ಬ್ರೇಕಿಂಗ್ ನ್ಯೂಸ್
24-08-23 02:47 pm Source: News18 Kannada ಕ್ರೀಡೆ
ಏಕದಿನ ವಿಶ್ವಕಪ್ 2023ಗೆ (ODI World 2023) ಹೆಚ್ಚು ದಿನಗಳು ಉಳಿದಿಲ್ಲ. ಅಕ್ಟೋಬರ್ 5 ರಿಂದ ಭಾರತದಲ್ಲಿ ಏಕದಿನ ವಿಶ್ವಕಪ್ ಅದ್ಧೂರಿಯಾಗಿ ಆರಂಭವಾಗಲಿದೆ. ಸೆಪ್ಟೆಂಬರ್ 19ರಂದು ಫೈನಲ್ನೊಂದಿಗೆ ಪಂದ್ಯಾವಳಿ ಕೊನೆಗೊಳ್ಳಲಿದೆ. ಏಕದಿನ ವಿಶ್ವಕಪ್ನ ವೇಳಾಪಟ್ಟಿ ಈಗಾಗಲೇ ಬಿಡುಗಡೆಯಾಗಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಅಕ್ಟೋಬರ್ 8 ರಂದು ಚೆನ್ನೈನಲ್ಲಿ ಆಡಲಿದೆ.
ಅಕ್ಟೋಬರ್ 14 ರಂದು ಅಹಮದಾಬಾದ್ನಲ್ಲಿ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವು ಟೂರ್ನಿಯ ಪ್ರಮುಖ ಅಂಶವಾಗಿದೆ. ಈ ಪಂದ್ಯ ಅಕ್ಟೋಬರ್ 15 ರಂದು ನಡೆಯಬೇಕಿದ್ದರೂ, ಭದ್ರತಾ ಕಾರಣಗಳಿಂದ ಅದನ್ನು ಅಕ್ಟೋಬರ್ 14 ಕ್ಕೆ ಬದಲಾಯಿಸಲಾಯಿತು. ಇತ್ತೀಚೆಗೆ, ಐಸಿಸಿ ಅಭ್ಯಾಸ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಭ್ಯಾಸ ಪಂದ್ಯಗಳು ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 3 ರವರೆಗೆ ನಡೆಯಲಿವೆ. ಟೂರ್ನಿಯಲ್ಲಿ ಭಾಗವಹಿಸುವ 10 ತಂಡಗಳು ಎರಡು ಅಭ್ಯಾಸ ಪಂದ್ಯಗಳನ್ನೂ ಆಡಲಿವೆ. ಗುವಾಹಟಿ ಮತ್ತು ತಿರುವನಂತಪುರಂ ಈ ಪಂದ್ಯಗಳಿಗೆ ವೇದಿಕೆಯಾಗಲಿದೆ.


ಭಾರತ ತನ್ನ ಅಭ್ಯಾಸ ಪಂದ್ಯಗಳನ್ನು ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ನೆದರ್ಲೆಂಡ್ ವಿರುದ್ಧ ಆಡಲಿದೆ. ಭಾರತ ಸೆಪ್ಟೆಂಬರ್ 30 ರಂದು ಗುವಾಹಟಿಯಲ್ಲಿ ಅಭ್ಯಾಸ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಆಡಲಿದೆ. ನಂತರ, ಅಕ್ಟೋಬರ್ 3 ರಂದು ತಿರುವನಂತಪುರಂನಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ಭಾರತ ಪಂದ್ಯವನ್ನು ಆಡಲಿದೆ. ಪಾಕಿಸ್ತಾನ ನ್ಯೂಜಿಲೆಂಡ್ (ಸೆಪ್ಟೆಂಬರ್ 29) ಮತ್ತು ಆಸ್ಟ್ರೇಲಿಯಾ (ಅಕ್ಟೋಬರ್ 3) ವಿರುದ್ಧ ಅಭ್ಯಾಸ ಪಂದ್ಯಗಳನ್ನು ಆಡಲಿದೆ.


ಅಭ್ಯಾಸ ಪಂದ್ಯಗಳು ಹಗಲು ರಾತ್ರಿ ಮಾದರಿಯಲ್ಲಿ ನಡೆಯಲಿವೆ. ಎಲ್ಲಾ ಪಂದ್ಯಗಳೂ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿವೆ. ತಂಡದ 15 ಆಟಗಾರರು ಅಭ್ಯಾಸ ಪಂದ್ಯದಲ್ಲಿ ಬೌಲಿಂಗ್ ಮತ್ತು ಬ್ಯಾಟಿಂಗ್ ಮಾಡುವ ಅವಕಾಶವನ್ನು ಹೊಂದಿರುತ್ತಾರೆ.
ICC ODI World Cup 2023 Warm ups Fixture India Plays Against England and Netherlands.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm