ಭಾರತ vs ಆಸ್ಟ್ರೇಲಿಯಾ: ಫೀಲ್ಡಿಂಗ್‌ನಲ್ಲಿ ವಿಶೇಷ ಸಾಧನೆ ಮಾಡಿದ ರೋಹಿತ್ ಶರ್ಮಾ

18-01-21 03:28 pm       Source: MYKHEL Madhukara Shetty   ಕ್ರೀಡೆ

ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಅನುಭವಿ ಆಟಗಾರ ರೋಹಿತ್ ಶರ್ಮಾ ವಿಶೇಷ ಸಾಧನೆಯೊಂದನ್ನು ಮಾಡಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಅನುಭವಿ ಆಟಗಾರ ರೋಹಿತ್ ಶರ್ಮಾ ವಿಶೇಷ ಸಾಧನೆಯೊಂದನ್ನು ಮಾಡಿದ್ದಾರೆ. ಮೊದಲ ಇನ್ನಿಂಗ್ಸ್‌ನಲ್ಲಿ 48 ರನ್‌ಗಳ ಕೊಡುಗೆಯನ್ನು ನೀಡಿದ್ದ ರೋಹಿತ್ ಶರ್ಮಾ ಬ್ಯಾಟಿಂಗ್ ಹೊರತಾಗಿ ಮಾಡಿದ ಸಾಧನೆಯಿಂದ ಗಮನಸೆಳೆದಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಫೀಲ್ಡಿಂಗ್ ಮೂಲಕ ಗಮನ ಸೆಳೆದಿದ್ದಾರೆ. ಆಸ್ಟ್ರೇಲಿಯಾ ತಂಡದ ಆಟಗಾರರ ಐದು ಕ್ಯಾಚ್‌ಗಳನ್ನು ಪಡೆಯುವಲ್ಲಿ ರೋಹಿತ್ ಶರ್ಮಾ ಯಶಸ್ವಿಯಾದರು. ಇದು ಫೀಲ್ಡರ್‌ ಆಗಿ ವಿಶೇಷ ಸಾಧನೆಯೆನಿಸಿದೆ.

ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಪಂದ್ಯವೊಂದರಲ್ಲಿ 5 ಕ್ಯಾಚ್ ಪಡೆದ ಕೇವಲ ನಾಲ್ವರು ಆಟಗಾರರ ಪೈಕಿ ರೋಹಿತ್ ಶರ್ಮಾ ಕೂಡ ಒಬ್ಬರೆನಿಸಿದ್ದಾರೆ. ಈ ಮೂಲಕ ಹಿಟ್‌ಮ್ಯಾನ್ ಚುರುಕಿನ ಫೀಲ್ಡಿಂಗ್ ಮೂಲಕ ಗಮನಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ನಾಲ್ಕನೇ ದಿನದಾಟದ ಮೂರನೇ ಸೆಶನ್‌ನಲ್ಲಿ ಕ್ಯಾಮರೂನ್ ಗ್ರೀನ್ ನೀಡಿದ ಕ್ಯಾಚ್ ಪಡೆಯುವಲ್ಲಿ ಯಶಸ್ವಿಯಾದ ರೋಹಿತ್ ಶರ್ಮಾ ಈ ಎಲೈಟ್‌ ಲಿಸ್ಟ್‌ಗೆ ಸೇರಿಕೊಂಡಿದ್ದಾರೆ.

ಬ್ರಿಸ್ಬೇನ್‌ನಲ್ಲಿ ನಡೆಯುತ್ತಿರುವ ಅಂತಿಮ ಹಾಗೂ ನಿರ್ಣಾಯಕ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ರೋಹಿತ್ ಶರ್ಮಾ ಪ್ರಮುಖ ಆಟಗಾರರಾದ ಡೇವಿಡ್ ವಾರ್ನರ್, ಸ್ಟೀವ್ ಸ್ಮಿತ್ ಹಾಗೂ ಟಿಮ್ ಪೈನ್ ಕ್ಯಾಚ್ ಪಡೆದು ಮಿಂಚಿದ್ದರು. ಎರಡನೇ ಇನ್ನಿಂಗ್ಸ್‌ನಲ್ಲಿ ಮಾರ್ನಾ ಸ್ ಲಾಬುಶೇನ್ ಹಾಗೂ ಕ್ಯಾಮರೂನ್ ಗ್ರೀನ್ ಕ್ಯಾಚ್ ಪಡೆದು ತಂಡಕ್ಕೆ ಯಶಸ್ಸು ತಂದುಕೊಟ್ಟರು.

ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಪಂದ್ಯವೊಂದರಲ್ಲಿ 5 ಕ್ಯಾಚ್ ಪಡೆದ ಆಟಗಾರರು:

ಏಕನಾಥ ಸೋಲ್ಕರ್, ಚೆನ್ನೈ 1969/70

ಕೃಷ್ಣಮಾಚಾರಿ ಶ್ರೀಕಾಂತ್, ಪರ್ತ್ 1991/92

ರಾಹುಲ್ ದ್ರಾವಿಡ್, ಚೆನ್ನೈ 1997/9 

ರೋಹಿತ್ ಶರ್ಮಾ, ಬ್ರಿಸ್ಬೇನ್ 2020/21

This News Article is a Copy of MYKHEL