ಬ್ರೇಕಿಂಗ್ ನ್ಯೂಸ್
25-02-23 01:17 pm Source: news18 ಕ್ರೀಡೆ
ಇಂಡಿಯನ್ ಪ್ರೀಮಿಯರ್ ಲೀಗ್ (IPL) 2023 ಸೀಸನ್ಗೆ ಕ್ಷಣಗಣನೆ ಆರಂಭವಾಗಿದೆ. ಐಪಿಎಲ್ 16ನೇ ಸೀಸನ್ ಮಾರ್ಚ್ 31ರಿಂದ ಮೇ 28ರ ವರೆಗೆ ನಡೆಯಲಿದೆ. ಬಿಸಿಸಿಐ ಈಗಾಗಲೇ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದೇ ಸಮಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡದ ಹೊಸ ನಾಯಕನನ್ನು ಘೋಷಿಸಿದೆ. ಇತ್ತೀಚೆಗೆ ಮುಕ್ತಾಯಗೊಂಡ ದಕ್ಷಿಣ ಆಫ್ರಿಕಾ 20 ಲೀಗ್ನಲ್ಲಿ, ಸನ್ರೈಸರ್ಸ್ ಈಸ್ಟರ್ನ್ ಕೇಪ್ಗೆ ನಾಯಕ ಮಾರ್ಕ್ರಾಮ್ ಅವರಿಗೆ ಎಸ್ಆರ್ಎಚ್ ನಾಯಕತ್ವ ನೀಡಿದೆ.
ಸನ್ ರೈಸರ್ಸ್ ಹೈದರಾಬಾದ್ ಅಭಿಮಾನಿಗಳಿಗೆ ಮತ್ತೊಂದು ಸಂತಸದ ಸುದ್ದಿ. ಇಂಗ್ಲೆಂಡ್ನ ಪವರ್ ಹಿಟರ್ ಹ್ಯಾರಿ ಬ್ರೂಕ್ ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್ ಮಾಡಿದ್ದಾರೆ. 24 ಬೌಂಡರಿ ಹಾಗೂ 5 ಸಿಕ್ಸರ್ಗಳ ಸಹಿತ ಎದುರಾಳಿ ಬೌಲರ್ಗಳ ಬೆವರಿಳಿಸಿದ್ದಾರೆ. ಕಿವೀಸ್ ವಿರುದ್ಧದ ಎರಡನೇ ಟೆಸ್ಟ್ ನಲ್ಲಿ ಬ್ರೂಕ್ ಅವರು ಕೇವಲ 169 ಎಸೆತಗಳಲ್ಲಿ 184 ರನ್ ಗಳಿಸಿ ಅಜೇಯರಾಗುಳಿದರು. ಮೊದಲ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್ 3 ವಿಕೆಟ್ಗೆ 315 ರನ್ ಗಳಿಸಲು ನೆರವಾದರು.
ಐಪಿಎಲ್ಗೆ ಮುಂಚಿತವಾಗಿ, ಬ್ರೂಕ್ ಅವರ ಈ ಭರ್ಜರಿ ಬ್ಯಾಟಿಂಗ್ ಸನ್ರೈಸರ್ಸ್ ಹೈದರಾಬಾದ್ಗೆ ಧನಾತ್ಮಕವಾಗಿದೆ. ಕಳೆದ ವರ್ಷ ಡಿಸೆಂಬರ್ ನಲ್ಲಿ ನಡೆದ ಮಿನಿ ಹರಾಜಿನಲ್ಲಿ ಸನ್ ರೈಸರ್ಸ್ ರೂ.13.25 ಕೋಟಿಗೆ ಬ್ರೂಕ್ ಅವರನ್ನು ಖರೀದಿಸಿತ್ತು. ಬ್ರೂಕ್ ಇತರ ಇಂಗ್ಲೆಂಡ್ ಆಟಗಾರರಂತೆ ಅಲ್ಲ. ಸ್ಪಿನ್ ಆಡುವುದರಲ್ಲಿ ನಿಸ್ಸಿಮರು. ಅದಕ್ಕಾಗಿಯೇ ಉಪಖಂಡದ ಪಿಚ್ಗಳಲ್ಲಿ ಬ್ರೂಕ್ ಸಿಡಿಯುತ್ತಿದ್ದಾರೆ. ಕಳೆದ ವರ್ಷ ನಡೆದ ಟಿ20 ವಿಶ್ವಕಪ್ಗೂ ಮುನ್ನ ಪಾಕಿಸ್ತಾನ ಪ್ರವಾಸ ಮಾಡಿದ್ದರು.
ಬ್ರೂಕ್ ಐಪಿಎಲ್ನಲ್ಲಿ ಇದೇ ರೇಂಜ್ನಲ್ಲಿ ಆಡಿದರೆ ಸನ್ರೈಸರ್ಸ್ ಹೈದರಾಬಾದ್ಗೆ ವರದಾನವಾಗಲಿದೆ. ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್, ರಾಹುಲ್ ತ್ರಿಪಾಠಿ, ಬ್ರೂಕ್ ಮತ್ತು ವಾಷಿಂಗ್ಟನ್ ಸುಂದರ್ ಅವರೊಂದಿಗೆ ಹೈದರಾಬಾದ್ ಬ್ಯಾಟಿಂಗ್ ಬಲಿಷ್ಠವಾಗಿದೆ. ಬೌಲಿಂಗ್ ನಲ್ಲಿ ಭುವನೇಶ್ವರ್ ಕುಮಾರ್, ನಟರಾಜನ್, ಉಮ್ರಾನ್ ಮಲಿಕ್ ಸಿಡಿಯಲು ಸಿದ್ಧರಾಗಿದ್ದಾರೆ. ಅವರ ಜೊತೆಗೆ ಜಾನ್ಸೆನ್ ಮತ್ತು ಫಾರೂಕಿ ಕೂಡ ಸೇರಿಕೊಳ್ಳಲಿದ್ದಾರೆ. ಸ್ಪಿನ್ ವಿಭಾಗದಲ್ಲಿ ರಶೀದ್ ತಂಡವನ್ನು ಮುನ್ನಡೆಸಲಿದ್ದಾರೆ.
IPL 2023 Sunrisers Hyderabad batter Harry brook hit 184 Runs New Zealand in 1st Test.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm