ಬ್ರೇಕಿಂಗ್ ನ್ಯೂಸ್
15-12-20 03:30 pm Source: MYKHEL Madhukara Shetty ಕ್ರೀಡೆ
ಟೀಮ್ ಇಂಡಿಯಾದ ಮಾಜಿ ಆಟಗಾರ ಯುವರಾಜ್ ಸಿಂಗ್ ಮತ್ತೊಮ್ಮೆ ಸ್ಪರ್ಧಾತ್ಮಕ ಕ್ರಿಕೆಟ್ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಗಳು ಕಂಡು ಬರುತ್ತಿದೆ. ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಗೆ ಪಂಜಾಬ್ ಹೆಸರಿಸಿರುವ 30 ಸಂಭಾವ್ಯ ಆಟಗಾರರ ಪಟ್ಟಿಯಲ್ಲಿ ಯುವರಾಜ್ ಸಿಂಗ್ ಹೆಸರು ಕೂಡ ಸೇರಿಕೊಂಡಿದೆ. ಆದರೆ ಯುವರಾಜ್ ಸಿಂಗ್ ಆಡಲು ಬಿಸಿಸಿಐ ಅನುಮತಿ ಅಗತ್ಯವಾಗಿದೆ. ಯುವರಾಜ್ ಸಿಂಗ್ ಕಳೆದ ವರ್ಷ ಎಲ್ಲಾ ಮಾದರಿಯ ಕ್ರಿಕೆಟ್ನಿಂದಲೂ ನಿವೃತ್ತಿಯನ್ನು ಪಡೆದುಕೊಂಡಿದ್ದರು. ಆದರೆ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಯುವರಾಜ್ ಸಿಂಗ್ ಬಳಿ ವಿಶೇಷ ಮನವಿಯನ್ನು ಮಾಡಿಕೊಂಡಿದ್ದು ನಿವೃತ್ತಿ ವಾಪಾಸ್ ಪಡೆದು ಪಂಜಾಬ್ ಪರ ಕಣಕ್ಕಿಳಿಯಲು ಮನವಿ ಮಾಡಿಕೊಂಡಿತ್ತು.

ಬಿಸಿಸಿಐಗೆ ಯುವಿ ಪತ್ರ ಪಂಜಾಬ್ ಕ್ರಿಕೆಟ್ ಅಸೊಸಿಯೇಶನ್ನ ಮನವಿಯ ಹಿನ್ನೆಲೆಯಲ್ಲಿ ಯುವರಾಜ್ ಸಿಂಗ್ ತಮ್ಮ ನಿವೃತ್ತಿ ವಾಪಾಸ್ ಪಡೆದು ಮತ್ತೆ ದೇಶೀಯ ಕ್ರಿಕೆಟ್ನಲ್ಲಿ ಆಡಲು ಅನುಮತಿ ಕೋರಿ ಪತ್ರವನ್ನು ಬರೆದಿದ್ದಾರೆ. ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿ ಕ್ರಿಕ್ ಬಜ್ಜೊತೆಗೆ ಈ ಬಗ್ಗೆ ಮಾತನಾಡಿದ್ದ "ಯುವರಾಜ್ ಸಿಂಗ್ ನಾನು ಈಗಾಗಲೇ ದೇಶೀಯ ಕ್ರಿಕೆಟ್ನಲ್ಲಿ ಆಡಿದ್ದೇನೆ. ಈಗ ಬಿಸಿಸಿಐ ನನಗೆ ಮತ್ತೆ ಅನುಮತಿಯನ್ನು ನೀಡಿದರೆ ಪಂಜಾಬ್ ಪರವಾಗಿ ಆಡುತ್ತೇನೆ" ಎಂದು ಹೇಳಿದ್ದರು.

ವಿದೇಶಿ ಲೀಗ್ಗಳಲ್ಲಿ ಪಾಲ್ಗೊಂಡಿರುವ ಯುವಿ ಆದರೆ ನಿವೃತ್ತಿಯನ್ನು ಪಡೆದ ಬಳಿಕ ಯುವರಾಜ್ ಸಿಂಗ್ ಕೆಲ ವಿದೇಶಿ ಕ್ರಿಕೆಟ್ ಲೀಗ್ಗಳಲ್ಲಿ ಕೂಡ ಪಾಲ್ಗೊಂಡಿದ್ದಾರೆ. ನಿವೃತ್ತಿಯ ನಂತರ ಮಾತ್ರವೇ ಭಾರತೀಯ ಆಟಗಾರರಿಗೆ ಬಿಸಿಸಿಐ ಕಡೆಯಿಂದ ಎನ್ಒಸಿ ಪಡೆದು ಈ ವಿದೇಶಿ ಲೀಗ್ಗಳಲ್ಲಿ ಪಾಲ್ಗೊಳ್ಳಲು ಅವಕಾಶವಿದ್ದು ನಿವೃತ್ತಿ ಪಡೆಯದೆ ಆಡಿದರೆ ಅವರನ್ನು ಬಿಸಿಸಿಐ ನಿಷೇಧಿಸುವ ನಿಯಮ ಬಿಸಿಸಿಐ ಹೊಂದಿದೆ. ಹೀಗಾಗಿ ಯುವರಾಜ್ ಸಿಂಗ್ ವಿಚಾರದಲ್ಲಿ ಬಿಸಿಸಿಐ ಯಾವ ನಿಲುವು ತೆಗೆದುಕೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.
This News Article is a Copy of MYKHEL
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm