ಬ್ರೇಕಿಂಗ್ ನ್ಯೂಸ್
28-02-23 12:53 pm Source: news18 ಕ್ರೀಡೆ
ನಾಳೆಯಿಂದ ಇಂದೋರ್ನಲ್ಲಿ ಆರಂಭವಾಗಲಿರುವ ಮೂರನೇ ಟೆಸ್ಟ್ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಸೆಣಸಾಡಲಿವೆ. 3ನೇ ಪಂದ್ಯವು ಭಾರತಕ್ಕೆ ಅತ್ಯಂತ ಮಹತ್ವದ್ದಾಗಿದ್ದು, ಈ ಪಂದ್ಯ ಗೆದ್ದರೆ ಸರಣಿ ಜಯದ ಜೊತೆ ಐಸಿಸಿ ಶ್ರೇಯಾಂಕದಲ್ಲಿಯೂ ಅಗ್ರಸ್ಥಾನಕ್ಕೆ ತಲುಪಲಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4 ಪಂದ್ಯಗಳ ಬಾರ್ಡರ್ ಗವಾಸ್ಕರ್ ಟ್ರೋಫಿಯ ಸರಣಿಯಲ್ಲಿ ಭಾರತ ತಂಡ ಈಗಾಗಲೇ 2-0 ಮುನ್ನಡೆ ಸಾಧಿಸಿದೆ. ನಾಳೆಯಿಂದ ಸರಣಿಯ 3ನೇ ಪಂದ್ಯ ಆರಂಭವಾಗಲಿದೆ.
ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಮೊದಲ ಬಾರಿಗೆ ಟೆಸ್ಟ್ ಸ್ವರೂಪದಲ್ಲಿ ಮುಖಾಮುಖಿಯಾಗಲಿವೆ. ಇಲ್ಲಿ ಆತಿಥೇಯರು ಇಲ್ಲಿಯವರೆಗೆ ಎರಡು ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಆದರೆ ಈ ಮೈದಾನದಲ್ಲಿ ಭಾರತ ತಂಡ ಹೆಚ್ಚು ಪ್ರಾಭಲ್ಯ ಸಾಧಿಸಿದೆ. ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿನ ಪಿಚ್ಗಳು ಸಾಮಾನ್ಯವಾಗಿ ಸಣ್ಣ ಸ್ವರೂಪದಲ್ಲಿ ಬ್ಯಾಟಿಂಗ್ ಸ್ನೇಹಿಯಾಗಿರುತ್ತವೆ. ಆದರೆ ಉಪ-ಖಂಡದ ಪಿಚ್ಗಳಂತೆ ಇಲ್ಲಿಯೂ ಟೆಸ್ಟ್ ಪಂದ್ಯವು ಮುಂದುವರೆದಂತೆ ಸ್ಪಿನ್ ಬೌಲರ್ಗಳಿಗೆ ಸಹಾಯ ಮಾಡುತ್ತದೆ. ಅಶ್ವಿನ್ ಮೈದಾನದಲ್ಲಿ ಉತ್ತಮ ದಾಖಲೆ ಹೊಂದಿದ್ದಾರೆ.
ಇಂದೋರ್ ಹವಾಮಾನ ನೋಡುವುದಾರೆ, ಮಾರ್ಚ್ 1ರಿಂದ 5ರ ವರೆಗೂ ಬಿಸಿ ವಾತಾವರಣವಿರುತ್ತದೆ. ಗರಿಷ್ಠ ತಾಪಮಾನವು 36 C ವರೆಗೆ ಮತ್ತು ಸರಾಸರಿ ತಾಪಮಾನ 35 C ಗೆ ಇರುತ್ತದೆ. ಯಾವುದೇ ಮಳೆಯ ಸೂಚನೆಯಿಲ್ಲ. ಹಾಗಾಗಿ, ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಟೆಸ್ಟ್ ಪಂದ್ಯ ಹವಾಮಾನದಿಂದ ಯಾವ ತೊಂದರೆಯಿಲ್ಲ. ಭಾರತ ಮತ್ತು ಆಸೀಸ್ ನಡುವಿನ ಈ ಪಂದ್ಯವನ್ನು ನೀವು ಡಿಸ್ನಿ ಪ್ಲಸ್ ಹಾಟ್ ಸ್ಟಾರ್ ಮತ್ತು ಸ್ಟಾರ್ ಸ್ಪೋರ್ಟ್ಸ್ನ ಎಲ್ಲಾ ಚಾನಲ್ಗಳ್ಲಲಿ ನೇರ ಪ್ರಸಾರವನ್ನು ವೀಕ್ಷಿಸಬಹುದು. ಪಂದ್ಯವು ಭಾರತೀಯ ಕಾಲಮಾನ ಪ್ರಕಾರ ಬೆಳಗ್ಗೆ 9 ಗಂಟೆಯಿಂದ ಆರಂಭವಾಗಲಿದೆ.
ಭಾರತ ಸಂಭಾವ್ಯ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶ್ರೇಯಸ್ ಅಯ್ಯರ್. ಆಸ್ಟ್ರೇಲಿಯಾ ಸಂಭಾವ್ಯ ಪ್ಲೇಯಿಂಗ್ 11: ಸ್ಟೀವ್ ಸ್ಮಿತ್ (ನಾಯಕ), ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಪೀಟರ್ ಹ್ಯಾಂಡ್ಸ್ಕಾಂಬ್, ಟ್ರಾವಿಸ್ ಹೆಡ್, ಉಸ್ಮಾನ್ ಖ್ವಾಜಾ, ಮಾರ್ನಸ್ ಲ್ಯಾಬುಶೇನ್, ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಮ್ಯಾಥ್ಯೂ ಕುಹ್ನೆಮನ್, ಲ್ಯಾನ್ಸ್ ಮೋರಿಸ್.
India vs Australia 3rd test playing 11 and Indore Holkar stadium pitch report.
14-03-25 11:11 pm
Bangalore Correspondent
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
Ranya Rao Gold Smuggling, Ips Ramchandra Rao:...
14-03-25 02:20 pm
ಕುದುರೆಮುಖ ರಾಷ್ಟ್ರೀಯ ಅರಣ್ಯಕ್ಕೆ ಬೆಂಕಿ ; ಸ್ಥಳೀಯರ...
13-03-25 02:56 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
14-03-25 10:35 pm
Mangalore Correspondent
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
Mangalore tulu Artist Vivek Madur death: ಕಲಾ...
14-03-25 11:02 am
Mangalore Accident, Kapikad, Murder: ನೆರೆಮನೆ...
13-03-25 09:20 pm
PFI, Mangalore Crime, Police: ಪಿಎಫ್ಐ ಮುಖಂಡರಿಗ...
13-03-25 08:46 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm