ಬ್ರೇಕಿಂಗ್ ನ್ಯೂಸ್
25-03-23 01:57 pm Source: news18 ಕ್ರೀಡೆ
ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇಂದು (WPL 2023) ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಯುಪಿ ವಾರಿಯರ್ಸ್ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಯುಪಿ ವಿರುದ್ಧ ಮುಂಬೈ ಬರೋಬ್ಬರಿ 72 ರನ್ ಗಳಿಸುವ ಮೂಲಕ ಫೈನಲ್ಗೆ ಲಗ್ಗೆ ಇಟ್ಟಿದೆ. ಈಗಾಗಲೇ ಡೆಲ್ಲಿ ಕ್ಯಾಪಿಟಲ್ಸ್ ಫೈನಲ್ ಸ್ಥಾನ ಪಡೆದುಕೊಂಡಿದೆ. ಇದೀಗ ಫೈನಲ್ನಲ್ಲಿ ಡೆಲ್ಲಿ ಮತ್ತು ಮುಂಬೈ ತಂಡಗಳು ಅಂತಿಮ ಫೈನಲ್ಗಾಗಿ ಸೆಣಸಾಡಲಿದೆ. ಗೆದ್ದ ತಂಡ ಚೊಚ್ಚಲ ಬಾರಿಗೆ ಮಹಿಳಾ ಐಪಿಎಲ್ ಟ್ರೋಫಿಗೆ ಮುತ್ತಿಕ್ಕಲಿದೆ.


ಟಾಸ್ ಗೆದ್ದ ಯುಪಿ ಮೊದಲು ಬೌಲಿಂಗ್ ಮಾಡಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ತಂಡ ನಿಗದಿತ 20 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 182 ರನ್ ಗಳಿಸಿತು. ಈ ಮೊತ್ತ ಬೆನ್ನಟ್ಟಿದ ಯುಪಿ 17.4 ಓವರ್ನಲ್ಲಿ 110 ರನ್ಗೆ ಆಲೌಟ್ ಆಗುವ ಮೂಲಕ 72 ರನ್ನಿಂದ ಸೋಲನ್ನಪ್ಪಿತು. ಇಸ್ಸಿ ವಾಂಗ್ ಅವರ ಓವರ್ನಲ್ಲಿ ಸತತ ಮೂರು ವಿಕೆಟ್ ಪಡೆಯುವ ಮೂಲಕ ದಾಖಲೆ ಬರೆದಿದ್ದಾರೆ. ಇದರೊಂದಿಗೆ ಲೀಗ್ನ ಮೊದಲ ಹ್ಯಾಟ್ರಿಕ್ ಪಡೆದ ಬೌಲರ್ ಎಂಬ ದಾಖಲೆಯನ್ನು ವಾಂಗ್ ಬರೆದಿದ್ದಾರೆ.


ನೇಟ್ ಸಿವರ್-ಬ್ರಂಟ್ ಅವರ ಭರ್ಜರಿ ಪ್ರದರ್ಶನ ಮತ್ತು ಈಸಿ ವಾಂಗ್ ಅವರ ಹ್ಯಾಟ್ರಿಕ್ ವಿಕೆಟ್ ಮುಂಬೈ ಇಂಡಿಯನ್ಸ್ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವನ್ನು ವಹಿಸಿದರು. ಮುಂಬೈ ಇಂಡಿಯನ್ಸ್ ಪರ ಇಂದು ಇಸ್ಸಿ ವಾಂಗ್ 4 ಓವರ್ ಮಾಡಿ 15 ರನ್ ನೀಡಿ ಪ್ರಮುಖ 4 ವಿಕೆಟ್ ಪಡೆದರು. ಇತ್ತ ಬ್ಯಾಟಿಂಗ್ನಲ್ಲಿ ನ್ಯಾಟ್ ಸಿವರ್-ಬ್ರಂಟ್ 38 ಎಸೆತದಲ್ಲಿ 2 ಸಿಕ್ಸ್ ಮತ್ತು 9 ಪೋರ್ ಮೂಲಕ 72 ರನ್ ಗಳಿಸಿ ಮಿಂಚಿದರು.



ಮುಂಬೈ ಇಂಡಿಯನ್ಸ್: ಹೇಲಿ ಮ್ಯಾಥ್ಯೂಸ್, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ನ್ಯಾಟ್ ಸಿವರ್-ಬ್ರಂಟ್, ಹರ್ಮನ್ಪ್ರೀತ್ ಕೌರ್ (ಕ್ಯಾಪ್ಟನ್), ಅಮೆಲಿಯಾ ಕೆರ್, ಪೂಜಾ ವಸ್ತಕರ್, ಇಸ್ಸಿ ವಾಂಗ್, ಅಮನ್ಜೋತ್ ಕೌರ್, ಹುಮೈರಾ ಕಾಜಿ,ಜಿಂತಿಮಣಿ ಕಲಿತಾ, ಸೈಕಾ ಇಸಾಕ್. ಇನ್ನು, ರವಿವಾರ 26ರಂದು ವುಮೆನ್ಸ್ ಪ್ರೀಮಿಯರ್ ಲೀಗ್ ನ ಫೈನಲ್ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಪ್ರಶಸ್ತಿಗಾಗಿ ಸೆಣಸಾಡಲಿದೆ.
mi vs upw wpl 2023 mumbai indians won by 72 runs.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm