ಬ್ರೇಕಿಂಗ್ ನ್ಯೂಸ್
02-12-20 12:18 pm Source: MYSKHEL ಕ್ರೀಡೆ
ಇಂಗ್ಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ದಕ್ಷಿಣ ಆಫ್ರಿಕಾ ತವರಿನಲ್ಲೇ ಮುಖಭಂಗವನ್ನು ಅನುಭವಿಸಿದೆ. ದಕ್ಷಿಣ ಆಫ್ರಿಕಾ ಮೂರನೇ ಪಂದ್ಯದಲ್ಲೂ ಸೋಲನ್ನು ಅನುಭವಿಸುವ ಮೂಲಕ ತನ್ನ ತವರಿನಲ್ಲೇ ನಡೆದ ಸರಣಿಯಲ್ಲಿ ವೈಟ್ವಾಶ್ ಮುಖಭಂಗಕ್ಕೆ ಈಡಾಗಿದೆ.
ಮೊದಲು ಬ್ಯಾಟಿಂಗ್ ನಡೆಸಿದ ದಕ್ಷಿಣ ಆಫ್ರಿಕಾ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿತು. ಫಾಪ್ ಡು ಪ್ಲೆಸಿಸ್ ಹಾಗೂ ವಾನ್ ಡೆರ್ ಡಸೆನ್ ಅವರ ಶತಕದ ಜೊತೆಯಾಟದ ಕಾರಣದಿಂದ ಭರ್ಜರಿ 191 ರನ್ಗಳನ್ನು ದಾಖಲಿಸಿತು. ಡು ಪ್ಲೆಸಿಸ್ 52 ರನ್ ಬಾರಿಸಿದರೆ ಡಸೆನ್ 32 ಎಸೆತಗಳಲ್ಲಿ 74 ರನ್ ಬಾರಿಸಿ ಮಿಂಚಿದರು.

ದಕ್ಷಿಣ ಆಫ್ರಿಕಾ ತಂಡ ನೀಡಿದ ಈ ಬೃಹತ್ ಗುರಿಯನ್ನು ಇಂಗ್ಲೆಂಡ್ ಕೇವಲ ಒಂದು ವಿಕೆಟ್ ಕಳೆದುಕೊಂಡು ತಲುಪುವಲ್ಲಿ ಯಶಸ್ವಿಯಾಯಿತು. ಆರಂಭಿಕ ಆಟಗಾರ ಜೇಸನ್ ರಾಯ್ ವಿಕೆಟ್ ಬೇಗನೆ ಕಳೆದುಕೊಂಡ ಇಂಗ್ಲೆಂಡ್ ಬಳಿಕ ಯಾವುದೇ ವಿಕೆಟ್ ಕಳೆದುಕೊಳ್ಳಲಿಲ್ಲ.
ನಾಯಕ ಜೋಸ್ ಬಟ್ಲರ್ ಹಾಗೂ ಡೇವಿಡ್ ಮಲನ್ ಅಜೇಯವಾಗಿಯೇ ಈ ಗುರಿಯನ್ನು ತಲುಪಿದರು. ಈ ರನ್ ಬೆನ್ನಟ್ಟುವ ವೇಳೆ ಇಂಗ್ಲೆಂಡ್ ನಾಯಕ 46 ಎಸೆತಗಳಲ್ಲಿ 67 ರನ್ ಸಿಡಿಸಿದರೆ ಚುಟುಕು ಕ್ರಿಕೆಟ್ನ ನಂಬರ್ 1 ಆಟಗಾರ ಡೇವಿಡ್ ಮಲನ್ 47 ಎಸೆತಗಳಲ್ಲಿ ಭರ್ಜರಿ 99 ರನ್ ಗಳಿಸಿ ಅಜೇಯವಾಗುಳಿದರು.
ಈ ಮೂಲಕ ಒಂದು ರನ್ನಿಂದ ಮಲನ್ ಶತಕವನ್ನು ತಪ್ಪಿಸಿಕೊಂಡಿದ್ದಾರೆ. ಆಫ್ರಿಕಾ ನೀಡಿದ್ದ ಬೃಹತ್ ಗುರಿಯನ್ನು ಇಂಗ್ಲೆಂಡ್ 14 ಎಸೆತಗಳು ಉಳಿದಿರುವಂತೆಯೇ ತಲುಪಿದೆ. ಈ ಜೋಡಿ ಅಜೇಯ 167 ರನ್ಗಳ ಜೊತೆಯಾಟವನ್ನು ನೀಡಿತು. ಈ ಮೂಲಕ ಮಲನ್-ಬಟ್ಲರ್ ಜೋಡಿ ದಕ್ಷಿಣ ಆಫ್ರಿಕಾ ವಿರುದ್ಧ ಬೃಹತ್ ಜೊತೆಯಾಟವನ್ನಾಡಿದ ಇಂಗ್ಲೆಂಡ್ ಜೊಡಿ ಎನಿಸಿಕೊಂಡರು.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm