ಬ್ರೇಕಿಂಗ್ ನ್ಯೂಸ್
17-08-23 03:01 pm Source: News18 Kannada ಕ್ರೀಡೆ
ಏಷ್ಯಾ ಕಪ್ 2023 (Asia cup 2023) ಆರಂಭಕ್ಕೆ ಇನ್ನೇನು ಕೇವಲ ಎರಡು ವಾರಗಳು ಮಾತ್ರ ಬಾಕಿ ಉಳಿದಿದೆ. ಏಷ್ಯಾ ಕಪ್ ಆಗಸ್ಟ್ 30 ರಿಂದ ಸೆಪ್ಟೆಂಬರ್ 17ರ ವರೆಗೆ ಪಾಕಿಸ್ತಾನ ಮತ್ತು ಶ್ರೀಲಂಕಾದಲ್ಲಿ ನಡೆಯಲಿದೆ. ಈ ಬಾರಿಯ ಏಷ್ಯಾಕಪ್ಗೆ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ನೇಪಾಳ ಈಗಾಗಲೇ ತಮ್ಮ ತಂಡಗಳನ್ನು ಪ್ರಕಟಿಸಿವೆ. ಭಾರತ, ಶ್ರೀಲಂಕಾ ಮತ್ತು ಅಫ್ಘಾನಿಸ್ತಾನ ಇನ್ನೂ ಘೋಷಿಸಬೇಕಿದೆ. ಕೆಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಅವರ ಫಿಟ್ನೆಸ್ ಪಂದ್ಯಗಳ ಕಾರಣ ಟೀಮ್ ಇಂಡಿಯಾ ತಂಡವನ್ನು ಪ್ರಕಟಿಸಲು ವಿಳಂಬವಾಗುತ್ತಿದೆ.
ಆದರೆ ಬಿಸಿಸಿಐ ಆಯ್ಕೆ ಸಮಿತಿ ಈಗಾಗಲೇ 17 ಸದಸ್ಯರ ತಂಡವನ್ನು ನಿರ್ಧರಿಸಿದೆ ಎಂಬ ವರದಿಗಳಿವೆ. ಇದರಲ್ಲಿ ಕೆಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಹೆಸರು ಕೂಡ ಸೇರಿದೆ ಎಂದು ಗೊತ್ತಾಗಿದೆ. ಆದರೆ ಅವರು ಫಿಟ್ನೆಸ್ ಸಾಧಿಸಬೇಕಿದೆ. ಈ 17 ಸದಸ್ಯರ ತಂಡದಲ್ಲಿ ಟಿ20 ಮಾದರಿಯಲ್ಲಿ ವಿಶ್ವದ ನಂಬರ್ 1 ಸ್ಥಾನದಲ್ಲಿರುವ ಸೂರ್ಯಕುಮಾರ್ ಯಾದವ್ ಅವರಿಗೆ ಸ್ಥಾನ ನೀಡಿಲ್ಲ ಎಂಬ ವರದಿಗಳಿವೆ. ಕೆಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಫಿಟ್ನೆಸ್ ಸಾಧಿಸಲು ವಿಫಲರಾದರೆ ಸೂರ್ಯಕುಮಾರ್ ಯಾದವ್ ಅವರಿಗೆ ಅವಕಾಶ ಸಿಗಬಹುದು ಎಂದು ವರದಿಯಾಗಿದೆ.
ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಲ್ಲಿ ಹಿಟ್ ಆಗಿದ್ದ ತಿಲಕ್ ವರ್ಮಾ ಹೆಸರನ್ನು ಏಷ್ಯಾಕಪ್ ಗೆ ಪರಿಗಣಿಸುತ್ತಿಲ್ಲ ಎಂಬ ವರದಿಗಳಿವೆ. ಕೇವಲ ಒಂದು ಸರಣಿಯೊಂದಿಗೆ ಮೆಗಾ ಇವೆಂಟ್ನಲ್ಲಿ ಅವರಿಗೆ ಅವಕಾಶ ನೀಡಲು ಬಿಸಿಸಿಐ ಆಯ್ಕೆ ಸಮಿತಿಯು ಸಿದ್ಧವಾಗಿಲ್ಲ ಎಂದು ಹೇಳಲಾಗುತ್ತಿದೆ. ಆದರೆ ಹೊಸ ಹುಡುಗ ಮುಖೇಶ್ ಕುಮಾರ್ ಏಷ್ಯಾಕಪ್ ಗೆ ಆಯ್ಕೆಯಾಗುವ ಸಾಧ್ಯತೆ ಇದೆ ಎಂಬ ಸುದ್ದಿ ಬರುತ್ತಿದೆ. ಬುಮ್ರಾ, ಶಮಿ, ಸಿರಾಜ್, ಶಾರ್ದೂಲ್ ಠಾಕೂರ್, ಮುಖೇಶ್ ಕುಮಾರ್ ಜೊತೆಗೆ ಭಾರತದ ವೇಗಿ ಪಡೆಗೆ ಸೇರ್ಪಡೆಯಾಗುವ ಸಾಧ್ಯತೆ ಇದೆ.
ಯುಜ್ವೇಂದ್ರ ಚಹಾಲ್ ಮತ್ತು ಕುಲದೀಪ್ ಯಾದವ್ ಸ್ಪಿನ್ನರ್ ಆಗಲಿದ್ದಾರೆ. ಇವರೊಂದಿಗೆ ಅಕ್ಷರ್ ಪಟೇಲ್ ಮತ್ತು ರವೀಂದ್ರ ಜಡೇಜಾ ಆಲ್ ರೌಂಡರ್ ಸ್ಪಿನ್ ಆಗಲಿದ್ದಾರೆ. ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ಆಲ್ ರೌಂಡರ್ ಆಗಲಿದ್ದಾರೆ. ರೋಹಿತ್ ಶರ್ಮಾ, ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ ಬ್ಯಾಟ್ಸ್ಮನ್ಗಳಾದರೆ ಕೆಎಲ್ ರಾಹುಲ್, ಇಶಾನ್ ಕಿಶನ್, ಸಂಜು ಸ್ಯಾಮ್ಸನ್ ವಿಕೆಟ್ ಕೀಪರ್ಗಳಾಗಲಿದ್ದಾರೆ ಎಂದು ವರದಿಯಾಗಿದೆ ಏಷ್ಯಾಕಪ್ಗೆ ಭಾರತ ಸಂಭಾವ್ಯ ತಂಡ: ರೋಹಿತ್ ಶರ್ಮಾ (ನಾಯಕ), ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್, ಇಶಾನ್ ಕಿಶನ್, ಸಂಜು ಸ್ಯಾಮ್ಸನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಚಾಹಲ್, ಮೊಹಮ್ಮದ್ ಶಮಿ, ಮೊಹಮ್ದ್ ಸಿರಾಜ್, ಬುಮ್ರಾ, ಮುಖೇಶ್ ಕುಮಾರ್.
Suryakumar Yadav and Tilak Verma are likely to be Ruled Out of Team India from Asia Cup 2023.
13-10-25 10:09 pm
HK News Desk
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
D.K. Shivakumar, MLA Munirathna, RSS: ಮುನಿರತ್...
12-10-25 08:05 pm
13-10-25 10:37 pm
HK News Desk
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
Afghan Foreign Minister, Amir Khan Muttaqi: ಮ...
11-10-25 12:52 pm
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
13-10-25 07:47 pm
Udupi Correspondent
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
Honey Bees Attack in Puttur: ಪುತ್ತೂರು ; ಹೆಜ್ಜ...
12-10-25 09:53 pm
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
13-10-25 10:04 pm
Mangalore Correspondent
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm