ಬ್ರೇಕಿಂಗ್ ನ್ಯೂಸ್
17-01-21 03:46 pm Source: MYKHEL Madhukara Shetty ಕ್ರೀಡೆ
ಟೀಮ್ ಇಂಡಿಯಾದ ಆಲ್ರೌಂಡರ್ ವಾಶಿಂಗ್ಟನ್ ಸುಂದರ್ ಹಾಗೂ ವೇಗಿ ಶಾರ್ದೂಲ್ ಠಾಕೂರ್ ಆಸ್ಟ್ರೇಲಿಯಾ ವಿರುದ್ಧ ಬ್ರಿಸ್ಬೇನ್ನಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ನಲ್ಲಿ ಬ್ಯಾಟಿಂಗ್ನಲ್ಲಿ ಅದ್ಭುತವಾದ ಪ್ರದರ್ಶನವನ್ನು ನೀಡಿದರು. ಈ ಶ್ರೇಷ್ಠ ಪ್ರದರ್ಶನಕ್ಕೆ ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಪ್ರಶಂಸೆಯನ್ನು ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.
ಚೊಚ್ಚಲ ಪಂದ್ಯವನ್ನಾಡುತ್ತಿರುವ ವಾಶಿಂಗ್ಟನ್ ಸುಂದರ್ ಹಾಗೂ ಎರಡನೇ ಟೆಸ್ಟ್ನಲ್ಲಿ ಕಣಕ್ಕಿಳಿದಿರುವ ಶಾರ್ದೂಲ್ ಠಾಕೂರ್ ಜೋಡಿ 7ನೇ ವಿಕೆಟ್ಗೆ 217 ಎಸೆತಗಳಲ್ಲಿ 123 ರನ್ಗಳ ಅದ್ಭುತ ಜೊತೆಯಾಟವನ್ನು ನೀಡುವ ಮೂಲಕ ಪಂದ್ಯದಲ್ಲಿ ಭಾರತ ಮರಳಿ ಹೋರಾಟದ ಹಾದಿಗೆ ತಂದಿರಿಸಿದರು. ಈ ಜೋಡಿ ಕಣಕ್ಕಿಳಿಯುವ ವೇಳೆಗೆ ಭಾರತ ತಂಡ 186 ರನ್ಗಳಿಗೆ 6 ವಿಕೆಟ್ ಕಳೆದುಕೊಂಡು ಸಂಕಷ್ಟದ ಸ್ಥಿತಿಯಲ್ಲಿತ್ತು.
"ವಾಶಿಂಗ್ಟನ್ ಸುಂದರ್ ಹಾಗೂ ಶಾರ್ದೂಲ್ ಠಾಕೂರ್ ನಿಮ್ಮಿಂ ನಂಬಿಕಾರ್ಹವಾದ ಹಾಗೂ ಶ್ರೇಷ್ಠವಾದ ಪ್ರದರ್ಶನ. ಟೆಸ್ಟ್ ಕ್ರಿಕೆಟ್ನ ಶ್ರೇಷ್ಠತೆಯೇ ಇದು. ಮೊದಲ ಪಂದ್ಯದಲ್ಲೇ ವಾಶಿ ಅದ್ಭುತವಾದ ಹಿಡಿತ ಮತ್ತು ಹ್ಯಾಟ್ಸ್ಆಫ್ ಟು ಯೂ ಠಾಕೂರ್" ಎಂದು ವಿರಾಟ್ ಕೊಹ್ಲಿ ಟ್ವೀಟ್ ಮೂಲಕ ಇಬ್ಬರು ಆಟಗಾರರ ಪ್ರದರ್ಶನವನ್ನು ವಿರಾಟ್ ಕೊಹ್ಲಿ ಕೊಂಡಾಡಿದ್ದಾರೆ. ಆಸ್ಟ್ರೇಲಿಯಾ ಮೊದೊಲ ಇನ್ನಿಂಗ್ಸ್ನಲ್ಲಿ 369 ರನ್ ಗಳಿಸಿದ್ದು ಅದಕ್ಕೆ ಪ್ರತಿಯಾಗಿ ಭಾರತ ಮೊದಲ ಇನ್ನಿಂಗ್ಸ್ನಲ್ಲಿ 336 ರನ್ ಗಳಿಸಿದೆ. ಶಾರ್ದೂಲ್ ಠಾಕೂರ್ ಹಾಗೂ ವಾಶಿಂಗ್ಟನ್ ಸುಂದರ್ ಅರ್ಧ ಶತಕವನ್ನು ಹೊರತು ಪಡಿಸಿದರೆ ರೋಹಿತ್ ಶರ್ಮಾ 44 ರನ್, ಮಯಾಂಕ್ ಅಗರ್ವಾಲ್ 38 ರನ್ ಹಾಗೂ ಅಜಿಂಕ್ಯ ರಹಾನೆ 37 ರನ್ ಬ್ಯಾಟಿಂಗ್ ಮೂಲಕ ಕೊಡುಗೆ ನೀಡಿದ ಇತರ ಆಟಗಾರರಾಗಿದ್ದಾರೆ.
ಜೋಶ್ ಹ್ಯಾಜಲ್ವುಡ್ ಆಸ್ಟ್ರೇಲಿಯಾ ತಮಡದ ಪರವಾಗಿ 5 ವಿಕೆಟ್ಗಳ ಗೊಂಚಲನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇದು ಟೆಸ್ಟ್ ಕ್ರಿಕೆಟ್ನಲ್ಲಿ ಅವರ 9ನೇ ಐದು ವಿಕೆಟ್ಗಳ ಗೊಂಚಲಾಗಿದೆ. ಸ್ಟಾರ್ಕ್ ಹಾಗೂ ಪ್ಯಾಟ್ ಕಮ್ಮಿನ್ಸ್ ತಲಾ ಎರಡು ವಿಕೆಟ್ ಪಡೆಯುವ ಮೂಲಕ ಮಿಂಚಿದ್ದಾರೆ
This News Article is a Copy of MYKHEL
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm