ಬ್ರೇಕಿಂಗ್ ನ್ಯೂಸ್
10-07-24 09:03 pm HK News Desk ಕ್ರೀಡೆ
ಹರಾರೆ, ಜುಲೈ 10: ಸಂಘಟಿತ ಆಟದ ಪ್ರದರ್ಶನ ನೀಡಿದ ಭಾರತ ತಂಡ ಜಿಂಬಾಬ್ವೆ ವಿರುದ್ಧದ ಟಿ 20 ಸರಣಿಯ ಮೂರನೇ ಪಂದ್ಯದಲ್ಲಿ 23 ರನ್ ಅಂತರದ ಗೆಲುವು ಸಾಧಿಸಿದ್ದು ಐದು ಪಂದ್ಯಗಳ ಸರಣಿಯಲ್ಲಿ 2-1 ಮುನ್ನಡೆ ಪಡೆದಿದೆ.
ಹರಾರೆಯಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಯುವ ಭಾರತ ತಂಡಕ್ಕೆ ನಾಯಕ ಶುಭಮನ್ ಗಿಲ್(66, 49 ಎಸೆತ, 7x4, 3x6) ಮತ್ತು ಯಶಸ್ವಿ ಜೈಸ್ವಾಲ್(36, 27 ಎಸೆತ, 4x4, 2x6) ಭರ್ಜರಿ ಆರಂಭವೊದಗಿಸಿದರು. ಮೂರನೇ ಕ್ರಮಾಂಕದಲ್ಲಿ ಆಡಲಿಳಿದ ಕಳೆದ ಪಂದ್ಯದ ಹೀರೋ ಅಭಿಷೇಕ್ ಶರ್ಮ(10) ಬೇಗನೆ ವಾಪಸಾದರು. ಮೂರನೇ ವಿಕೆಟ್ ಗೆ ಜೊತೆಯಾದ ಗಿಲ್ ಮತ್ತು ಋತುರಾಜ್ ಗಾಯಕ್ವಾಡ್(49, 28 ಎಸೆತ, 4x4, 3x6) 72 ರನ್ ಸೇರಿಸಿ ತಂಡವನ್ನು ಉತ್ತಮ ಮೊತ್ತದೆಡೆಗೆ ಕೊಂಡೊಯ್ದರು. ಅಂತಿಮವಾಗಿ ಭಾರತ 4 ವಿಕೆಟ್ ಗೆ 182 ರನ್ ಸೇರಿಸಿತು.
ಗುರಿ ಬೆನ್ನಟ್ಟಿದ ಜಿಂಬಾಬ್ವೆ ಆರಂಭದಲ್ಲೇ ಆಘಾತ ಅನುಭವಿಸಿತು. ಭಾರತದ ಯುವ ಪಡೆಯ ಬೌಲಿಂಗ್ ದಾಳಿಯ ಮುಂದೆ ದೊಡ್ಡ ಜೊತೆಯಾಟ ಆಡುವಲ್ಲಿ ವಿಫಲವಾದ ಜಿಂಬಾಬ್ವೆ 6 ವಿಕೆಟ್ ಗೆ 159 ರನ್ ಗಳಿಸಲಷ್ಟೇ ಶಕ್ತವಾಗಿ ಪರಾಜಯ ಒಪ್ಪಿಕೊಂಡಿತು. 15ಕ್ಕೆ 3 ವಿಕೆಟ್ ಕಬಳಿಸಿದ ವಾಷಿಂಗ್ಟನ್ ಸುಂದರ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.
ಸಂಕ್ಷಿಪ್ತ ಸ್ಕೋರ್ ಭಾರತ 182/4(ಗಿಲ್ 66, ಋತುರಾಜ್ 49, ಜೈಸ್ವಾಲ್ 36, ಸಂಜು ಸ್ಯಾಮ್ಸನ್ 12*, ಸಿಕಂದರ್ ರಜಾ 24/2, ಮುಝರ್ಬಾನಿ 25/2)
ಜಿಂಬಾಬ್ವೆ 159/6(ಮೈಯರ್ಸ್ 65*, ಮಡಾಂಡೆ 37, ಮಸಕಜ 18* ಸುಂದರ್ 15/3, ಆವೇಶ್ ಖಾನ್ 39/2)
India captain Shubman Gill regained his form with a half-century as the tourists beat Zimbabwe by 23 runs Wednesday in the third Twenty20.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm