ಬ್ರೇಕಿಂಗ್ ನ್ಯೂಸ್
16-12-20 02:39 pm Source: MYKHEL Madhukara Shetty ಕ್ರೀಡೆ
ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಶುಕ್ರವಾರ ಅಡಿಲೇಡ್ನಲ್ಲಿ ಈ ಪಂದ್ಯ ಆರಂಭವಾಗಲಿದ್ದು ಈ ಪಂದ್ಯ ಡೇ-ನೈಟ್ ಪಂದ್ಯವಾಗಿ ಸಾಗಲಿದೆ. ಈ ಪಂದ್ಯಕ್ಕೆ ಟೀಮ್ ಇಂಡಿಯಾದ ಆಡುವ 11 ಆಟಗಾರರ ಪಟ್ಟಿಯನ್ನು ಬಿಸಿಸಿಐ ಘೋಷಿಸಿದೆ.
ಕೋಹ್ಲಿ ನೇತೃತ್ವದ ಈ ತಂಡದ ಆರಂಭಿಕ ಆಟಗಾರರು ಯಾರು ಎಂಬ ಪ್ರಶ್ನೆಗೆ ಉತ್ತರ ದೊರಕಿದೆ. ಮಯಾಂಕ್ ಅಗರ್ವಾಲ್ ಜೊತೆಗೆ ಪೃಥ್ವಿ ಶಾ ಟೀಮ್ ಇಂಡಿಯಾ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಶುಭ್ಮನ್ ಗಿಲ್ ಹಾಗೂ ಕೆಎಲ್ ರಾಹುಲ್ಗೆ ಈ ತಂಡದಲ್ಲಿ ನಿರಾಸೆ ಉಂಟಾಗಿದೆ.

ಆಡುವ ಬಳಗದಲ್ಲಿಲ್ಲ ರಾಹುಲ್ ಕೆಎಲ್ ರಾಹುಲ್
ಮಯಾಂಕ್ ಅಗರ್ವಾಲ್ ಜೊತೆಗೆ ಇನ್ನಿಂಗ್ಸ್ ಆರಂಭಿಸುವ ನಿರೀಕ್ಷೆಯಿತ್ತು. ಆದರೆ ಈ ತಂಡದಲ್ಲಿ ಕೆಎಲ್ ರಾಹುಲ್ ಅವರನ್ನು ಹೊರಗಿಡಲಾಗಿದೆ. ಸೀಮಿತ ಓವರ್ಗಳಲ್ಲಿ ಅದ್ಭುತ ಫಾರ್ಮ್ನಲ್ಲಿರುವ ರಾಹುಲ್ ಟೆಸ್ಟ್ನಲ್ಲಿ ಸುದೀರ್ಘ ಸಮಯದಿಂದ ಅವಕಾಶವನ್ನು ಪಡೆಯುವಲ್ಲಿ ವಿಫಲರಾಗಿದ್ದಾರೆ.

ಅಗ್ರ ಹಾಗೂ ಮಧ್ಯಮ ಕ್ರಮಾಂಕ
ಅಗ್ರ ಕ್ರಮಾಂಕದಲ್ಲಿ ನಾಯಕ ವಿರಾಟ್ ಕೊಹ್ಲಿಗೆ ಚೇತೇಶ್ವರ್ ಪೂಜಾರ ಸಾಥ್ ನೀಡಲಿದ್ದಾರೆ. ಅಜಿಂಕ್ಯ ರಹಾನೆ, ಹನುಮ ವಿಹಾರಿ, ವೃದ್ಧಿಮಾನ್ ಸಾಹ ಮಧ್ಯಮ ಕ್ರಮಾಂಕದಲ್ಲಿ ಆಸರೆಯಾಗಲಿದ್ದಾರೆ. ವಿಕೆಟ್ ಕೀಪಿಂಗ್ಗೆ ವಿಚಾರವಾಗಿ ಪಂತ್ ಹಾಗೂ ಸಾಹಾ ಮಧ್ಯೆ ಯಾರ ಎಂಬ ಪ್ರಶ್ನೆಗೂ ಸಾಹಾ ಅವರೇ ಮೊದಲ ಆಯ್ಕೆಯಾಗಿದ್ದಾರೆ.

ಬೌಲಿಂಗ್ ವಿಭಾಗ
ಬೌಲಿಂಗ್ ವಿಭಾಗದಲ್ಲಿ ರವಿಚಂದ್ರನ್ ಅಶ್ವಿನ್ ಸ್ಪಿನ್ನರ್ ಆಗಿ ಕಣಕ್ಕಿಳಿಯಲಿದ್ದಾರೆ. ಮೊಹಮ್ಮದ್ ಶಮಿ ಹಾಗೂ ಜಸ್ಪ್ರೀತ್ ಬೂಮ್ರಾಗೆ ಉಮೇಶ್ ಯಾದವ್ ಮೂರನೇ ವೇಗಿಯಾಗಿ ಸಾಥ್ ನೀಡಲಿದ್ದಾರೆ. ಕುತೂಹಲಕಾರಿ ಸಂಗತಿಯೆಂದರೆ ತಂಡದಲ್ಲಿರುವ 11 ಕ್ರಿಕೆಟಿಗರೂ ಕೂಡ ಬಲಗೈ ಆಟಗಾರರಾಗಿದ್ದಾರೆ.

ಸಂಪೂರ್ಣ ಆಟಗಾರರ ಪಟ್ಟಿ
ಟೀಮ್ ಇಂಡಿಯಾ: ವಿರಾಟ್ ಕೊಹ್ಲಿ (ನಾಯಕ), ಮಯಾಂಕ್ ಅಗರ್ವಾಲ್, ಪೃಥ್ವಿ ಶಾ, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ(ಉಪನಾಯಕ), ಹನುಮ ವಿಹಾರಿ, ವೃದ್ಧಿಮಾನ್ ಸಾಹ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಉಮೇಶ್ ಯಾದವ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬೂಮ್ರಾ
This News Article is a Copy of MYKHEL
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm