ಬ್ರೇಕಿಂಗ್ ನ್ಯೂಸ್
21-12-20 04:46 pm Source: MYKHEL Madhukara Shetty ಕ್ರೀಡೆ
ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಅನುಭವಿಸಿದ ಹೀನಾಯ ಸೋಲು ಹಾಗೂ ಎರಡನೇ ಇನ್ನಿಂಗ್ಸ್ನಲ್ಲಿ ಕೇವಲ 36 ರನ್ಗೆ ಕುಸಿದಿರುವುದು ಸಾಕಷ್ಟು ಟೀಕೆಗೆ ಗುರಿಯಾಗಿದೆ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಮುಂದಿನ ಸರಣಿಗೆ ಟೀಮ್ ಇಂಡಿಯಾದಲ್ಲಿ ಪ್ರಮುಖ ಬದಲಾವಣೆ ಮಾಡಿಕೊಳ್ಳುವ ಬಗ್ಗೆ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ. ಅದರಲ್ಲೂ ಸತತವಾಗಿ ವೈಫಲ್ಯವನ್ನು ಅನುಭವಿಸುತ್ತಾ ಬಂದಿರುವ ಪೃಥ್ವಿ ಶಾ ತಂಡದಿಂದ ಹೊರಗುಳಿಯಲಿ ಎಂಬುದು ಬಲವಾಗಿ ಕೇಳಿ ಬರುತ್ತಿರುವ ಮಾತು. ದಿಗ್ಗಜ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಕೂಡ ಇದೇ ಮಾತನ್ನು ವ್ಯಕ್ತಪಡಿಸಿದ್ದಾರೆ.
ಭಾರತ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ಗಾಗಿ ಸಾಕಷ್ಟು ಸಕಾರಾತ್ಮಕ ಉದ್ದೇಶದೊಂದಿಗೆ ಕಣಕ್ಕಿಳಿದು ಹೊಸತನದಿಂದ ಆರಂಭಿಸಬೇಕಿದೆ ಎಂದು ಸುನಿಲ್ ಗವಾಸ್ಕರ್ ಭಾರತೀಯ ಕ್ರಿಕೆಟ್ ತಂಡಕ್ಕೆ ಸಲಹೆಯನ್ನು ನೀಡಿದ್ದಾರೆ. ಈ ಮೂಲಕ ಮೊದಲ ಟೆಸ್ಟ್ನ ಸೋಲನ್ನು ಮರೆತು ಕಣಕ್ಕಿಳಿಬೇಕು ಎಂದಿದ್ದಾರೆ ಗವಾಸ್ಕರ್.
ಭಾರತ ಉತ್ತಮ ಆರಂಭವನ್ನು ಪಡೆಯಬೇಕು. ಆ ಮೂಲಕ ನಡೆದ ತಂಡಕ್ಕೆ ಸಕಾರಾತ್ಮಕತೆಯನ್ನು ತುಂಬಬಹುದು. ಹೀಗಾಗಿ ಆರಂಬಿಕನಾಗಿ ಕೆಎಲ್ ರಾಹುಲ್ ಅವರನ್ನು ಪೃಥ್ವಿ ಶಾ ಬದಲಿಗೆ ಕಣಕ್ಕಿಳಿಸಬೇಕು ಎಂದು ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ. ಇದರ ಜೊತೆಗೆ ಶುಭ್ಮನ್ ಗಿಲ್ ನಂಬರ್ 5 ಅಥವಾ ನಂಬರ್ 6ನೇ ಬ್ಯಾಟ್ಸ್ಮನ್ ಆಗಿ ತಂಡಕ್ಕೆ ಸೇರಿಕೊಳ್ಳಬೇಕು. ಆತ ಅತ್ಯುತ್ತಮ ಫಾರ್ಮ್ನಲ್ಲಿದ್ದು ತಂಡಕ್ಕೆ ಆತನಿಂದ ಕೊಡುಗೆ ದೊರೆಯಲಿದೆ ಎಂಬುದನ್ನು ಗವಾಸ್ಕರ್ ಹೇಳಿದ್ದಾರೆ. ಇನ್ನು ಇದೇ ಸಂದರ್ಭದಲ್ಲಿ ಸುನಿಲ್ ಗವಾಸ್ಕರ್ ಟೀಮ್ ಇಂಡಿಯಾದ ಫೀಲ್ಡಿಂಗ್ ಬಗ್ಗೆಗೂ ಮಾತನಾಡಿದರು. ನಾವು ಉತ್ತಮ ರೀತಿಯಲ್ಲಿ ಫೀಲ್ಡಿಂಗ್ ಹೊಂದಿದ್ದರೆ ಬಂದ ಕ್ಯಾಚ್ಗಳನ್ನು ಹಿಡಿಯುವ ಮೂಲಕ ಫಿಲ್ಡಿಂಗ್ ಚೆನ್ನಾಗಿ ಮಾಡಿದ್ದರೆ ದೊಡ್ಡ ಸಮಸ್ಯೆಗಳು ಬರಲಾರದು.
ಮರ್ಲಾನ್ ಲ್ಯಾಬುಶೈನ್ ಹಾಗೂ ಟಿಮ್ ಪೇನ್ ನೀಡಿದ ಕ್ಯಾಚ್ಗಳನ್ನು ಹಿಡಿದ್ದರೆ ಬಲುಬೇಗನೆ ವಿಕೆಟ್ ಕಳೆದುಕೊಳ್ಳುತ್ತಿದ್ದರು. ಆಗ ತಂಡಕ್ಕೆ ಕನಿಷ್ಟ 120 ರನ್ಗಳ ಲೀಡ್ ದೊರೆಯುತ್ತಿತ್ತು. ಆದರೆ ಆ ಕ್ಯಾಚ್ಗಳನ್ನು ಕೈಚೆಲ್ಲಿದ್ದರ ಪರಿಣಾಮ ಆ ಲೀಡ್ 50 ರನ್ಗೆ ಇಳಿಯಿತು ಎಂದು ಸುನಿಲ್ ಗವಾಸ್ಕರ್ ಹೇಳಿದ್ದಾರೆ
This News Article is a Copy of MYKHEL
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm