ಬ್ರೇಕಿಂಗ್ ನ್ಯೂಸ್
19-08-23 01:41 pm Source: News18 Kannada ಕ್ರೀಡೆ
ಕಳೆದ ಹಲವು ವರ್ಷಗಳಿಂದ ಐಸಿಸಿ ಟ್ರೋಫಿಯ ಬರ ನೀಗಿಸಲು ಟೀಂ ಇಂಡಿಯಾ ಹರಸಾಹಸ ಪಡುತ್ತಿದೆ. ಈ ಬಾರಿ ಭಾರತ ತಂಡಕ್ಕೆ ಗೋಲ್ಡನ್ ಅವಕಾಶವಿದೆ ಏಕೆಂದರೆ ವಿಶ್ವಕಪ್ 2023 ಅನ್ನು ಭಾರತ ಮಾತ್ರ ಆಯೋಜಿಸುತ್ತದೆ. ಆದರೆ ಅದಕ್ಕೂ ಮುನ್ನ ಟೀಂ ಇಂಡಿಯಾಗೆ ಏಷ್ಯಾಕಪ್ ಆಡಲಿದೆ. ಏಷ್ಯಾ ಕಪ್ಗೂ ಮುನ್ನ ಭಾರತ ತಂಡಕ್ಕೆ ಗುಡ್ ನ್ಯೂಸ್ ಸಿಕ್ಕಿದ್ದು, ಸ್ಟಾರ್ ಆಟಗಾರರು ತಂಡಕ್ಕೆ ಕಂಬ್ಯಾಕ್ ಮಾಡುತ್ತಿದ್ದಾರೆ. ಈ ಪಟ್ಟಿಯಲ್ಲಿ ಮೊದಲ ಹೆಸರು ಸ್ಟಾರ್ ಬ್ಯಾಟ್ಸ್ಮನ್ ಕೆಎಲ್ ರಾಹುಲ್ ಅವರದ್ದು, ಆದರೆ ಅವರು ಕೆಲವು ತಿಂಗಳುಗಳಿಂದ ಕ್ರಿಕೆಟ್ನಿಂದ ದೂರವಿದ್ದರು.
ಕೆಎಲ್ ರಾಹುಲ್ ಕಳೆದ ವರ್ಷದಿಂದ ಎಲ್ಲಾ ಫಾರ್ಮೆಟ್ನಲ್ಲಿ ತಮ್ಮ ಕಳಪೆ ಫಾರ್ಮ್ನೊಂದಿಗೆ ಹೋರಾಡುತ್ತಿದ್ದರು. ಐಪಿಎಲ್ನಲ್ಲಿ ಲಕ್ನೋ ತಂಡದ ನಾಯಕರಾಗಿದ್ದಾಗಲೂ ಅವರು ಫ್ಲಾಪ್ ಉತ್ತಮವಾಗಿ ಕಾಣಿಸಿಕೊಳ್ಳಲಿಲ್ಲ. ಕಳಪೆ ಫಾರ್ಮ್ನಿಂದಾಗಿ ರಾಹುಲ್ ಹಲವು ಟೀಕೆಗಳನ್ನು ಎದುರಿಸಿದರು. ಇದಾದ ನಂತರವೂ ದುರದೃಷ್ಟವಶಾತ್ ಅವರು ಐಪಿಎಲ್ನಲ್ಲಿ ಮಾರಣಾಂತಿಕ ಗಾಯಕ್ಕೆ ತುತ್ತಾದರು. ಐಪಿಎಲ್ನಲ್ಲಿ ಮೊಣಕಾಲಿನ ಗಾಯಕ್ಕೆ ಒಳಗಾದ ರಾಹುಲ್ ನಂತರ ಇಡೀ ಋತುವಿನಿಂದ ಹೊರಗುಳಿದಿದ್ದರು. ಇದಾದ ಬಳಿಕ ಗಾಯದ ಸಮಸ್ಯೆಯಿಂದಾಗಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ನಿಂದಲೂ ಹೊರಗುಳಿದಿದ್ದರು.



ಆದರೆ ಇದೀಗ ವಿಶ್ವಕಪ್ ಹಾಗೂ ಏಷ್ಯಾಕಪ್ ಗೂ ಮುನ್ನ ರಾಹುಲ್ ಕಡೆಯಿಂದ ಶುಭ ಸುದ್ದಿಯೊಂದು ಬಂದಿದೆ. ಅವರು ಏಷ್ಯಾಕಪ್ನಲ್ಲಿ ಪುನರಾಗಮನ ಮಾಡಲಿದ್ದಾರೆ ಎಂದು ವರದಿಯಾಗಿದ್ದು, ತಂಡವನ್ನು ಸೇರಿಕೊಳ್ಳಲಿದ್ದಾರೆ. ಪಟ್ಟಿಯಲ್ಲಿ ಎರಡನೇ ಹೆಸರು ಜಸ್ಪ್ರೀತ್ ಬುಮ್ರಾ ಅವರದ್ದು. ಬುಮ್ರಾ ತಮ್ಮ ಮಾರಕ ಬೌಲಿಂಗ್ ಮೂಲಕ ಈಗಾಗಲೇ ಐರ್ಲೆಂಡ್ ಪ್ರವಾಸದ ಮೂಲಕ ಕಂಬ್ಯಾಕ್ ಮಾಡಿದ್ದಾರೆ. ಐರ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಬುಮ್ರಾ ಟೀಂ ಇಂಡಿಯಾ ನಾಯಕರಾಗಿದ್ದಾರೆ. ಏಷ್ಯಾಕಪ್ಗೆ ಕೊಡುಗೆ ನೀಡಲು ಅವರು ಸಂಪೂರ್ಣ ಫಿಟ್ ಆಗಿದ್ದಾರೆ.




ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾ ಅನೇಕ ಸಮಸ್ಯೆಗಳನ್ನು ಅನುಭವಿಸಿತು. ಬುಮ್ರಾ ಇಲ್ಲದೆ ಭಾರತ ತಂಡ ಟಿ20 ವಿಶ್ವಕಪ್, ಬಾರ್ಡರ್ ಗವಾಸ್ಕರ್ ಟ್ರೋಫಿ ಮತ್ತು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ನಲ್ಲಿ ಎಡವಿದೆ. ಕೆಲವೊಮ್ಮೆ ಬುಮ್ರಾ ಡೆತ್ ಓವರ್ಗಳಲ್ಲಿ ಭಾರತದ ಪ್ಲಸ್ ಪಾಯಿಂಟ್ ಆಗಿದ್ದಾರೆ. ಐರ್ಲೆಂಡ್ ವಿರುದ್ಧದ ಪಂದ್ಯಕ್ಕೂ ಮುನ್ನ ಬುಮ್ರಾ ಆಸ್ಟ್ರೇಲಿಯಾ ವಿರುದ್ಧ ಕೊನೆಯ ಬಾರಿ ಬೌಲಿಂಗ್ ಮಾಡಿದ್ದರು. ಆದರೆ ಇಲ್ಲಿ ಬೆನ್ನು ನೋವಿನಿಂದಾಗಿ ಕ್ರಿಕೆಟ್ನಿಂದ ದೂರ ಉಳಿದಿದ್ದರು. ಅವರ ವಾಪಸಾತಿಗಾಗಿ ಎಲ್ಲರೂ ಹಲವು ತಿಂಗಳುಗಳಿಂದ ಕಾಯುತ್ತಿದ್ದರು. ಇದೀಗ ಮೆಗಾ ಟೂರ್ನಮೆಂಟ್ ಆರಂಭಕ್ಕೂ ಮುನ್ನ ಅವರ ವಾಪಸ್ಸಾತಿ ಅಭಿಮಾನಿಗಳಿಗೆ ಸಂತಸ ತಂದಿದೆ.
KL Rahul and Jasprit Bumrah Comeback before Asia Cup and ICC World Cup 2023.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm