ಬ್ರೇಕಿಂಗ್ ನ್ಯೂಸ್
14-01-21 04:50 pm Source: MYKHEL Madhukara Shetty ಕ್ರೀಡೆ
ಆಸ್ಟ್ರೇಲಿಯಾ ತಂಡದ ಯುವ ಆರಂಭಿಕ ಆಟಗಾರ ವಿಲ್ ಪುಕೋವ್ಸ್ಕಿ ಭಾರತದ ವಿರುದ್ಧದ ಟೆಸ್ಟ್ ಸರಣಿಯ ನಾಲ್ಕನೇ ಹಾಗೂ ಅಂತಿಮ ಪಂದ್ಯದಿಂದ ಹೊರಬಿದ್ದದ್ದಾರೆ. ಸಿಡ್ನಿಯಲ್ಲಿ ನಡೆದ ಮೂರನೇ ಟೆಸ್ಟ್ ಒಂದ್ಯದ ವೇಳೆ ಪುಕೋವ್ಸ್ಕಿ ಭುಜದ ನೋವಿಗೆ ತುತ್ತಾಗಿದ್ದರು. ಹೀಗಾಗಿ ಅವರು ಅಂತಿಮ ಪಂದ್ಯದಲ್ಲಿ ಕಣಕ್ಕಿಳಿಯುವುದಿಲ್ಲ ಎಂಬುದು ಖಚಿತವಾಗಿದೆ.
ಆಸ್ಟ್ರೇಲಿಯಾ ತಂಡದ ನಾಯಕ ಟಿಮ್ ಪೈನ್ ಈ ಬಗ್ಗೆ ಖಚಿತವಾಗಿ ಗುರುವಾರ ಮಾಧ್ಯಮಗಳಿಗೆ ಮಾಹಿತಿಯನ್ನು ನೀಡಿದ್ದಾರೆ. ಭುಜದ ನೋವಿಗೆ ಒಳಗಾಗಿರುವ ಪುಕೋವ್ಸ್ಕಿ ಆಡಲು ಸಮರ್ಥರಾಗಿಲ್ಲ. ಹೀಗಾಗಿ ಮುಂದಿನ ಪಂದ್ಯದಲ್ಲಿ ಅವರು ಕಣಕ್ಕಿಳಿಯಲಾರರು ಅವರ ಬದಲಿಗೆ ಮಾರ್ಕಸ್ ಹ್ಯಾರಿಸ್ ಆರಂಭಿಕನಾಗಿ ಡೇವಿಡ್ ವಾರ್ನರ್ಗೆ ಸಾಥ್ ನೀಡಲಿದ್ದಾರೆ ಎಂದು ಟಿಮ್ ಪೈನ್ ಹೇಳಿದ್ದಾರೆ.
ಶುಕ್ರವಾರದಿಂದ ಆರಂಭವಾಗಲಿರುವ ನಾಲ್ಕನೇ ಟೆಸ್ಟ್ ಪಂದ್ಯದ ಹಿನ್ನೆಲೆಯಲ್ಲಿ ವಿಲ್ ಪುಕೋವ್ಸ್ಕಿಗೆ ಗುರುವಾರ ಫಿಟ್ನೆಸ್ ಪರೀಕ್ಷೆ ನಡೆಸಲಾಗಿದ್ದು ಇದರಲ್ಲಿ ಅವರು ವಿಫಲರಾಗಿದ್ದಾರೆ. ಹೀಗಾಗಿ 2019ರ ಆ್ಯಶಸ್ ಸರಣಿಯಲ್ಲಿ ಕೊನೆಯದಾಗಿ ಕಣಕ್ಕಿಳಿದಿದ್ದ ಹ್ಯಾರಿಸ್ ಭಾರತದ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ವಿಲ್ ಪುಕೋವ್ಸ್ಕಿ ಅಲಭ್ಯತೆಯಿಂದಾಗಿ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆಸಿಸ್ ಪರವಾಗಿ ಕಣಕ್ಕಿಳಿಯುತ್ತಿರುವ ಐದನೇ ಆರಂಭಿಕ ಆಟಗಾರ ಹ್ಯಾರಿಸ್ ಆಗಲಿದ್ದಾರೆ. ಸಿಡ್ನಿಯಲ್ಲಿ ನಡೆದ ಮೂರನೇ ಟೆಸ್ಟ್ನ ಅಂತಿಮ ದಿನದಾಟ ಸೋಮವಾರ ನಡೆಯುತ್ತಿದ್ದ ವೇಳೆ ವಿಲ್ ಪುಕೋವ್ಸ್ಕಿ ಫೀಲ್ಡಿಂಗ್ ವೇಳೆ ಗಾಯಗೊಂಡಿದ್ದರು. ಭುಜದ ನೋವಿಗೆ ಒಳಗಾಗಿದ್ದ ಅವರು ಬಳಿಕ ಸ್ಕ್ಯಾನಿಂಗ್ಗೆ ಒಳಪಟ್ಟರು. ಈ ಸಂದರ್ಭದಲ್ಲಿ ಭುಜದ ಮೂಳೆಯಲ್ಲಿ ಸಣ್ಣ ಸ್ಥಳಾಂತರವಾಗಿರುವುದು ಕಂಡು ಬಂದಿತ್ತು. ಇದರಿಂದ ಚೇತರಿದಿಕೊಳ್ಳದ ಹಿನ್ನೆಲೆಯಲ್ಲಿ ಅವರು ಅಂತಿಮ ಟೆಸ್ಟ್ನಿಂದ ಹೊರಗುಳಿಯಲಿದ್ದಾರೆ.
ಆಸ್ಟ್ರೇಲಿಯಾ ಆಡುವ ಬಳಗ: ಡೇವಿಡ್ ವಾರ್ನರ್, ಮಾರ್ಕಸ್ ಹ್ಯಾರಿಸ್, ಮಾರ್ನಸ್ ಲಾಬುಶೇನ್, ಸ್ಟೀವ್ ಸ್ಮಿತ್, ಮ್ಯಾಥ್ಯೂ ವೇಡ್, ಕ್ಯಾಮೆರಾನ್ ಗ್ರೀನ್, ಟಿಮ್ ಪೈನ್ (ನಾಯಕ/ ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮ್ಮಿನ್ಸ್, ಜೋಶ್ ಹ್ಯಾಜಲ್ವುಡ್, ನಥನ್ ಲಿಯಾನ್.
This News Article is a Copy of MYKHEL
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm