ಬ್ರೇಕಿಂಗ್ ನ್ಯೂಸ್
09-05-23 02:46 pm Source: news18 ಕ್ರೀಡೆ
ಇಂದು ಸಂಜೆ ಆರ್ಸಿಬಿ ಮತ್ತು ಮುಂಬೈ ವಿರುದ್ಧ ಐಪಿಎಲ್ 2023ರ ಮಹತ್ವದ ಪಂದ್ಯ ನಡೆಯಲಿದೆ. ಈ ಪಂದ್ಯ ಉಭಯ ತಂಡಗಳಿಗೆ ಅತ್ಯಂತ ಮಹತ್ವದ್ದಾಗಿದ್ದು, ಪ್ಲೇಆಫ್ ರೇಸ್ನಲ್ಲಿ ಉಳಿಯಲು ತಂಡ ಗೆಲ್ಲಲೇಬೇಕಿದೆ. ಇದರ ನಡುವೆ ಐಪಿಎಲ್ ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಬೌಲಿಂಗ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮುಂಬೈ ಇದುವರೆಗೆ ಆಡಿರುವ 10 ಪಂದ್ಯಗಳಲ್ಲಿ 4 ಬಾರಿ 200ಕ್ಕೂ ಹೆಚ್ಚು ರನ್ ಗಳಿಸಿದೆ. ಆದರೆ ಬೌಲಿಂಗ್ ವಿಭಾಗ ಸಾಕಷ್ಟು ವೀಕ್ ಆಗಿದೆ.
ಜೋಫ್ರಾ ಆರ್ಚರ್ ಗಾಯಗೊಂಡು ಮನೆಗೆ ವಾಪಸ್ಸಾಗಿದ್ದಾರೆ. ಇದನ್ನು ಮುಂಬೈ ಇಂಡಿಯನ್ಸ್ ಅಧಿಕೃತವಾಗಿ ಪ್ರಕಟಿಸಿದೆ. ಜೋಫ್ರಾ ಬದಲಿಗೆ ಮುಂಬೈ ಮತ್ತೊಬ್ಬ ಇಂಗ್ಲಿಷ್ ಬೌಲರ್ ಕ್ರಿಸ್ ಜೋರ್ಡಾನ್ ಅವರನ್ನು ಆಯ್ಕೆ ಮಾಡಿದೆ. ಈಗಾಗಲೇ ಜೋರ್ಡನ್ ಮುಂಬೈ ಇಂಡಿಯನ್ಸ್ ಪಾಳಯ ಸೇರಿದ್ದಾರೆ ಎಂದು ವರದಿಯಾಗಿದೆ. ಆದರೆ ಇಂದು ನಡೆಯಲಿರುವ ಬೆಂಗಳೂರು ವಿರುದ್ಧದ ಪಂದ್ಯಕ್ಕೆ ಅವರು ಲಭ್ಯರಾಗುತ್ತಾರೆಯೇ ಎಂಬ ಬಗ್ಗೆ ಸ್ಪಷ್ಟತೆ ಇಲ್ಲ. ಆದರೆ ಬೌಲಿಂಗ್ ಲೈನ್ಅಪ್ನಿಂದ ಮುಂಬೈ ಸಂಕಷ್ಟಕ್ಕೆ ಸಿಲುಕಿದೆ.
ಅದರಲ್ಲೂ ಸ್ಥಳೀಯ ಬೌಲರ್ಗಳು ದಯನೀಯವಾಗಿ ವಿಫಲರಾಗುತ್ತಿದ್ದಾರೆ. ಮತ್ತೊಂದೆಡೆ, ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್ಗೆ ಅವಕಾಶ ಸಿಗುವ ಸಾಧ್ಯತೆ ಇದೆ. ಅವರು ವೇಗದ ಬೌಲಿಂಗ್ನಲ್ಲಿ ಉತ್ತಮ ಸ್ಪೆಲ್ ಮಾಡುತ್ತಿದ್ದಾರೆ . ಮತ್ತೊಂದೆಡೆ, ರೋಹಿತ್ ಈ ಋತುವಿನಲ್ಲಿ ತಮ್ಮ ಕಳಪೆ ಫಾರ್ಮ್ನಿಂದ ಕೂಡಿರುವುದು ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ. ಸೂರ್ಯಕುಮಾರ್ ಯಾದವ್, ಕ್ಯಾಮರೂನ್ ಗ್ರೀನ್, ಸ್ಟಬ್ಸ್, ನೆಹಾಲ್ ವಧೇರಾ, ಟಿಮ್ ಡೇವಿಡ್ ಮೊದಲಾದವರ ಜೊತೆ ಮುಂಬೈ ಬ್ಯಾಟಿಂಗ್ ಬಲಿಷ್ಠವಾಗಿದೆ. ಆದರೆ ಸ್ಥಿರತೆ ತಂಡಕ್ಕೆ ಸಮಸ್ಯೆಯಾಗಿದೆ.
ಆದರೆ ಇದರ ನಡುವೆ ಆರ್ಸಿಬಿ ಸ್ಟಾರ್ ಬೌಲರ್ ತಂಡದಿಂದ ಹೊರನಡೆದಿರುವುದು ಇದೀಗ ಆರ್ಸಿಬಿ ತಂಡಕ್ಕೆ ದೊಡ್ಡ ಅನುಕೂಲವಾಗಿದೆ. ಆರ್ಚರ್ ಬೌಲಿಂಗ್ ಹಾಗೂ ಕೆಲ ಸಮಯದಲ್ಲಿ ಬ್ಯಾಟಿಂಗ್ನಲ್ಲಿಯೂ ಅಬ್ಬರಿಸುತ್ತಿದ್ದರು. ಆದರೆ ಇದೀಗ ಅವರು ಟೂರ್ನಿಯಿಂದ ಹೊರನಡೆದಿರುವುದು ಆರ್ಸಿಬಿಗೆ ಒಳ್ಳೆಯ ಸುದ್ದಿಯಾಗಿದೆ.
ipl 2023 jofra archer ruled out of tournament with injury and chris jordan named replacement.
13-10-25 10:09 pm
HK News Desk
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
D.K. Shivakumar, MLA Munirathna, RSS: ಮುನಿರತ್...
12-10-25 08:05 pm
13-10-25 10:37 pm
HK News Desk
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
Afghan Foreign Minister, Amir Khan Muttaqi: ಮ...
11-10-25 12:52 pm
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
13-10-25 07:47 pm
Udupi Correspondent
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
Honey Bees Attack in Puttur: ಪುತ್ತೂರು ; ಹೆಜ್ಜ...
12-10-25 09:53 pm
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
13-10-25 10:04 pm
Mangalore Correspondent
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm