ಬ್ರೇಕಿಂಗ್ ನ್ಯೂಸ್
03-04-23 01:14 pm Source: news18 ಕ್ರೀಡೆ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ (RCB vs MI) ತಂಡಗಳು ಸೆಣಸಾಡಿದವು. ಐಪಿಎಲ್ 16ನೇ ಆವೃತ್ತಿಯ ಮೊದಲ ಪಂದ್ಯವನ್ನೇ ಬೆಂಗಳೂರು ತಂಡ ಗೆದ್ದು ಬೀಗಿದೆ. ಟಾಸ್ ಗೆದ್ದ ಫೀಲ್ಡಿಂಗ್ ಮಾಡಿದ RCB, ಭರ್ಜರಿ ಬೌಲಿಂಗ್ ಮಾಡಿತು. ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ 20 ಓವರ್ನಲ್ಲಿ 7 ವಿಕೆಟ್ ನಷ್ಟಕ್ಕೆ 171 ರನ್ ಗಳಿಸಿತು. ಈ ಟಾರ್ಗೆಟ್ ಬೆನ್ನಟ್ಟಿದ ಆರ್ಸಿಬಿ ತಂಡ 16.2 ಓವರ್ಗೆ 2 ವಿಕೆಟ್ ನಷ್ಟಕ್ಕೆ 172 ರನ್ ಗಳಿಸುವ ಮೂಲಕ ಬರೋಬ್ಬರಿ 8 ವಿಕೆಟ್ಗಳ ಜಯ ದಾಖಲಿಸಿತು.
ಇದೀಗ RCB ಪಾಲಿಗೆ ಕೆಟ್ಟ ಸುದ್ದಿಯೊಂದು ಹೊರಬಿದ್ದಿದೆ. ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಖರೀದಿಸಿದ್ದ ಈ ಆಟಗಾರ ಐಪಿಎಲ್ ಟೂರ್ನಿಯಿಂದ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ. ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ, ರಾಯಲ್ ಚಾಲೆಂಜರ್ಸ್ ವೇಗದ ಬೌಲರ್ ರೀಸ್ ಟೋಪ್ಲೆ ಗಾಯದ ಕಾರಣ ಇಡೀ ಪಂದ್ಯದಿಂದ ಹೊರಗುಳಿದಿದ್ದರು. ಇದೀಗ ಮುಂಬರುವ ಪಂದ್ಯಗಳಲ್ಲಿ ಅವರು ಆಡೋದು ಡೌಟ್ ಅಂತ ಹೇಳಲಾಗುತ್ತಿದೆ.
ಫೀಲ್ಡಿಂಗ್ ವೇಳೆ ಟೋಪ್ಲಿ ಗಾಯಗೊಂಡಿದ್ದರು. ಮಾಧ್ಯಮ ವರದಿಗಳ ಪ್ರಕಾರ, ಭುಜದ ಗಾಯದಿಂದ ಅವರು ಇನ್ನು ಮುಂದೆ ಪಂದ್ಯದ ಭಾಗವಾಗಿರಲು ಸಾಧ್ಯವಾಗುವುದಿಲ್ಲ. ಹೀಗಿರುವಾಗ ಈ ಪಂದ್ಯದ ದೃಷ್ಟಿಯಿಂದ ತಂಡಕ್ಕೆ ದೊಡ್ಡ ಪೆಟ್ಟು ಬಿದ್ದಿದೆ. ಟೋಪ್ಲಿ 2 ಓವರ್ ಬೌಲ್ ಮಾಡಿ 14 ರನ್ ನೀಡಿ 1 ವಿಕೆಟ್ ಪಡೆದಿದ್ದರು.
ಒಂದು ವೇಳೆ ಈ ಬೌಲರ್ ಏನಾದ್ರೂ ಮುಂದಿನ ಪಂದ್ಯಗಳಿಗೆ ಅಲಭ್ಯರಾದ್ರೆ, ಆರ್ಸಿಬಿ ಬೌಲಿಂಗ್ಗೆ ದೊಡ್ಡ ಹೊಡೆತ ಬೀಳುತ್ತೆ ಅಂದ ಕ್ರಿಕೆಟ್ ಅಭಿಮಾನಿಗಳು ಮಾತನಾಡುತ್ತಿದ್ದಾರೆ. ಇನ್ನೂ ಮೊದಲ ಪಂದ್ಯದಲ್ಲಿ ಆರ್ಸಿಬಿ ಅದ್ಭುತ ಪ್ರರ್ದಶನ ನೀಡಿದ್ದು, ಈ ಸಲ ಕಪ್ ಕನ್ಫರ್ಮ್ ನಮ್ದೇ ಅಂತಿದ್ದಾರೆ ಅಭಿಮಾನಿಗಳು. ಈ ಬಾರಿ ತಂಡ ಒಳ್ಳೆ ಕಮ್ಬ್ಯಾಕ್ ಮಾಡಿದ್ದಾರೆ. ಇದು ಹೀಗೆ ಮುಂದುವರೆಯಲಿ ಎಂದು ಅಭಿಮಾನಿಗಳು ಆಶಿಸುತ್ತಿದ್ದಾರೆ.
IPL 2023 reece topley suffers shoulder injury out of the tournament.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm