ಬ್ರೇಕಿಂಗ್ ನ್ಯೂಸ್
01-05-23 01:01 pm Source: news18 ಕ್ರೀಡೆ
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16ರಲ್ಲಿ ಇಂದು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆರ್ಸಿಬಿ ಸೆಣಸಾಡಲಿದೆ. ಈ ರಣರೋಚಕ ಪಂದ್ಯ ನೋಡಲು ಅಭಿಮಾನಿಗಳು ಕಾತುರರಾಗಿದ್ದು, ಪಂದ್ಯವು ಏಕನಾ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯಕ್ಕೆ ಆರ್ಸಿಬಿ ತಂಡ ಕೆಲ ಬದಲಾವಣೆಯೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ಇದೆ. ಹೌದು, ಸತತ ಸೋಲಿನಿಂದ ಕಂಗೆಟ್ಟಿರುವ ಆರ್ಸಿಬಿ ಲಕ್ನೋ ವಿರುದ್ಧ ಆಡುವ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಮಾಡಲು ಸಿದ್ಧವಾಗಿದೆ.
ಅದರಂತೆ, ಲಕ್ನೋ ಪಂದ್ಯದಲ್ಲಿ ಆರ್ಸಿಬಿ ಪರ ಜೋಶ್ ಹ್ಯಾಝಲ್ವುಡ್ ಕಣಕ್ಕಿಳಿಯುವುದು ಖಚಿತವಾಗಿದೆ. ಈ ಸೀಸನ್ನ ಕಳೆದ 8 ಪಂದ್ಯಗಳಲ್ಲಿ ಹ್ಯಾಝಲ್ವುಡ್ ಆರ್ಸಿಬಿ ಪರ ಕಣಕ್ಕಿಳಿದಿರಲಿಲ್ಲ. ಆದರೆ ಇಂದು ಅವರು ಕಣಕ್ಕಿಳಿಯುವುದು ಬಹುತೇಕ ಫಿಕ್ಸ್ ಆಗಿದೆ. ಆಸೀಸ್ ವೇಗಿ ಜೋಶ್ ಹ್ಯಾಝಲ್ವುಡ್ ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಿದ್ದರು. ಆದರೆ ಇದೀಗ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ನೀಡಿರುವ ವರದಿ ಪ್ರಕಾರ, ಹ್ಯಾಝಲ್ವುಡ್ ಸಂಪೂರ್ಣ ಫಿಟ್ ಆಗಿದ್ದಾರೆ. ಹೀಗಾಗಿ ಅವರು ಲಕ್ನೋ ಪಂದ್ಯದಲ್ಲಿ ಆಡುವುದು ಖಚಿತ ಎಂದು ಹೇಳಲಾಗಿದೆ.
ಇದರ ನಡುವೆ ಶಹಬಾಜ್ ಅಹ್ಮದ್ ಕೆಲ ಪಂದ್ಯಗಳಿಂದ ಉತ್ತಮವಾಗಿ ಬ್ಯಾಟಿಂಗ್ ಮಾಡುತ್ತಿಲ್ಲ. ಹೀಗಾಗಿ ಅವರನ್ನು ಇಂದು ತಂಡದಿಂದ ಕೈಬಿಡುವ ಸಾಧ್ಯತೆ ಇದೆ. ಹೀಗಾಗಿ ಅವರ ಬದಲಿಗೆ ಇಂದಾದರೂ ಕನ್ನಡಿಗನಿಗೆ ಅವಕಾಶ ಸಿಗುತ್ತದೆಯೇ ಎಂದು ಕಾದುನೋಡಬೇಕಿದೆ.
ಹೀಗಾಗಿ ಇವರ ಬದಲಿಗೆ ಇದೀಗ ಮತ್ತೋರ್ವ ಕನ್ನಡಿಗನಿಗೆ ಅವಕಾಶ ಸಿಗುವ ಸಾಧ್ಯತೆ ಹೆಚ್ಚಿದೆ. ಕರ್ನಾಟಕದ ಮನೋಜ್ ಬಾಂಡಗೆ ಅವರನ್ನು ತಂಡ ಖರೀದಿಸಿದ್ದು, ಇವರು ಕರ್ನಾಟಕದ ರಾಯಚೂರು ಜಿಲ್ಲೆಯವರಾಗಿದ್ದಾರೆ. ಅವರನ್ನು ಬೆಂಗಳೂರು ತಂಡ 20 ಲಕ್ಷ ರೂ.ಗೆ ಖರೀದಿಸಿತ್ತು. ರಾಯಚೂರು ಜಿಲ್ಲೆ ಸಿಂಧನೂರಿನ ಮನೋಜ್ ಬಾಂಡಗೆ ಅವರು ಆಲ್ ರೌಂಡರ್ ಆಗಿದ್ದಾರೆ. ಅವರು, ಎಡಗೈ ಬ್ಯಾಟ್ಸ್ಮನ್ ಹಾಗೂ ಬಲಗೈ ವೇಗಿ ಆಗಿದ್ದಾರೆ. 2019ರ ಸೈಯದ್ ಮುಷ್ತಾಕ್ ಅಲಿ ಟೂರ್ನಿಯ ಮೂಲಕ ಕರ್ನಾಟಕ ತಂಡಕ್ಕೆ ಮನೋಜ್ ಪದಾರ್ಪಣೆ ಮಾಡಿದ್ದರು. 24 ವರ್ಷದ ಮನೋಜ್ ಬಾಂಡಗೆ ಅವರು ಒಟ್ಟು 16 ಟಿ20 ಪಂದ್ಯಗಳ ಮೂಲಕ 7 ಇನಿಂಗ್ಸ್ನಲ್ಲಿ 116 ರನ್ ಕಲೆಹಾಕಿದ್ದಾರೆ. ಜೊತೆಗೆ 8 ವಿಕೆಟ್ಗಳನ್ನು ಪಡೆದಿದ್ದಾರೆ.
RCB ಸಂಭಾವ್ಯ ಪ್ಲೇಯಿಂಗ್ 11: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (C), ಮಹಿಪಾಲ್ ಲೊಮ್ರೋರ್, ಗ್ಲೆನ್ ಮ್ಯಾಕ್ಸ್ವೆಲ್, ಶಹಬಾಜ್ ಅಹ್ಮದ್/ಮನೋಜ್ ಬಾಂಡಗೆ, ದಿನೇಶ್ ಕಾರ್ತಿಕ್ (WK), ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್ವುಡ್, ಮೊಹಮ್ಮದ್ ಸಿರಾಜ್, ವಿಜಯ್ಕುಮಾರ್ ವೈಶಾಕ್.
RCB vs LSG ipl 2023 royal challengers bengaluru will make some changes in the playing 11.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm