಸಖತ್ ಟ್ರೋಲ್ ಮಾಡುತ್ತಿದ್ದಾರೆ. ಬಾಬರ್ ಆಜಮ್ ಟ್ರೋಲ್ ಆಗಲು ಕಾರಣವೇನು ಎಂದು ನೋಡುವುದಾದರೆ, ಬಾಬರ್ ಆಜಮ್ ಪಾಕಿಸ್ತಾನ್ ಪ್ರೀಮಿಯರ್ ಲೀಗ್ ಅವರು ಟೂರ್ನಿಯಲ್ಲಿ ಮಾರಾಟವಾಗಿದ್ದ ಮೊತ್ತಕ್ಕಿಂತ ಎರಡು ಪಟ್ಟು ಮೊತ್ತಕ್ಕೆ ಸ್ಮೃತಿ ಮಂಧಾನ ಬಿಡ್ ಆಗಿದ್ದಾರೆ. ಇದರಿಂದ ಅಭಿಮಾನಿಗಳು ಬಾಬರ್ ಆಜಮ್ ಮತ್ತು ಪಾಕಿಸ್ತಾನ ಕ್ರಿಕೆಟ್ ಮಂಡಳಿಯನ್ನು ಸಖತ್ ಟ್ರೋಲ್ ಮಾಡ್ತಿದ್ದಾರೆ.
ಇತ್ತ ಸ್ಮೃತಿ ಮಂಧಾನ ದೊಡ್ಡ ಮೊತ್ತಕ್ಕೆ ಬಿಡ್ ಆಗುತ್ತಿದ್ದಂತೆ ಟೀಂ ಇಂಡಿಯಾ ಆಟಗಾರರು ಕುಣಿದಾಡಿ ಸಂಭ್ರಮಿಸಿದ್ದಾರೆ. ಮುಂಬೈನಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ ಹರಾಜು ಪ್ರಕ್ರಿಯೆಯನ್ನು ಟೀಂ ಇಂಡಿಯಾ ಆಟಗಾರ ದಕ್ಷಿಣ ಆಫ್ರಿಕಾದಲ್ಲಿ ವೀಕ್ಷಿಸಿದ್ದಾರೆ. ಸ್ಮೃತಿ ಮಂಧಾನ ಈ ವೇಳೆ ಟೀಂ ಇಂಡಿಯಾ ಕ್ಯಾಪ್ಟನ್ ಹರ್ಮನ್ ಪ್ರೀತ್ ಕೌರ್ ಅವರನ್ನು ತಬ್ಬಿ ಸಂಭ್ರಮಿಸಿದ್ದಾರೆ.
ಟೀಂ ಇಂಡಿಯಾ ಉಪನಾಯಕಿಯಾಗಿ ಸ್ಮೃತಿ ಮಂಧಾನ ಅನುಭವ ಹೊಂದಿದ್ದು, ಆರ್ಸಿಬಿ ಫ್ರಾಂಚೈಸಿಗಳು ತಂಡ ನಾಯಕತ್ವಕ್ಕಾಗಿಯೇ ಸ್ಮೃತಿ ಅವರನ್ನು ಖರೀದಿ ಮಾಡಿದ್ದಾರೆ. ಉಳಿದಂತೆ ಮಹಿಳಾ ಪ್ರೀಮಿಯರ್ ಲೀಗ್ನಲ್ಲಿ 22 ಪಂದ್ಯಗಳು ನಡೆಯಲಿದ್ದು, ಎಲ್ಲಾ ಪಂದ್ಯಗಳು ಮುಂಬೈನ ಬ್ರೆಬನ್ ಸ್ಟೇಡಿಯಂ ಮತ್ತು ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆಯಲಿದೆ.
ಮೊದಲ ಮಹಿಳಾ ಐಪಿಎಲ್ ಆವೃತ್ತಿ ಮಾರ್ಚ್ 4ರಿಂದ ಆರಂಭವಾಗಲಿದ್ದು, ಗ್ರೂಪ್ ಸ್ಟೇಜ್ ಬಳಿಕ ಮೂರು ಆಗ್ರ ತಂಡಗಳು ಸೆಮಿಸ್ ಪ್ರವೇಶ ಮಾಡಲಿದೆ. ಆ ಬಳಿಕ ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದ ತಂಡ ಅಂಕಪಟ್ಟಿಯಲ್ಲಿ ನಂಬರ್ ಒನ್ ಸ್ಥಾನದಲ್ಲಿರುವ ತಂಡದೊಂದಿಗೆ ಫೈನಲ್ ಆಡಲಿದೆ.
ಆರ್ಸಿಬಿ ಸಂಪೂರ್ಣ ತಂಡ: ಸ್ಮೃತಿ ಮಂಧಾನ, ರಿಚಾ ಘೋಷ್, ಎಲ್ಲಿಸ್ ಪೆರ್ರಿ, ರೇಣುಕಾ ಸಿಂಗ್, ಸೋಫಿ ಡಿವೈನ್, ಎರಿನ್ ಬರ್ನ್ಸ್, ದಿಶಾ ಕಸತ್, ಇಂದ್ರಾಣಿ ರಾಯ್, ಶ್ರೇಯಾಂಕಾ ಪಾಟೀಲ್, ಕನಿಕಾ ಅಹುಜಾ, ಆಶಾ ಶೋಭನಾ, ಹೀದರ್ ನೈಟ್, ಡೇನ್ ವ್ಯಾನ್ ನೀಕರ್ಕ್, ಪೊನಮ್ ಕೆ ಬೋಸೆಮ್, ಕೋಮಲ್ ಝಂಜರ್, ಮೇಗನ್ ಶಟ್, ಸಹನಾ ಪವಾರ್.
Babar Azam and PCB trolled as Smriti Mandhana Gets RS 3 .40 crore in WPL Auction.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm