ಬ್ರೇಕಿಂಗ್ ನ್ಯೂಸ್
20-01-21 02:46 pm Source: MYKHEL Madhukara Shetty ಕ್ರೀಡೆ
ಕರ್ನಾಟಕ ತಂಡದ ಅನುಭವಿ ಆಲ್ರೌಂಡರ್ ಕೃಷ್ಣಪ್ಪ ಗೌತಮ್ ಮುಂದಿನ ತಿಂಗಳಿನ ಆರಂಭದಲ್ಲಿ ಶುರುವಾಗಲಿರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ನೆಟ್ ಬೌಲರ್ ಆಗಿ ಅವಕಾಶವನ್ನು ಗಿಟ್ಟಿಸಿಕೊಂಡಿದ್ದಾರೆ. ಸದ್ಯ ಕರ್ನಾಟಕ ತಂಡವನ್ನು ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಅವರು ಪ್ರತಿನಿಧಿಸುತ್ತಿದ್ದಾರೆ.
ದೇಶೀಯ ಕ್ರಿಕೆಟ್ನಲ್ಲಿ ಸಾಕಷ್ಟು ಕ್ರಿಕೆಟ್ ಆಡಿದ ಅನುಭವ ಹೊಂದಿರುವ ಕೃಷ್ಣಪ್ಪ ಗೌತಮ್ ಭಾರತ ಎ ತಂಡವನ್ನು ಕೂಡ ಪ್ರತಿನಿಧಿಸಿದ ಅನುಭವವನ್ನು ಹೊಂದಿದ್ದಾರೆ. ಐಪಿಎಲ್ನಲ್ಲಿ ಕಳೆದ ಹಲವು ವರ್ಷಗಳಿಂದ ಅವಕಾಶ ಗಿಟ್ಟಿಸಿಕೊಂಡಿರುವ ಕೆ ಗೌತಮ್ ಮುಂಬೈ ಇಂಡಿಯನ್ಸ್, ರಾಜಸ್ಥಾನ್ ರಾಯಲ್ಸ್ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು ಪ್ರತಿನಿಧಿಸಿದ್ದಾರೆ.
ದೇಶೀಯ ಕ್ರಿಕೆಟ್ನಲ್ಲಿ ಸಾಕಷ್ಟು ಅದ್ಭುತ ಪ್ರದರ್ಶನಗಳನ್ನು ನೀಡಿರುವ ಕೃಷ್ಣಪ್ಪ ಗೌತಮ್ಗೆ ರಾಷ್ಟ್ರೀಯ ತಂಡದಲ್ಲಿ ಈವರೆಗೂ ಅವಕಾಶ ದೊರೆತಿಲ್ಲ. ಐಪಿಎಲ್, ದೇವಧರ್ ಟ್ರೋಫಿಯಂತಾ ಪ್ರಮುಖ ಟೂರ್ನಿಗಳಲ್ಲಿ ಮಿಂಚಿದ್ದರೂ ಭಾರತೀಯ ಕ್ರಿಕೆಟ್ನ ಆಯ್ಕೆ ಸಮಿತಿ ಕೆ ಗೌತಮ್ ಅವರತ್ತ ಚಿತ್ತವನ್ನು ಹರಿಸಿರಲಿಲ್ಲ. ಲೆಗ್ ಸ್ಪಿನ್ನರ್ ಆಗಿರುವ ಕೆ ಗೌತಮ್ ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್ ಮೂಲಕವೂ ತಂಡಕ್ಕೆ ನೆರವಾಗುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಹೀಗಾಗಿ ಟೀಮ್ ಇಂಡಿಯಾದ ಆಟಗಾರರಿಗೆ ನೆಟ್ನಲ್ಲಿ ಅಭ್ಯಾಸಕ್ಕಾಗಿ ಕೆ ಗೌತಮ್ಗೆ ಅವಕಾಶವನ್ನು ನೀಡಲಾಗಿದೆ. ಇತ್ತೀಚಿನ ದಿನಗಳಲ್ಲಿ ನೆಟ್ ಬೌಲಿಂಗ್ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಸಾಕಷ್ಟು ಆಟಗಾರರು ಟೀಮ್ ಇಂಡಿಯಾಗೆ ಪದಾರ್ಪಣೆ ಮಾಡಿರುವುದು ಕೆ ಗೌತಮ್ಗೂ ರಾಷ್ಟ್ರೀಯ ತಂಡದಲ್ಲಿ ಅವಕಾಶ ದೊರೆಯಬಹುದು ಎಂಬ ನಿರೀಕ್ಷೆ ಮೂಡಲು ಕಾರಣವಾಗಿದೆ.
ಇಂಗ್ಲೆಂಡ್ ವಿರುದ್ಧದ ಸರಣಿಗೆ ಒಟ್ಟು ಐವರನ್ನು ನೆಟ್ ಬೌಲರ್ಗಳನ್ನಾಗಿ ಹೆಸರಿಸಲಾಗಿದೆ. ಕರ್ನಾಟಕದ ಕೆ ಗೌತಮ್ ಜೊತೆಗೆ ಉತ್ತರ ಪ್ರದೇಶದ ಅಂಕಿತ್ ರಜಪೂತ್, ಮಧ್ಯಪ್ರದೇಶದ ಅವೇಶ್ ಖಾನ್, ಕೇರಳದ ಸಂದೀಪ್ ವಾರಿಯರ್, ಉತ್ತರ ಪ್ರದೇಶದ ಸೌರಭ್ ಕುಮಾರ್ ನೆಟ್ ಬೌಲರ್ ಆಗಿ ಮುಂಬರುವ ಸರಣಿಯಲ್ಲಿ ಟೀಮ್ ಇಂಡಿಯಾ ಕ್ಯಾಂಪ್ನಲ್ಲಿ ಭಾಗಿಯಾಗಲಿದ್ದಾರೆ
This News Article is a Copy of MYKHEL
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm