ಬ್ರೇಕಿಂಗ್ ನ್ಯೂಸ್
12-06-23 11:32 am Source: News18 Kannada ಕ್ರೀಡೆ
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ನಲ್ಲಿ ಟೀಂ ಇಂಡಿಯಾ ಹೀನಾಯವಾಗಿ ಸೋತಿದೆ. ಐದನೇ ದಿನದ ಮೊದಲ ಸೆಷನ್ ನಲ್ಲಿ ಆಸ್ಟ್ರೇಲಿಯಾ 7 ವಿಕೆಟ್ ಪಡೆದು 209 ರನ್ ಗಳ ಬೃಹತ್ ಗೆಲುವಿನೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್ ಆಯಿತು. ಭಾರತ ಮತ್ತೊಮ್ಮೆ ಫೈನಲ್ನಲ್ಲಿ ಸೋತು ರನ್ನರ್ ಅಪ್ ಟ್ರೋಫಿಗೆ ತೃಪ್ತಿಪಟ್ಟಿತು. 2021ರಲ್ಲಿ ನಡೆದ ಮೊದಲ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ನಲ್ಲಿ ಭಾರತ ಕಿವೀಸ್ ವಿರುದ್ಧ ಸೋತಿತ್ತು.
ಈ ಪಂದ್ಯದ ಬಗ್ಗೆ ಸಚಿನ್ ತೆಂಡೂಲ್ಕರ್ ಟ್ವೀಟ್ ಮಾಡಿದ್ದು, ಸಚಿನ್ ತೆಂಡೂಲ್ಕರ್ ಮೊದಲ ಬಾರಿಗೆ ಟೀಂ ಇಂಡಿಯಾ ವಿರುದ್ಧ ಅಸಹನೆ ವ್ಯಕ್ತಪಡಿಸಿದ್ದಾರೆ. ರವಿಚಂದ್ರನ್ ಅಶ್ವಿನ್ ಅವರನ್ನು ಪ್ಲೇಯಿಂಗ್ ಇಲೆವೆನ್ನಲ್ಲಿ ಏಕೆ ಆಡಿಲ್ಲ ಎಂದು ನನಗೆ ಇನ್ನೂ ಅರ್ಥವಾಗುತ್ತಿಲ್ಲ ಎಂದು ಅವರು ಹೇಳಿಕೊಂಡಿದ್ದಾರೆ.
ಮೊದಲ ದಿನದ ಆಟದಲ್ಲಿ, ಸ್ಟೀವ್ ಸ್ಮಿತ್ ಮತ್ತು ಟ್ರಾವಿಸ್ ಹೆಡ್ ಅವರ ಜೊತೆಯಾಟವು ಪಂದ್ಯವನ್ನು ಆಸ್ಟ್ರೇಲಿಯಾದ ಕಡೆಗೆ ತಿರುಗಿಸಿತು. ಈ ಪಂದ್ಯದಲ್ಲಿ ಭಾರತ ಮೊದಲ ಇನಿಂಗ್ಸ್ನಲ್ಲಿ ದೊಡ್ಡ ಮೊತ್ತ ಗಳಿಸಬೇಕಿತ್ತು. ಆದರೆ ಟೀಂ ಇಂಡಿಯಾ ಹಾಗೆ ಮಾಡಲಿಲ್ಲ. ಆದರೆ ರವಿಚಂದ್ರನ್ ಅಶ್ವಿನ್ ಅವರನ್ನು ಅಂತಿಮ ತಂಡಕ್ಕೆ ಏಕೆ ಸೇರಿಸಿಕೊಳ್ಳಲಿಲ್ಲ ಎಂಬುದು ನನಗೆ ಇನ್ನೂ ಅರ್ಥವಾಗುತ್ತಿಲ್ಲ.
ಸದ್ಯ ಅಶ್ವಿನ್ ವಿಶ್ವ ಟೆಸ್ಟ್ ರ್ಯಾಂಕಿಂಗ್ ನಲ್ಲಿ ನಂಬರ್ ಒನ್ ಬೌಲರ್ ಆಗಿದ್ದಾರೆ. ಅಶ್ವಿನ್ನಂತಹ ಸ್ಪಿನ್ನರ್ಗೆ ಅವಕಾಶ ನೀಡದಿರುವುದು ದೊಡ್ಡ ತಪ್ಪಾಗಿದೆ. ಆಸ್ಟ್ರೇಲಿಯಾದ ಬ್ಯಾಟಿಂಗ್ನಲ್ಲಿ 5 ಎಡಗೈ ಆಟಗಾರರಿದ್ದರು. ಈ ವಿಚಾರವನ್ನು ಟೀಂ ಇಂಡಿಯಾ ಮರೆತಂತಿದೆ ಎಂದು ಸಚಿನ್ ತಮ್ಮ ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಸಚಿನ್ ತೆಂಡೂಲ್ಕರ್ ಏನೇ ಹೇಳಿದರೂ ಅಕ್ಷರಶಃ ಸತ್ಯ. ಫೈನಲ್ನಂತಹ ಪಂದ್ಯದಲ್ಲಿ ಅಶ್ವಿನ್ನಂತಹ ಆಟಗಾರನನ್ನು ಪಕ್ಕಕ್ಕೆ ಬಿಟ್ಟಿರುವುದು ಟೀಂ ಇಂಡಿಯಾ ಮಾಡಿದ ದೊಡ್ಡ ತಪ್ಪು. ಅಶ್ವಿನ್ ಬೌಲಿಂಗ್ ಜೊತೆಗೆ ಬ್ಯಾಟಿಂಗ್ ಸಹ ಮಾಡಬಲ್ಲರಾಗಿದ್ದರು. ಆದರೆ, ಟೀಂ ಇಂಡಿಯಾ ಅವರನ್ನು ನಿರ್ಲಕ್ಷಿಸಿ ಕೈ ಸುಟ್ಟುಕೊಂಡಿತು. ಆಸ್ಟ್ರೇಲಿಯಾದ ಸ್ಪಿನ್ನರ್ ನಾಥನ್ ಲಯನ್ ಎರಡನೇ ಇನ್ನಿಂಗ್ಸ್ ನಲ್ಲಿ 4 ವಿಕೆಟ್ ಪಡೆದು ಮಿಂಚಿದ್ದನ್ನು ನೋಡಿದ ಬಳಿಕ ಈ ವಿಚಾರ ಮತ್ತಷ್ಟು ತೀವ್ರತೆ ಪಡೆದುಕೊಂಡಿದೆ.
444 ರನ್ಗಳ ಗುರಿ ಬೆನ್ನಟ್ಟುವುದು ಸುಲಭದ ಮಾತಲ್ಲ. ಆದರೆ, ಭಾರತ ಎರಡನೇ ಇನಿಂಗ್ಸ್ನ್ನು ಅದ್ಭುತವಾಗಿ ಆರಂಭಿಸಿತು. ಕೊನೆಯ ದಿನ 280 ರನ್ ಗಳಿಸ ಬೇಕಿತ್ತು. ಕೊಹ್ಲಿ, ರಹಾನೆ, ಜಡೇಜಾ ಅವರಂತಹ ಬ್ಯಾಟ್ಸ್ ಮನ್ ಗಳಿದ್ದರೆ ಭಾರತ ಗೆದ್ದು ಹೊಸ ಇತಿಹಾಸ ಬರೆಯಲಿದೆ ಎಂದು ಅಭಿಮಾನಿಗಳು ಭಾವಿಸಿದ್ದರು. ಆದರೆ ಕೊನೆಯ ದಿನದ ಮೊದಲ ಸೆಷನ್ ನಲ್ಲಿ ಭಾರತ ಕುಸಿದಿತ್ತು. ಕೊನೆಯ 7 ವಿಕೆಟ್ಗಳನ್ನು ಕೇವಲ 55 ರನ್ಗಳಲ್ಲಿ ಕಳೆದುಕೊಂಡಿತು. ಅನಗತ್ಯ ಹೊಡೆತಗಳಿಗೆ ಮೊರೆ ಹೋಗಿ ವಿಕೆಟ್ ಕಳೆದುಕೊಂಡು ಮತ್ತೊಮ್ಮೆ ಐಸಿಸಿ ಟ್ರೋಫಿಯಿಂದ ದೂರವಾದರು.
Congratulations to Team Australia on winning the #WTCFinal. @stevesmith49 and @travishead34 set a solid foundation on Day one itself to tilt the game in their favour. India had to bat big in the first innings to stay in the game, but they couldn’t. There were some good moments…
— Sachin Tendulkar (@sachin_rt) June 11, 2023
Ind vs Aus i cant understand exclusion of Ravichandran Ashwin says sachin Tendulkar.
14-03-25 11:11 pm
Bangalore Correspondent
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
Ranya Rao Gold Smuggling, Ips Ramchandra Rao:...
14-03-25 02:20 pm
ಕುದುರೆಮುಖ ರಾಷ್ಟ್ರೀಯ ಅರಣ್ಯಕ್ಕೆ ಬೆಂಕಿ ; ಸ್ಥಳೀಯರ...
13-03-25 02:56 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
14-03-25 10:35 pm
Mangalore Correspondent
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
Mangalore tulu Artist Vivek Madur death: ಕಲಾ...
14-03-25 11:02 am
Mangalore Accident, Kapikad, Murder: ನೆರೆಮನೆ...
13-03-25 09:20 pm
PFI, Mangalore Crime, Police: ಪಿಎಫ್ಐ ಮುಖಂಡರಿಗ...
13-03-25 08:46 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm