ಬ್ರೇಕಿಂಗ್ ನ್ಯೂಸ್
20-04-23 01:41 pm Source: news18 ಕ್ರೀಡೆ
ಐಪಿಎಲ್ನ ಇಂದಿನ ಮಹತ್ವದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಬೆಂಗಳೂರು ಇದುವರೆಗೆ ಆಡಿರುವ 5 ಪಂದ್ಯಗಳಲ್ಲಿ 2ರಲ್ಲಿ ಮಾತ್ರ ಗೆದ್ದಿದೆ. ಹೀಗಾಗಿ ಪ್ಲೇಆಫ್ ಅವಕಾಶಗಳನ್ನು ಸುಧಾರಿಸಲು ಇಲ್ಲಿಂದ ಪ್ರತಿಯೊಂದು ಪಂದ್ಯವೂ ನಿರ್ಣಾಯಕವಾಗಿದೆ. ಮತ್ತೊಂದೆಡೆ, ಈಗಾಗಲೇ ಮೂರು ಪಂದ್ಯಗಳನ್ನು ಗೆದ್ದಿರುವ ಪಂಜಾಬ್ ಉತ್ತಮ ಪ್ರದರ್ಶನ ನೀಡುವ ಭರವಸೆ ಹೊಂದಿದ್ದಾರೆ. ಬೆಂಗಳೂರಿಗೆ ಹೋಲಿಸಿದರೆ ಪಂಜಾಬ್ ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗಗಳಲ್ಲಿ ಸ್ವಲ್ಪ ಹಿಂದುಳಿದಿದೆ ಎಂದೇ ಹೇಳಬೇಕು. ಆದರೆ ಹಿಂದಿನ ಪಂದ್ಯದಲ್ಲಿ ಲಕ್ನೋದಂತಹ ಬಲಿಷ್ಠ ತಂಡವನ್ನು ಮಣಿಸಿ ಪಂಜಾಬ್ ಆತ್ಮವಿಶ್ವಾಸ ಹೆಚ್ಚಳವಾಗಿದೆ.
ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗಗಳಲ್ಲಿ ಬೆಂಗಳೂರು ಸಮಬಲ ತೋರುತ್ತಿದೆ. ಚೆನ್ನೈ ವಿರುದ್ಧದ ಹಿಂದಿನ ಪಂದ್ಯದಲ್ಲಿ ಚಾಲೆಂಜರ್ಸ್ ಹೋರಾಟ ನಡೆಸಿ ಸೋತಿತ್ತು. ಕ್ಯಾಪ್ಟನ್ ಡುಪ್ಲೆಸಿಸ್ ಮತ್ತು ಮ್ಯಾಕ್ಸ್ವೆಲ್ ಭರ್ಜರಿ ಬ್ಯಾಟಿಂಗ್ ಮಾಡಿದ್ದರು. ಆದರೆ ನಿರ್ಣಾಯಕ ಸಮಯದಲ್ಲಿ ವಿಕೆಟ್ ಕಳೆದುಕೊಂಡು ಬೆಂಗಳೂರು ಸೋಲನುಭವಿಸಿತು. ಇನ್ನು, ಸಿರಾಜ್ ಸಹ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡುತ್ತಿದ್ದಾರೆ. ಜೊತೆಗೆ ಇಂದಿನ ಪಂದ್ಯವನ್ನು ಗೆಲ್ಲಲು ಬೆಂಗಳೂರಿಗೆ ಹೆಚ್ಚಿನ ಅವಕಾಶಗಳಿವೆ ಎಂದು ವಿಶ್ಲೇಷಕರು ಹೇಳುತ್ತಿದ್ದಾರೆ. ಅಲ್ಲದೇ ಆರ್ಸಿಬಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.
ಲಕ್ನೋ ವಿರುದ್ಧದ ಪಂದ್ಯದಲ್ಲಿ ಪಂಜಾಬ್ ಅದ್ಭುತ ಗೆಲುವು ಸಾಧಿಸಿತ್ತು. ಸಿಕಂದರ್ ರಜಾ ಫಾರ್ಮ್ಗೆ ಬರುತ್ತಿರುವುದು ತಂಡದ ಪಾಲಿಗೆ ಸಕಾರಾತ್ಮಕ ಸಂಗತಿಯಾಗಿದೆ. ಕಳೆದ ಪಂದ್ಯದಿಂದ ದೂರ ಉಳಿದಿದ್ದ ನಾಯಕ ಶಿಖರ್ ಧವನ್ ಈ ಬಾರಿ ಕಣಕ್ಕೆ ಇಳಿಯುವ ಸಾಧ್ಯತೆ ಇದೆ. ಸ್ಯಾಮ್ ಕರನ್, ಮ್ಯಾಥ್ಯೂ ಶಾರ್ಟ್, ಪ್ರಭುಸಿಮ್ರಾನ್ ಸಿಂಗ್, ಜಿತೇಶ್ ಶರ್ಮಾ, ರಬಾಡ ಮುಂತಾದವರ ಜೊತೆ ಪಂಜಾಬ್ ಬಲಿಷ್ಠವಾಗಿದೆ. ಎರಡೂ ತಂಡಗಳು ಪ್ರತಿಭಾವಂತ ಆಟಗಾರರನ್ನು ಹೊಂದಿದ್ದು, ಕುತೂಹಲಕಾರಿ ಪಂದ್ಯವಾಗುವುದು ಖಚಿತ.
ಅದಕ್ಕಿಂತ ಹೆಚ್ಚಾಗಿ ಅದೃಷ್ಟದ ಅಂಶ ಆರ್ಸಿಬಿ ಅಭಿಮಾನಿಗಳನ್ನು ಕಾಡುತ್ತಿದೆ. ಗೆಲ್ಲುವ ಪಂದ್ಯಗಳು ಸೋಲುತ್ತಿವೆ. ಸೋತ ಪಂದ್ಯಗಳಲ್ಲಿ ಸೋಲು ಇನ್ನಷ್ಟು ಹೀನಾಯವಾಗಿರುತ್ತಿದೆ. ಆದರೆ ಇಂದಿನ ಪಂದ್ಯ ಗೆಲ್ಲುವ ಸಾಧ್ಯತೆ ಹೆಚ್ಚಿದೆ. ಇನ್ನು, ಐಪಿಎಲ್ 2023ರ ಪ್ಲೇಆಫ್ ಲೆಕ್ಕಾಚಾರ ನೋಡುವುದಾದರೆ, ರಾಜಸ್ಥಾನ್ ರಾಯಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಬಾಗಶಃ ಪ್ಲೇಆಫ್ ತಲುಪಲಿದೆ. ಆದರೆ ಆರ್ಸಿಬಿ ತನ್ನ ಮುಂದಿನ ಪಂದ್ಯಗಳನ್ನು ಗೆಲ್ಲುವುದರೊಂದಿಗೆ ರನ್ರೇಟ್ಸಹ ಸುಧಾರಿಸಿಕೊಳ್ಳಬೇಕಿದೆ. ಆರ್ಸಿಬಿ ತಂಡ ಸದ್ಯ 5ರಲ್ಲಿ 3ಸೋತು 2ರಲ್ಲಿ ಗೆದ್ದು ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.
IPL 2023 RCB vs PBKS royal challengers bengaluru playoff calculation.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm