ಬ್ರೇಕಿಂಗ್ ನ್ಯೂಸ್
14-03-23 01:13 pm Source: news18 ಕ್ರೀಡೆ
ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯ ಡ್ರಾದೊಂದಿಗೆ ಅಂತ್ಯಗೊಂಡಿದೆ. ಆದರೆ ನಾಲ್ಕನೇ ಟೆಸ್ಟ್ ಪಂದ್ಯದ ಫಲಿತಾಂಶಕ್ಕೂ ಮುನ್ನವೇ ಟೀಂ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಫೈನಲ್ಗೆ ತಲುಪಿತ್ತು. ಟೀಂ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ 2023 ಫೈನಲ್ ಪ್ರವೇಶಿಸಿದೆ. ಅಹಮದಾಬಾದ್ನಲ್ಲಿ ನಡೆದ ನಾಲ್ಕನೇ ಟೆಸ್ಟ್ನಲ್ಲಿ ಗೆಲುವು ಸಾಧಿಸದಿದ್ದರೂ ಟೀಂ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ಗೆ ಅರ್ಹತೆ ಪಡೆದುಕೊಂಡಿದೆ.
ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್ನಲ್ಲಿ ಆರಂಭದ ಸಂದರ್ಭದಲ್ಲಿ ಟೀಂ ಇಂಡಿಯಾ ಟೆಸ್ಟ್ನಲ್ಲಿ ಗೆದ್ದರೆ ಮಾತ್ರ ಇತರ ತಂಡಗಳ ಫಲಿತಾಂಶಕ್ಕೆ ಕಾಯದೆ ನೇರವಾಗಿ ಫೈನಲ್ಗೆ ಅರ್ಹತೆ ಪಡೆದುಕೊಳ್ಳುತ್ತಿತ್ತು. ಒಂದೊಮ್ಮೆ ಟೆಸ್ಟ್ನಲ್ಲಿ ಭಾರತ ಸೋತರೆ ಅಥವಾ ಡ್ರಾ ಮಾಡಿಕೊಂಡರೆ ತಂಡ ಫೈನಲ್ ತಲುಪುವ ಅವಕಾಶಕ್ಕಾಗಿ ಶ್ರೀಲಂಕಾ ಮತ್ತು ನ್ಯೂಜಿಲೆಂಡ್ ನಡುವಿನ ಸರಣಿಯ ಫಲಿತಾಂಶವನ್ನು ಅವಲಂಬಿಸಬೇಕಿತ್ತು. ಇಂತಹ ಸಂದರ್ಭದಲ್ಲಿ ಟೀಂ ಇಂಡಿಯಾ ಫೈನಲ್ ತಲುಪಬೇಕಾದರೆ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯನ್ನು ಕಿವೀಸ್ ಗೆಲ್ಲಲೇಬೇಕಿತ್ತು. ಇಲ್ಲವೇ ಡ್ರಾದಲ್ಲಿ ಅಂತ್ಯಗೊಳಿಸಬೇಕಿತ್ತು.

ಆದರೆ, ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ಗೆಲುವು ಸಾಧಿಸಿದೆ. ಕೇನ್ ವಿಲಿಯಮ್ಸನ್ ಅವರ 121 ರನ್ ಗಳ ವೀರೋಚಿತ ಶತಕ ನೆರವಿನೊಂದಿಗೆ ಕಿವೀಸ್ ಗೆಲುವು ಪಡೆದುಕೊಂಡಿದೆ. ಈ ರೋಚಕ ಟೆಸ್ಟ್ನಲ್ಲಿ ಶ್ರೀಲಂಕಾ ವಿರುದ್ಧ ಕಿವೀಸ್ 2 ವಿಕೆಟ್ಗಳ ಜಯ ಸಾಧಿಸಿದೆ.

285 ರನ್ ಗಳ ಗುರಿಯೊಂದಿಗೆ ಬ್ಯಾಟಿಂಗ್ ಗೆ ಇಳಿದ ಕಿವೀಸ್ ತಂಡವನ್ನು ಅಸಿತಾ ಫೆರ್ನಾಂಡೋ ನಡುಗಿಸಿದರು. ಅದರೊಂದಿಗೆ ಒಂದು ಹಂತದಲ್ಲಿ ಸುಲಭವಾಗಿ ಗೆಲ್ಲುವಂತಿದ್ದ ಕಿವೀಸ್ ದಿಢೀರ್ ಕುಸಿದು ಬಿದ್ದಿತು. ಆದರೆ ಮಾಜಿ ನಾಯಕ ಕೇನ್ ವಿಲಿಯಮ್ಸನ್ ವೀರೋಚಿತ ಹೋರಾಟದ ಮೂಲಕ ಕಿವೀಸ್ ತಂಡಕ್ಕೆ ಗೆಲುವು ತಂದುಕೊಟ್ಟರು. ಇನ್ನೂ ಶ್ರೀಲಂಕಾ ಎರಡನೇ ಟೆಸ್ಟ್ ಗೆದ್ದರೂ ಸರಣಿ ಡ್ರಾದಲ್ಲಿ ಅಂತ್ಯವಾಗಲಿದೆ. ಇದರೊಂದಿಗೆ ಭಾರತ ಫೈನಲ್ ತಲುಪಲಿದೆ. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಆಸ್ಟ್ರೇಲಿಯಾ ಈಗಾಗಲೇ ಫೈನಲ್ ತಲುಪಿದೆ.

ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ ಈ ವರ್ಷದ ಜೂನ್ನಲ್ಲಿ ನಡೆಯಲಿದೆ. ಓವಲ್ ಮೈದಾನದಲ್ಲಿ ನಡೆಯಲಿರುವ ಪಂದ್ಯ ಜೂನ್ 7ರಿಂದ ಆರಂಭವಾಗಲಿದೆ. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಭಾರತ ಸತತ ಎರಡನೇ ಬಾರಿಗೆ ಫೈನಲ್ ತಲುಪಿದೆ. 2021ರ ವಿಶ್ವ ಚಾಂಪಿಯನ್ಶಿಪ್ ಫೈನಲ್ನಲ್ಲಿ ಟೀಂ ಇಂಡಿಯಾ, ಕಿವೀಸ್ ಎದುರು ಸೋಲುಂಡು ನಿರಾಸೆ ಅನುಭವಿಸಿತ್ತು.
ಈ ವರ್ಷದ ಫೈನಲ್ನಲ್ಲಿ ಟೀಂ ಇಂಡಿಯಾ, ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ. ಇನ್ನು, ಇಂದು ಅಂತ್ಯವಾದ ಟೀಂ ಇಂಡಿಯಾ ಹಾಗೂ ಭಾರತದ ನಡುವಿನ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 2-1 ಅಂತರದಲ್ಲಿ ಸರಣಿಯನ್ನು ಕೈವಶ ಮಾಡಿಕೊಂಡಿದೆ. ಇದರೊಂದಿಗೆ ಓವಲ್ ಕ್ರೀಡಾಂಗಣದಲ್ಲೂ ಟೀಂ ಇಂಡಿಯಾ ಗೆಲ್ಲುವ ನೆಚ್ಚಿನ ತಂಡ ಎನಿಸಿಕೊಂಡಿದೆ. ಆದರೆ ಆಸ್ಟ್ರೇಲಿಯಾ ಪಂದ್ಯದಲ್ಲಿ ಗಟ್ಟಿ ಪೈಪೋಟಿ ನೀಡುವ ನಿರೀಕ್ಷೆ ಇದ್ದು, ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣ ನಿರ್ಮಾಣವಾಗಲಿದೆ ಎಂದರೆ ತಪ್ಪಾಗುವುದಿಲ್ಲ.
India vs Australia india won the border gavaskar trophy 2 1 and india qualify for wtc final.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm