ಬ್ರೇಕಿಂಗ್ ನ್ಯೂಸ್
04-04-23 01:42 pm Source: news18 ಕ್ರೀಡೆ
218ರನ್ಗಳ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ನಾಯಕ ರಾಹುಲ್ ಮತ್ತು ಕೈಲ್ ಮೇಯರ್ಸ್ ಭರ್ಜರಿ ಆರಂಭ ಒದಗಿಸಿಕೊಟ್ಟರು. ಈ ಜೋಡಿ ಮೊದಲ ವಿಕೆಟ್ 5.3 ಓವರ್ಗಳಲ್ಲಿ 79 ರನ್ ಜೊತೆಯಾಟ ನೀಡಿದರು. 22 ಎಸೆತಗಳಲ್ಲಿ 8 ಬೌಂಡರಿ ಮತ್ತು 2 ಸಿಕ್ಸರ್ ಸಿಡಿಸಿದ್ದ ಮೇಯರ್ಸ್ 53 ರನ್ಗಳಿಸಿ ವಿಕೆಟ್ ಒಪ್ಪಿಸಿದರು. ಇವರು ಮೊದಲ ಪಂದ್ಯದಲ್ಲೂ 73 ರನ್ಗಳಿಸಿದ್ದರು.
ಮೇಯರ್ಸ್ ವಿಕೆಟ್ ಬೀಳುತ್ತಿದ್ದಂತೆ ಲಕ್ನೋ ದಿಢೀರ್ ಕುಸಿತ ಕಂಡಿತು. 3ನೇ ಕ್ರಮಾಂಕದಲ್ಲಿ ಬಂದ ದೀಪಕ್ ಹೂಡ ಕೇವಲ 2 ರನ್ಗಳಿಸಿ ವಿಕೆಟ್ ಒಪ್ಪಿಸಿದರು. 3 ಎಸೆತಗಳ ಅಂತರದಲ್ಲಿ ನಾಯಕ ಕೆಎಲ್ ರಾಹುಲ್(20) ಕೂಡ ಮೊಯೀನ್ ಅಲಿಗೆ ವಿಕೆಟ್ ಒಪ್ಪಿಸಿದರು. ಆಲ್ರೌಂಡರ್ ಕೃನಾಲ್ ಪಾಂಡ್ಯ 9 ರನ್ಗಳಿಸಿ ನಿರಾಸೆ ಮೂಡಿಸಿದರು.
ಗೆಲುವಿನ ಭರವಸೆ ಮೂಡಿಸಿದ್ದ ಪೂರನ್
105ಕ್ಕೆ 4 ವಿಕೆಟ್ ಕಳೆದುಕೊಂಡಿದ್ದ ಸಂದರ್ಭದಲ್ಲಿ ಬ್ಯಾಟಿಂಗ್ ಇಳಿದಿದ್ದ ನಿಕೋಲಸ್ ಪೂರನ್ 18 ಎಸೆತಗಳಲ್ಲಿ 32 ರನ್ಗಳಿಸಿ ಲಕ್ನೋ ತಂಡಕ್ಕೆ ಗೆಲುವಿನ ಆಸೆ ಮೂಡಿಸಿದ್ದರು. ಆದರೆ ತುಷಾರ್ ದೇಶಪಾಂಡೆ ಬೌಲಿಂಗ್ನಲ್ಲಿ ಸ್ಟೋಕ್ಸ್ಗೆ ಕ್ಯಾಚ್ ನೀಡಿ ಔಟಾದರು. ಕೊನೆಯಲ್ಲಿ ಕನ್ನಡಿಗ ಕೆ. ಗೌತಮ್ 11 ಎಸೆತಗಳಲ್ಲಿ 17, ಬದೋನಿ 18 ಎಸೆತಗಳಲ್ಲಿ 23 ಹಾಗೂ ಮಾರ್ಕ್ವುಡ್ 3 ಎಸೆತಗಳಲ್ಲಿ 10 ರನ್ಗಳಿಸಿ ಪಂದ್ಯವನ್ನು ಕೊನೆಯ ಎಸೆತದವರೆಗೂ ಕೊಂಡೊಯ್ದರಾದರೂ, ಇವರ ಆಟ ಕೇವಲ ಗೆಲುವಿನ ಅಂತರವನ್ನ ತಗ್ಗಿಸಲಷ್ಟೇ ಶಕ್ತವಾಯಿತು.
ಸಿಎಸ್ಕೆ ಪರ ಮೊಯೀನ್ ಅಲಿ 4 ವಿಕೆಟ್ 26ಕ್ಕೆ 4, ತುಷಾರ್ ದೇಶಪಾಂಡೆ 45ಕ್ಕೆ 2 ವಿಕೆಟ್ ಪಡೆದು ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.
ಗಾಯಕ್ವಾಡ್-ಕಾನ್ವೆ ಉತ್ತಮ ಆರಂಭ
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ರುತುರಾಜ್ ಗಾಯಕ್ವಾಡ್ ಮತ್ತು ಡೆವೊನ್ ಕಾನ್ವೆ ಭರ್ಜರಿ ಆರಂಭ ಒದಗಿಸಿದರು. ಈ ಇಬ್ಬರು ಮೊದಲ ವಿಕೆಟ್ಗೆ 9.1 ಓವರ್ಗಳಲ್ಲಿ 110 ರನ್ಗಳ ಬೃಹತ್ ಜೊತೆಯಾಟ ನೀಡಿದರು. ಋತುರಾಜ್ ಗಾಯಕ್ವಾಡ್ 31 ಎಸೆತಗಳಲ್ಲಿ 3 ಬೌಂಡರಿ ಮತ್ತು 4 ಸಿಕ್ಸರ್ಗಳ ನೆರವಿನಿಂದ 57 ರನ್ ಬಾರಿಸಿ ರವಿ ಬಿಷ್ಣೋಯಿ ಅವರಿಗೆ ವಿಕೆಟ್ ನೀಡಿದರು.
ಗಾಯಕ್ವಾಡ್ ವಿಕೆಟ್ ಒಪ್ಪಿಸಿದ 8 ರನ್ಗಳ ಅಂತರದಲ್ಲಿ 29 ಎಸೆತಗಳಲ್ಲಿ 5 ಬೌಂಡರಿ ಮತ್ತು 2 ಸಿಕ್ಸರ್ಗಳ ಸಹಾಯದಿಂದ 47 ರನ್ ಗಳಿಸಿದ್ದ ಡೆವೊನ್ ಕಾನ್ವೆ ಕೂಡ ಔಟಾದರು. ನಂತರ ಬಂದ ಶಿವಂ ದುಬೆ ಸ್ಫೋಟಕ ಬ್ಯಾಟಿಂಗ್ ಮಾಡಿ 16 ಎಸೆತಗಳಲ್ಲಿ 1 ಬೌಂಡರಿ ಮತ್ತು 3 ಭರ್ಜರಿ ಸಿಕ್ಸರ್ಗಳ ನೆರವಿನಿಂದ 27 ರನ್ ಬಾರಿಸಿದರೆ. ಮೊಯಿನ್ ಅಲಿ ಕೂಡ 13 ಎಸೆತಗಳಲ್ಲಿ 19 ರನ್ ಗಳಿಸಿದರು. ಆದರೆ ಸ್ಟಾರ್ ಬ್ಯಾಟರ್ ಬೆನ್ ಸ್ಟೋಕ್ಸ್ 8 ಎಸೆತಗಳಲ್ಲಿ 8 ರನ್ ಗಳಿಸಿ ಇಂದಿನ ಪಂದ್ಯದಲ್ಲೂ ನಿರಾಸೆ ಮೂಡಿಸಿದರು.
ಕೊನೆಯಲ್ಲಿ ಆರ್ಭಟಿಸಿದ ಅಂಬಟಿ ರಾಯುಡು 14 ಎಸೆತಗಳಲ್ಲಿ 2 ಸಿಕ್ಸರ್ ಮತ್ತು 2 ಬೌಂಡರಿ ಮೂಲಕ ಅಜೇಯ 27 ರನ್ ಹಾಗೂ ನಾಯಕ ಮಹೇಂದ್ರ ಸಿಂಗ್ ಧೋನಿ 3 ಎಸೆತಗಳಲ್ಲಿ 2 ಸಿಕ್ಸರ್ ನೆರವಿನಿಂದ 12 ರನ್ ಗಳಿಸಿದರು. ರವೀಂದ್ರ ಜಡೇಜಾ 3 ರನ್ ಮತ್ತು ಮಿಚೆಲ್ ಸ್ಯಾಂಟ್ನರ್ 1 ರನ್ ಗಳಿಸಿದರು.
IPL 2023 chennai super kings beat lucknow super giants by 12 runs.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm