ಬ್ರೇಕಿಂಗ್ ನ್ಯೂಸ್
14-03-26 08:20 pm HK News Staffer ಕ್ರೀಡೆ
ನವದೆಹಲಿ, ಮಾರ್ಚ್ 14: ಈ ಬಾರಿಯ ಐಸಿಸಿ ಟಿ20 ವಿಶ್ವಕಪ್ ತಂಡದಲ್ಲಿ ಯುವ ವಿಕೆಟ್ ಕೀಪರ್ ಬ್ಯಾಟರ್ ಜಿತೇಶ್ ಶರ್ಮಾ ಅವರಿಗೆ ಅವಕಾಶ ಸಿಗಲಿಲ್ಲ. ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಮುನ್ನವೇ ಅವರನ್ನು ಭಾರತ ಕ್ರಿಕೆಟ್ ತಂಡದಿಂದ ಹೊರಗಿಡಲಾಗಿತ್ತು. ತಂಡದಿಂದ ಕೈಬಿಟ್ಟ ಬಗ್ಗೆ ಜಿತೇಶ್ ಶರ್ಮಾ ಮಾತನಾಡಿದ್ದಾರೆ.
ತಂಡದಿಂದ, ಅದರಲ್ಲೂ ಟಿ20 ವಿಶ್ವಕಪ್ ತಂಡದಿಂದ ಹೊರಬಿದ್ದಿದ್ದಕ್ಕೆ ನನಗೆ ಈಗ ಯಾವುದೇ ವಿಷಾದವಿಲ್ಲ ಎಂದು ಜಿತೇಶ್ ಹೇಳಿದ್ದಾರೆ. ಏಕೆಂದರೆ ಆ ಸಮಯದಲ್ಲಿ ತಮ್ಮ ತಂದೆಗೆ ನನ್ನ ಅಗತ್ಯ ಹೆಚ್ಚು ಇತ್ತು ಎಂದು ಭಾವನಾತ್ಮಕವಾಗಿ ಹೇಳಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿದ ಜಿತೇಶ್ ಶರ್ಮಾ, ಫೆಬ್ರವರಿ 1ರಂದು ತಮ್ಮ ತಂದೆ ಮೋಹನ್ ಶರ್ಮಾ ನಿಧನರಾದರು ಎಂದು ತಿಳಿಸಿದ್ದಾರೆ. ನಾನು ತಂಡಕ್ಕೆ ಆಯ್ಕೆಯಾಗದ ಕಾರಣದಿಂದಲೇ ಅವರ ಕೊನೆಯ ದಿನಗಳಲ್ಲಿ ಅವರ ಜೊತೆಗೆ ಇರಲು ಸಾಧ್ಯವಾಯಿತು. “ನನ್ನ ತಂದೆಗೆ ವಿಶ್ವಕಪ್ಗಿಂತ ಹೆಚ್ಚಾಗಿ ನನ್ನ ಅಗತ್ಯವಿತ್ತು” ಎಂದು ಹೇಳಿದ್ದಾರೆ.
ತಂಡದಿಂದ ಹೊರಬಿದ್ದಾಗ ಆರಂಭದಲ್ಲಿ ಬೇಸರವಾಗಿತ್ತು. ಆದರೆ ತಂದೆಯ ನಿಧನದ ನಂತರ ಆ ನೋವು ಕಡಿಮೆಯಾಯಿತು. ಒಬ್ಬ ಮಗನಾಗಿ ಅವರ ಕೊನೆಯ ಕ್ಷಣಗಳಲ್ಲಿ ಅವರ ಜೊತೆಗೆ ಇರುವ ಅವಕಾಶ ಸಿಕ್ಕಿದ್ದು ನನಗೆ ಸಮಾಧಾನ ನೀಡಿದೆ ಎಂದು ಜಿತೇಶ್ ಭಾವುಕರಾಗಿದ್ದಾರೆ.
ಜಿತೇಶ್ ಶರ್ಮಾ ಅವರ ತಂದೆ ಮೋಹನ್ ಶರ್ಮಾ ಅವರು ಸುದೀರ್ಘ ಕಾಯಿಲೆಯಿಂದ ಬಳಲುತ್ತಿದ್ದರು. ಕಳೆದ ತಿಂಗಳು ಫೆಬ್ರವರಿ 1ರಂದು ಅವರು ನಿಧನರಾದರು. ಅದೇ ಸಮಯದಲ್ಲಿ ಟಿ20 ವಿಶ್ವಕಪ್ಗೆ ಭಾರತ ತಂಡದ ಆಯ್ಕೆ ಪ್ರಕ್ರಿಯೆ ನಡೆಯುತ್ತಿತ್ತು. ತಂಡದಲ್ಲಿ ಸ್ಥಾನ ಸಿಗದಿದ್ದಾಗ ಆರಂಭದಲ್ಲಿ ನಿರಾಸೆ ಉಂಟಾಗಿತ್ತು. ಆದರೆ ತಂದೆಯ ಆರೋಗ್ಯ ಕ್ಷೀಣಿಸುತ್ತಿದ್ದ ಕಾರಣದಿಂದಲೇ ತಮ್ಮ ಕೊನೆಯ ಏಳು ದಿನಗಳ ಕಾಲ ಅವರ ಜೊತೆಗಿರಲು ಸಾಧ್ಯವಾಯಿತು ಎಂದು ಜಿತೇಶ್ ತಿಳಿಸಿದ್ದಾರೆ.
ತಂದೆಯ ನಿಧನದ ಬಳಿಕ ಮನೆಯ ಹಿರಿಯ ಮಗನಾಗಿ ತಮ್ಮ ತಾಯಿ ಮತ್ತು ತಮ್ಮನ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದೇನೆ ಎಂದು ಅವರು ತಿಳಿಸಿದ್ದಾರೆ. ಕ್ರಿಕೆಟ್ ಜೀವನದ ಏರಿಳಿತಗಳಿಗಿಂತ ಕುಟುಂಬದ ಮಹತ್ವ ದೊಡ್ಡದು ಎಂಬುದನ್ನು ಅವರು ಒತ್ತಿ ಹೇಳಿದ್ದಾರೆ.
ಇದೀಗ ಜಿತೇಶ್ ಶರ್ಮಾ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕ್ಯಾಂಪ್ಗೆ ಸೇರಿದ್ದು, ಮುಂಬರುವ ಐಪಿಎಲ್ ಟೂರ್ನಿಗೆ ಸಿದ್ಧತೆ ಆರಂಭಿಸಿದ್ದಾರೆ. ಐಪಿಎಲ್ 2026ರಲ್ಲಿ ತಂಡಕ್ಕೆ ಚಾಂಪಿಯನ್ ಪಟ್ಟ ಉಳಿಸಿಕೊಡುವ ವಿಶ್ವಾಸವನ್ನೂ ವ್ಯಕ್ತಪಡಿಸಿದ್ದಾರೆ.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm