ಬ್ರೇಕಿಂಗ್ ನ್ಯೂಸ್
18-03-23 01:16 pm Source: news18 ಕ್ರೀಡೆ
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಏಕದಿನ ತಂಡದಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಆಗಿ ಆಡುತ್ತಿರುವ ಮಾಜಿ ಉಪನಾಯಕ ಕೆಎಲ್ ರಾಹುಲ್ ಭರ್ಜರಿ ಕಂಬ್ಯಾಕ್ ಮಾಡಿದ್ದಾರೆ. ಕೆಎಲ್ ರಾಹುಲ್ ರವೀಂದ್ರ ಜಡೇಜಾ ಜೊತೆಗೂಡಿ ಟೀಂ ಇಂಡಿಯಾ ಗೆಲುವಿನ ದಡ ಸೇರಿಸಲು ಸಹಾಯಕರಾದರು. ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ 188 ರನ್ಗಳಿಗೆ ಆಲೌಟ್ ಆಗಿತ್ತು. ಮುಂಬೈನಲ್ಲಿ ಕೆಎಲ್ ರಾಹುಲ್ ಮ್ಯಾಚ್ ವಿನ್ನಿಂಗ್ ಇನ್ನಿಂಗ್ಸ್ ಆಡಿದರು. ಒಂದು ಸಮಯದಲ್ಲಿ ಟೀಂ ಇಂಡಿಯಾ ಅತ್ಯಂತ ಸುಲಭದ ಗುರಿಯ ಮುಂದೆಯೂ ಪಂದ್ಯವನ್ನು ಕಳೆದುಕೊಳ್ಳುತ್ತದೆ ಎಂದು ಅನಿಸಿತ್ತು. ಆದರೆ ಕೆಎಲ್ ರಾಹುಲ್ ಅದ್ಭುತ ಆಟ ಭಾರತದ ಗೆಲುವನ್ನು ಖಾತ್ರಿಪಡಿಸಿತು.
ಈ ಅದ್ಭುತ ಇನ್ನಿಂಗ್ಸ್ ಆಧಾರದ ಮೇಲೆ ಕೆಎಲ್ ರಾಹುಲ್ ತಮ್ಮ ಟೀಕಾಕಾರರಿಗೆ ತಕ್ಕ ಉತ್ತರ ನೀಡಿದ್ದಾರೆ. ಕಳಪೆ ಫಾರ್ಮ್ನೊಂದಿಗೆ ಹೋರಾಡಿದ ಕೆಎಲ್ಗೆ ಈ ವರ್ಷದ ಆರಂಭದಲ್ಲಿ ಟಿ 20 ಸ್ವರೂಪದಿಂದ ಹೊರbಂದಿದ್ದರು. ಇದರ ಹೊರತಾಗಿಯೂ, ಅವರು ಟೆಸ್ಟ್ನಲ್ಲಿ ಉಪನಾಯಕರಾಗಿದ್ದರು. ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೊದಲ ಎರಡು ಪಂದ್ಯಗಳಲ್ಲಿ ವಿಫಲವಾದ ನಂತರ ಅವರನ್ನು ಉಪನಾಯಕತ್ವದಿಂದ ತೆಗೆದುಹಾಕಲಾಯಿತು.
ನಂತರ ಉಳಿದ ಎರಡು ಪಂದ್ಯಗಳಲ್ಲಿ ಅವರನ್ನು ಆಡುವ XI ನಿಂದ ಕೈಬಿಡಲಾಯಿತು. ಈಗ ಕೆಎಲ್ಗೆ ತನ್ನನ್ನು ತಾನು ಸಾಬೀತುಪಡಿಸಲು ಏಕದಿನವನ್ನು ಹೊರತುಪಡಿಸಿ ಬೇರೆ ದಾರಿ ಇರಲಿಲ್ಲ. ಏಕದಿನ ಪಂದ್ಯದಲ್ಲೂ ಅವರಿಗೆ ತಂಡದಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಸ್ಥಾನಮಾನ ನೀಡಲಾಗಿತ್ತು. ರಿಷಭ್ ಪಂತ್ ಅನುಪಸ್ಥಿತಿಯಲ್ಲಿ ಅವರಿಗೆ ಈ ಜವಾಬ್ದಾರಿ ನೀಡಲಾಗಿತ್ತು. ಮುಂಬೈ ಏಕದಿನ ಪಂದ್ಯದಲ್ಲಿ ಕೆಎಲ್ ರಾಹುಲ್ ಬ್ಯಾಟಿಂಗ್ ಮಾಡುವಾಗ ಭಾರತದ ಸ್ಕೋರ್ ನಾಲ್ಕು ವಿಕೆಟ್ ನಷ್ಟಕ್ಕೆ 39 ರನ್ ಆಗಿತ್ತು. ಆದರೆ ಈ ವೇಳೆ ರಾಹುಲ್ ಗಟ್ಟಿಯಾಗಿ ನಿಂತು ತಂಡವನ್ನು ಗೆಲುವಿನ ದಡ ಮುಟ್ಟಿಸಿದರು.
ಇಂತಹ ಪರಿಸ್ಥಿತಿಯಲ್ಲಿ ಭಾರತ ತಂಡ ಸಂಕಷ್ಟಕ್ಕೆ ಸಿಲುಕಿತ್ತು. ಸೋಲು ಸ್ಪಷ್ಟವಾಗಿ ಗೋಚರಿಸಿತ್ತು. ಕೆಎಲ್ ಒಂದು ತುದಿಯಲ್ಲಿ ದೃಢವಾಗಿ ನಿಂತು ಬ್ಯಾಟಿಂಗ್ ಮಾಡಿದರು. 25 ರನ್ ಗಳಿಸಿದ ಬೆನ್ನಲ್ಲೇ ನಾಯಕ ಹಾರ್ದಿಕ್ ಪಾಂಡ್ಯ ಕೂಡ ಮಾರ್ಕಸ್ ಸ್ಟೋನಿಸ್ ಎಸೆತದಲ್ಲಿ ಕ್ಯಾಚಿತ್ತು ಔಟಾದರು. ಇದಾದ ಬಳಿಕ ಕೆಎಲ್ ರಾಹುಲ್ ರವೀಂದ್ರ ಜಡೇಜಾ ಜೊತೆಗೂಡಿ ಮ್ಯಾಚ್ ವಿನ್ನಿಂಗ್ ಜೊತೆಯಾಟ ನಡೆಸಿ ಟೀಂ ಇಂಡಿಯಾವನ್ನು ಗೆಲ್ಲಿಸಿದರು.
ಈ ಪಂದ್ಯದಲ್ಲಿ ಕೆಎಲ್ ರಾಹುಲ್ 91 ಎಸೆತಗಳಲ್ಲಿ 75 ರನ್ ಗಳಿಸಿ ಅಜೇಯ ಇನ್ನಿಂಗ್ಸ್ ಆಡಿದ್ದರು. ಅವರ ಬ್ಯಾಟ್ನಿಂದ ಏಳು ಬೌಂಡರಿಗಳು ಮತ್ತು ಒಂದು ಸಿಕ್ಸರ್ ಬಂದವು. ರವೀಂದ್ರ ಜಡೇಜಾ ಕೂಡ 45 ರನ್ಗಳ ಅಜೇಯ ಇನ್ನಿಂಗ್ಸ್ ಆಡಿದರು. ಇವರಿಬ್ಬರ ನಡುವೆ 108 ರನ್ಗಳ ಮುರಿಯದ ಜೊತೆಯಾಟ ಏರ್ಪಟ್ಟಿತು. ಇದರಿಂದಾಗಿ ಭಾರತ ಈ ಪಂದ್ಯವನ್ನು ಐದು ವಿಕೆಟ್ಗಳಿಂದ ಗೆದ್ದುಕೊಂಡಿತು.
ಇನ್ನು, ಕಳೆದ ಒಂದು ತಿಂಗಳಿಂದ ರಾಹುಲ್ ಕಳಫೆ ಫಾರ್ಮ್ನಿಂದ ಇದ್ದರು. ಇದರಿಂದಾಗಿ ಅವರು ಮೊದಲು ಉಪ ನಾಯಕತ್ವದಿಂದ, ಟಿ20 ತಂಡದಿಂದ ಹಾಗೂ ಅಂತಿಮವಾಗಿ ಟೆಸ್ಟ್ ಪಂದ್ಯದಿಂದ ಕೈಬಿಡಲಾಗಿತ್ತು. ಇದರಿಂದಾಗಿ ರಾಹುಲ್ ಮೇಲೆ ಅನೇಕ ಟೀಕಾಕಾರರು ದಾಳಿ ನಡೆಸಿದ್ದರು. ಆದರೆ ಇದೀಗ ಅವರ ಮ್ಯಾಚ್ ವಿನ್ನಿಂಗ್ ಇನ್ನಿಂಗ್ಸ್ನಿಂದ ಎಲ್ಲರಿಗೂ ಸರಿಯಾದ ಉತ್ತರ ನೀಡಿದ್ದಾರೆ.
india vs australia odi kl rahul makes a great comeback.
13-10-25 10:09 pm
HK News Desk
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
D.K. Shivakumar, MLA Munirathna, RSS: ಮುನಿರತ್...
12-10-25 08:05 pm
13-10-25 10:37 pm
HK News Desk
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
Afghan Foreign Minister, Amir Khan Muttaqi: ಮ...
11-10-25 12:52 pm
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
13-10-25 07:47 pm
Udupi Correspondent
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
Honey Bees Attack in Puttur: ಪುತ್ತೂರು ; ಹೆಜ್ಜ...
12-10-25 09:53 pm
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
13-10-25 10:04 pm
Mangalore Correspondent
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm