ಬ್ರೇಕಿಂಗ್ ನ್ಯೂಸ್
23-02-23 02:05 pm Source: news18 ಕ್ರೀಡೆ
ಮೊದಲ ಸೀಸನ್ನಲ್ಲಿ ಯಾವುದೇ ನಿರೀಕ್ಷೆಯಿಲ್ಲದೆ ಆಡಿದ ಗುಜರಾತ್ ಟೈಟಾನ್ಸ್ ಐಪಿಎಲ್ 2022ರ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ತಂಡ ಅದ್ಭುತ ಪ್ರದರ್ಶನ ನೀಡಿತು. ಐಪಿಎಲ್ 2023 ಪ್ರಾರಂಭವಾಗಲು ಇನ್ನು ಒಂದು ತಿಂಗಳು ಬಾಕಿ ಉಳಿದಿದೆ. ಮಾರ್ಚ್ 31 ರಿಂದ ಐಪಿಎಲ್ ಲೀಗ್ ಆರಂಭವಾಗಲಿದೆ. ಬಿಸಿಸಿಐ ಈಗಾಗಲೇ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.
ಕಳೆದ ಋತುವಿನಲ್ಲಿ ಗುಜರಾತ್ ಟೈಟಾನ್ಸ್ ಚಾಂಪಿಯನ್ ಆಗಲು ಹಾರ್ದಿಕ್ ಪಾಂಡ್ಯ ನಾಯಕತ್ವದ ಜೊತೆಗೆ ದಕ್ಷಿಣ ಆಫ್ರಿಕಾದ ಸ್ಟಾರ್ ಡೇವಿಡ್ ಮಿಲ್ಲರ್ ಕೂಡ ಕಾರಣ. ಫಿನಿಶರ್ ಆಗಿ ಅವರು ಅದ್ಭುತ ಪ್ರದರ್ಶನ ನೀಡಿದರು. ಇತ್ತೀಚೆಗೆ, ಮಿಲ್ಲರ್ ಪಾಕಿಸ್ತಾನ್ ಸೂಪರ್ ಲೀಗ್ 2023ರಲ್ಲಿ ಮುಲ್ತಾನ್ ಸುಲ್ತಾನ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಈ ವೇಳೆ ಮುಲ್ತಾನ್ ಸುಲ್ತಾನ್ ತಂಡ ಇಸ್ಲಾಮಾಬಾದ್ ಯುನೈಟೆಡ್ ತಂಡವನ್ನು 52 ರನ್ ಗಳಿಂದ ಸೋಲಿಸಿತು.


ಈ ಯಶಸ್ಸಿನಲ್ಲಿ ಮಿಲ್ಲರ್ ಪ್ರಮುಖ ಪಾತ್ರ ವಹಿಸಿದರು. ಅವರು ಕೇವಲ 25 ಎಸೆತಗಳಲ್ಲಿ 52 ರನ್ ಗಳಿಸಿದರು. ಇದರಲ್ಲಿ 3 ಬೌಂಡರಿ ಹಾಗೂ 4 ಸಿಕ್ಸರ್ಗಳು ಸೇರಿದ್ದವು. ಮಿಲ್ಲರ್ ಅವರ ಕಿಲ್ಲರ್ ಇನ್ನಿಂಗ್ಸ್ನಿಂದ ಮುಲ್ತಾನ್ ತಂಡ 20 ಓವರ್ಗಳಲ್ಲಿ 4 ವಿಕೆಟ್ಗೆ 190 ರನ್ ಗಳಿಸಿತು. ಬಳಿಕ ಇಸ್ಲಾಮಾಬಾದ್ 17.5 ಓವರ್ಗಳಲ್ಲಿ 138 ರನ್ಗಳಿಗೆ ಆಲೌಟಾಯಿತು. ರುಸ್ಸಿ ವ್ಯಾನ್ ಡೆರ್ ಡ್ಯುಸೆನ್ 49 ರನ್ ಗಳಿಸಿದರು. ಮುಲ್ತಾನ್ ಬೌಲರ್ ಆಗಿ ಅಬ್ಬಾಸ್ 4 ವಿಕೆಟ್ ಪಡೆದರು.



ಸದ್ಯದಲ್ಲೇ ಆರಂಭವಾಗಲಿರುವ ಐಪಿಎಲ್ 16ನೇ ಸೀಸನ್ಗೂ ಮುನ್ನ ಮಿಲ್ಲರ್ ಅವರ ಈ ಭರ್ಜರಿ ಆಟ ಗುಜರಾತ್ ತಂಡಕ್ಕೆ ಹೊಸ ಚೈತನ್ಯವನ್ನು ಮೂಡಿಸಿದೆ. ಕಳೆದ ಐಪಿಎಲ್ನಿಂದಲೂ ಮಿಲ್ಲರ್ ಸೂಪರ್ ಫಾರ್ಮ್ನಲ್ಲಿದ್ದರು. ಹಾಲಿ ಚಾಂಪಿಯನ್ ಆಗಿ ಪ್ರವೇಶಿಸುತ್ತಿರುವ ಗುಜರಾತ್ ಟೈಟಾನ್ಸ್ ತನ್ನ ಮೊದಲ ಪಂದ್ಯದಲ್ಲಿ ನಾಲ್ಕು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯ ಮಾರ್ಚ್ 31 ರಂದು ಅಹಮದಾಬಾದ್ ಮೈದಾನದಲ್ಲಿ ನಡೆಯಲಿದೆ.
IPL 2023 David Miller of Gujarat Titans batted Brilliantly in the PSL League.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm