ಬ್ರೇಕಿಂಗ್ ನ್ಯೂಸ್
26-04-23 01:27 pm Source: news18 ಕ್ರೀಡೆ
ಆರ್ಸಿಬಿ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಈ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಟಾಸ್ ಮತ್ತು 7:30ಕ್ಕೆ ಪಂದ್ಯ ಆರಂಭವಾಗಲಿದೆ. ಐಪಿಎಲ್ ಪಂದ್ಯವಳಿಯಲ್ಲಿ ಆರ್ಸಿಬಿ ಪಂದ್ಯಗಳಿಗೆ ಸಖತ್ ಕ್ರೇಜ್ ಇರುತ್ತದೆ. ಅದರಂತೆ, ಪಂದ್ಯವು ಬೆಂಗಳೂರಿನಲ್ಲಿ ನಡೆಯುತ್ತಿದ್ದರೆ ಅಭಿಮಾನಿಗಳ ಸಂತಸಕ್ಕೆ ಪಾರವೇ ಇರುವುದಿಲ್ಲ. ಅಭಿಮಾನಿಗಳ ಜೊತೆ ಕಳ್ಳರಿಗೂ ಇದು ಸುಗ್ಗಿ ಕಾಲವಾಗಿದೆ.


ಈಗಾಗಲೇ, ಆದಾಯ ತೆರಿಗೆ ಇಲಾಖೆ ಹೆಚ್ಚುವರಿ ಆಯುಕ್ತ ಬಿ.ಆರ್ ರಮೇಶ್ ಅವರು ಏ.17ರಂದು ನಡೆದ ಚೆನ್ನೈ ಹಾಗೂ ಆರ್ಸಿಬಿ ಪಂದ್ಯ ವೀಕ್ಷಣೆಗೆ ಹೋಗುತ್ತಿದ್ದ ವೇಳೆ ಕಳ್ಳರು ಅವರ ಬಳಿ ಇದ್ದ 80 ಸಾವಿರ ಮೌಲ್ಯದ ಸ್ಯಾಮ್ಸಂಗ್ ಎಸ್-21 ಮೊಬೈಲ್ ಕಳ್ಳತನ ಮಾಡಿದ್ದಾರಂತೆ. ಇದಲ್ಲದೇ ವಿದ್ಯಾರ್ಥಿಯೊಬ್ಬರ 2.40 ಲಕ್ಷ ಬೆಲೆಯ KTM ಡ್ಯೂಕ್ ಬೈಕ್ ಸಹ ಕಳ್ಳತನವಾಗಿತ್ತು. ಈಗಾಗಲೇ ಪೊಲೀಸ್ ಠಾಣೆಯಲ್ಲಿ ಮೊಬೈಲ್ ಹಾಗೂ ಬೈಕ್ ಕಳ್ಳತನದ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ.


ಇದಲ್ಲದೇ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಟಗಾರರು ಬಳಸುವ ಕ್ರಿಕೆಟ್ ಕಿಟ್ಗಳನ್ನು ಕಳ್ಳತನ ಮಾಡಿದ್ದ ಪ್ರಕರಣ ನಡೆದಿತ್ತು. ಡೆಲ್ಲಿ ತಂಡದ ಆಟಗಾರರ 17 ಲಕ್ಷ ರೂ. ಬೆಲೆ ಬಾಳುವ ಕ್ರಿಕೆಟ್ ಕಿಟ್ ಕಳ್ಳತನವಾಗಿತ್ತು. ಈ ರೀತಿಯ ಹಲವು ಕಳ್ಳತನ ಪ್ರಕರಣಗಳು ನಡೆಯುತ್ತಿದ್ದು, ಈ ಸಂಬಂಧ ಪೊಲೀಸರು ನಾಗರೀಕರಲ್ಲಿ ಎಚ್ಚರಿಕೆಯಿಂದ ಇರುವಂತೆ ತಿಳಿಸಿದ್ದಾರೆ.

ಅಭಿಮಾನಿಗಳು ಕ್ರಿಕೆಟ್ ಹಾಗೂ ತಮ್ಮ ಮೆಚ್ಚಿನ ಆಟಗಾರನನ್ನು ನೋಡುವ ಆತುರದಲ್ಲಿ ಇರುವುದರಿಂದ ಹಾಗೂ ಸರಿಸುಮಾರು 30 ಸಾವಿರಕ್ಕೂ ಹೆಚ್ಚು ಜನ ಒಮ್ಮೆಲೆ ಸೇರುವುದಿರಂದ ಕಳ್ಳರು ಸುಲಭವಾಗಿ ಕಳ್ಳತನ ಮಾಡುತ್ತಿದ್ದಾರೆ ಎಂದು ಪೊಲೀಸರು ಹೇಳಿದ್ದು, ಕ್ರಿಕೆಟ್ ನೋಡಲು ಹೋಗುವವರು ಕೊಂಚ ಎಚ್ಚರಿಕೆಯಿಂದ ಇರುವಂತೆ ಮನವಿ ಮಾಡಿದ್ದಾರೆ. ಕಳೆದ ಪಂದ್ಯದಲ್ಲಿ ಕೋಲ್ಕತ್ತಾ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿ ಆಗಿದ್ದವು. ಆ ವೇಳೆ ಆರ್ಸಿಬಿ ತಂಡ ಸೋಲನ್ನಪ್ಪಿತು. ಹೀಗಾಗಿ ಆರ್ಸಿಬಿ ಇದೀಗ ಕೆಕೆಆರ್ ವಿರುದ್ಧ ಸೇಡು ತೀರಿಸಿಕೊಳ್ಳಲು ಸಜ್ಜಾಗಿದೆ.
RCB ಸಂಭಾವ್ಯ ಪ್ಲೇಯಿಂಗ್ 11: ವಿರಾಟ್ ಕೊಹ್ಲಿ (ಸಿ), ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್ವೆಲ್, ಮಹಿಪಾಲ್ ಲೊಮ್ರೋರ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ಡೇವಿಡ್ ವಿಲ್ಲಿ, ವನಿಂದು ಹಸರಂಗ, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್.
rcb vs kkr number of theft cases in-during ipl matches at chinnaswamy stadium.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm