ಬ್ರೇಕಿಂಗ್ ನ್ಯೂಸ್
07-08-23 02:34 pm Source: News18 Kannada ಕ್ರೀಡೆ
ಭಾರತ ಕ್ರಿಕೆಟ್ ತಂಡ ಏಷ್ಯಾ ಕಪ್ 2023 ಗಾಗಿ ತನ್ನ ತಯಾರಿಯನ್ನು ಪ್ರಾರಂಭಿಸಿದೆ. ಆಗಸ್ಟ್ 24 ರಿಂದ 29ರ ವರೆಗೆ ಎನ್ಸಿಎಯಲ್ಲಿ ಶಿಬಿರವನ್ನು ಆಯೋಜಿಸಲು ಬಿಸಿಸಿಐ ನಿರ್ಧರಿಸಿದೆ. ಜಸ್ಪ್ರೀತ್ ಬುಮ್ರಾ, ಕೆಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಅವರಂತಹ ಆಟಗಾರರನ್ನು ಶಿಬಿರದಲ್ಲಿ ಸೇರಿಸಿಕೊಳ್ಳಲಿದೆ ಎಂದು ವರದಿಯಾಗಿದೆ. ಬುಮ್ರಾ ಗಾಯದಿಂದ ಚೇತರಿಸಿಕೊಂಡಿದ್ದರೆ, ಕೆಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಇನ್ನೂ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಈ ಎಲ್ಲಾ ಆಟಗಾರರಿಗೆ ಎನ್ಸಿಎ ತಲುಪಲು ಸೂಚನೆ ನೀಡಲಾಗಿದೆ. ಸಂಜು ಸ್ಯಾಮ್ಸನ್ ಏಷ್ಯಾಕಪ್ಗೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದರೆ, ನಂತರ ಅವರು ಕೊನೆಯ ಎರಡು ದಿನಗಳ ಈ ಶಿಬಿರವನ್ನು ಸೇರಿಕೊಳ್ಳಬಹುದು.
ವಿಂಡೀಸ್ ಪ್ರವಾಸದ ನಂತರ ಟೀಂ ಇಂಡಿಯಾದ ಪ್ರಮುಖ ಆಟಗಾರರು ತವರಿಗೆ ವಾಪಸಾಗಿ ಏಷ್ಯಾಕಪ್ ತಯಾರಿ ಆರಂಭಿಸಿದರೆ, ಟೀಂ ಇಂಡಿಯಾದ ಇನ್ನೊಂದು ತಂಡ ಐರ್ಲೆಂಡ್ ಗೆ ಹಾರಲಿದೆ. ಭಾರತ ತಂಡವು ಐರ್ಲೆಂಡ್ನಲ್ಲಿ 3 ಪಂದ್ಯಗಳ T20 ಸರಣಿಯನ್ನು ಆಡಬೇಕಾಗಿದೆ. ಸರಣಿಯ ಮೊದಲ ಟಿ20 ಪಂದ್ಯ ಆಗಸ್ಟ್ 18 ರಂದು ನಡೆಯಲಿದೆ. ಜಸ್ಪ್ರೀತ್ ಬುಮ್ರಾ ಅವರು ಐರ್ಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸಲಿದ್ದಾರೆ. ಐಪಿಎಲ್ ಫ್ರಾಂಚೈಸಿ ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಕೂಡ ಐರ್ಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾ ಜೊತೆಗಿರಲಿದ್ದಾರೆ.
ಜಸ್ಪ್ರೀತ್ ಬುಮ್ರಾ ಏಷ್ಯಾಕಪ್ಗೆ ಟೀಮ್ ಇಂಡಿಯಾವನ್ನು ಸೇರುವುದು ಖಚಿತವಾಗಿದೆ ಏಕೆಂದರೆ ಅದಕ್ಕೂ ಮೊದಲು ಅವರು ಐರ್ಲೆಂಡ್ ಪ್ರವಾಸದಲ್ಲಿ 3 ಟಿ20 ಪಂದ್ಯಗಳನ್ನು ಆಡಲಿದ್ದರು. ಈ ಮೂಲಕ ಬುಮ್ರಾ ಅವರ ಫಿಟ್ನೆಸ್ನ ಮೌಲ್ಯಮಾಪನವೂ ನಡೆಯಲಿದೆ. ಕೆಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಕೂಡ ಏಷ್ಯಾಕಪ್ನಲ್ಲಿ ಪುನರಾಗಮನ ಮಾಡಬಹುದು. ಆದಾಗ್ಯೂ, ಅವರ ಗಾಯದ ಸ್ಥಿತಿಯ ಬಗ್ಗೆ ಇನ್ನೂ ಏನೂ ಸ್ಪಷ್ಟತೆ ದೊರಕಿಲ್ಲ. ಬಿಸಿಸಿಐ ಮೂಲಗಳ ಪ್ರಕಾರ ಏಷ್ಯಾಕಪ್ ತಂಡಕ್ಕಾಗಿ ಶಿಬಿರ ಆಯೋಜಿಸಲಾಗುತ್ತಿದೆ.
ವೆಸ್ಟ್ ಇಂಡೀಸ್ನಿಂದ ವಾಪಸಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಇಬ್ಬರೂ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ. ಜೊತೆಗೆ ಎರಡು ದಿನಗಳ ವಿರಾಮದ ನಂತರ ಬುಮ್ರಾ ಕೂಡ ಶಿಬಿರ ಸೇರಲಿದ್ದಾರೆ. ಏಷ್ಯಾಕಪ್ನಲ್ಲಿ ಟೀಂ ಇಂಡಿಯಾ ತನ್ನ ಎಲ್ಲಾ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡಲಿದೆ. ಏಷ್ಯಾದ 6 ತಂಡಗಳು ಈ ಟೂರ್ನಿಯಲ್ಲಿ ಭಾಗವಹಿಸುತ್ತಿವೆ. ಭಾರತ ತಂಡವು ಪಾಕಿಸ್ತಾನಕ್ಕೆ ಹೋಗಲು ನಿರಾಕರಿಸಿತ್ತು. ಹೀಗಾಗಿಭಾರತದ ಪಂದ್ಯಗಳು ಶ್ರೀಲಂಕಾದಲ್ಲಿ ನಡೆಯಲಿವೆ. ಏಷ್ಯಾಕಪ್ ಅನ್ನು ಏಕದಿನ ಮಾದರಿಯಲ್ಲಿ ಆಯೋಜಿಸಲಾಗುವುದು. ಈ ಟೂರ್ನಿಯಲ್ಲಿ ಒಟ್ಟು 13 ಪಂದ್ಯಗಳು ನಡೆಯಲಿವೆ. ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ಮಧ್ಯಾಹ್ನ 3:00 ರಿಂದ ನಡೆಯಲಿವೆ.
Asia Cup 2023 Virat Kohli to Rohit Camp at NCA Bengaluru on 24th to 29 Aug.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 01:43 pm
HK News Desk
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm