ಬ್ರೇಕಿಂಗ್ ನ್ಯೂಸ್
20-01-21 02:42 pm Source: MYKHEL Madhukara Shetty ಕ್ರೀಡೆ
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿ ಅಂತ್ಯವಾಗಿದ್ದು ಟೀಮ್ ಇಂಡಿಯಾ 2-1 ಅಂತರದಿಂದ ಸರಣಿಯನ್ನು ಸತತ ಎರಡನೇ ಬಾರಿಗೆ ಕೈವಶ ಮಾಡಿಕೊಂಡಿದೆ. ಈ ಸರಣಿಯ ಬಳಿಕ ಐಸಿಸಿ ಶ್ರೇಯಾಂಕ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಖಾಯಂ ನಾಯಕ ವಿರಾಟ್ ಕೊಹ್ಲಿ ಹಿನ್ನೆಡೆ ಅನುಭವಿಸಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ ಕೇವಲ 1 ಪಂದ್ಯವನ್ನಷ್ಟೇ ಆಡಿ ಬಳಿಕ ಪಿತೃತ್ವದ ರಜೆಯಲ್ಲಿ ಭಾರತಕ್ಕೆ ಮರಳಿದ್ದರು. ಹೀಗಾಗಿ ವಿರಾಟ್ ಕೊಹ್ಲಿ ಟೆಸ್ಟ್ ಶ್ರೇಯಾಂಕದಲ್ಲಿ ಕುಸಿತವನ್ನು ಕಂಡಿದ್ದಾರೆ. ಆಸ್ಟ್ರೇಲಿಯಾದ ಯುವ ಆಟಗಾರ ಮಾರ್ನಾಸ್ ಲಾಬುಶೇನ್ ಮೂರನೇ ಸ್ಥಾನಕ್ಕೇರುವಲ್ಲಿ ಯಶಸ್ವಿಯಾಗಿದ್ದು ವಿರಾಟ್ ಕೊಹ್ಲಿ ನಾಲ್ಕನೇ ಸ್ಥಾನಕ್ಕೆ ಕುಸಿದಿದ್ದಾರೆ.
ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಅಗ್ರ ಸ್ಥಾನದಲ್ಲಿ ಮುಂದುವರಿಸಿದ್ದಾರೆ. ಆರಂಭಿಕ ಎರಡು ಪಂದ್ಯಗಳಲ್ಲಿ ಕಳಪೆ ಪ್ರದರ್ಶನದ ಬಳಿಕ ಫಾರ್ಮ್ ಕಂಡುಕೊಂಡ ಸ್ಮಿತ್ ಎರಡನೇ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಟೆಸ್ಟ್ ಸರಣಿಯಲ್ಲಿ ಅದ್ಭುತ ಪ್ರದರ್ಶನ ತೋರಿದ ಮಾರ್ನಾಸ್ ಲ್ಯಾಬುಶೇನ್ ಮೂರನೇ ಸ್ಥಾನಕ್ಕೇರಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಬಳಿಕ ಪ್ರಕಟವಾದ ಈ ಶ್ರೇಯಾಂಕ ಪಟ್ಟಿಯಲ್ಲಿ ಅತಿ ಹೆಚ್ಚು ಗಳಿಕೆಯನ್ನು ಕಂಡ ಬ್ಯಾಟ್ಸ್ಮನ್ ಎಂದರೆ ಅದು ಟೀಮ್ ಇಂಡಿಯಾದ ವಿಕೆಟ್ ಕೀಪರ್ ರಿಷಭ್ ಪಂತ್. ಗಾಬಾ ಅಂಗಳದಲ್ಲಿ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡಿ ತಂಡದ ಗೆಲುವಿಗೆ ಕಾರಣರಾದ ಪಂತ್ ತಮ್ಮ ವೃತ್ತಿ ಜೀವನದಲ್ಲಿ ಮೊದಲ ಬಾರಿಗೆ 13ನೇ ಸ್ಥಾನಕ್ಕೇರಿದ್ದಾರೆ. ಈ ಮೂಲಕ ವಿಕೆಟ್ ಕೀಪರ್ಗಳ ಪೈಕಿ ಅತಿ ಹೆಚ್ಚು ಶ್ರೇಯಾಂಕ ಹೊಂದಿರುವ ಆಟಗಾರ ಎನಿಸಿಕೊಂಡಿದ್ದಾರೆ.
This News Article is a Copy of MYKHEL
↗️ Labuschagne moves to No.3
— ICC (@ICC) January 20, 2021
↗️ Root enters top five
↗️ Pujara moves up one spot to No.7
The latest @MRFWorldwide ICC Test Player Rankings for batting are out!
Full rankings: https://t.co/OMjjVx5Mgf pic.twitter.com/49DbXmXznS
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 11:22 am
HK News Desk
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
13-10-25 07:47 pm
Udupi Correspondent
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
Honey Bees Attack in Puttur: ಪುತ್ತೂರು ; ಹೆಜ್ಜ...
12-10-25 09:53 pm
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
14-10-25 11:19 am
Mangalore Correspondent
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm