ಬ್ರೇಕಿಂಗ್ ನ್ಯೂಸ್
29-01-21 02:51 pm Source: MYKHEL Sadashiva ಕ್ರೀಡೆ
ಮೆಲ್ಬರ್ನ್: ಮೂಲತಃ ಭಾರತದವರಾದ, ಪಂಜಾಬ್ನಿಂದ ವಲಸೆ ಹೋಗಿರುವ ರೈತನ ಮಗ ತನ್ವೀರ್ ಸಂಘ ಅವರು ಆಸ್ಟ್ರೇಲಿಯಾ ರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆಸ್ಟ್ರೇಲಿಯಾ ತಂಡದಲ್ಲಿ ಅರ್ಹತೆ ಗಿಟ್ಟಿಸಿಕೊಂಡ ಕೇವಲ ಎರಡನೇ ಭಾರತ ಮೂಲದ ಆಟಗಾರನಾಗಿ 19ರ ಹರೆಯದ ತನ್ವೀರ್ ಗುರುತಿಸಿಕೊಂಡಿದ್ದಾರೆ.
ಫೆಬ್ರವರಿಯಲ್ಲಿ ನಡೆಯಲಿರುವ ಆಸ್ಟ್ರೇಲಿಯಾ-ನ್ಯೂಜಿಲೆಂಡ್ ಟಿ20ಐ ಸರಣಿಗಾಗಿ ಕ್ರಿಕೆಟ್ ಆಸ್ಟ್ರೇಲಿಯಾ (ಸಿಎ) ಪ್ರಕಟಿಸಿರುವ 18 ಮಂದಿಯ ತಂಡದಲ್ಲಿ ಲೆಗ್ ಸ್ಪಿನ್ನರ್ ಆಗಿರುವ ತನ್ವೀರ್ ಸಂಘ ಕೂಡ ಇದ್ದಾರೆ. ಆಸ್ಟ್ರೇಲಿಯಾ ತಂಡಕ್ಕೆ ಆಯ್ಕೆಯಾಗಿರುವ ಬಗ್ಗೆ ತನ್ವೀರ್ ಖುಷಿ ವ್ಯಕ್ತಪಡಿಸಿದ್ದಾರೆ. 'ಆಸ್ಟ್ರೇಲಿಯಾ ರಾಷ್ಟ್ರೀಯ ತಂಡಕ್ಕೆ ಕರೆ ಬಂದಾಗ ನನಗೆ ಚಂದ್ರಲೋಕಕ್ಕೆ ಹೋದಷ್ಟು ಖುಷಿಯಾಯ್ತು. ಕಡೆಗೂ ತಂಡದಲ್ಲಿ ಸ್ಥಾನ ಸಿಕ್ಕಿದೆ. ಇಷ್ಟು ಸಣ್ಣ ವಯಸ್ಸಿನಲ್ಲಿ ಆಸೀಸ್ ತಂಡದಲ್ಲಿ ಸ್ಥಾನ ಸಿಗಬಹುದು ಎಂದು ನಾನು ನಿರೀಕ್ಷಿಸಿರಲಿಲ್ಲ,' ಎಂದು ಟೈಮ್ಸ್ ಆಫ್ ಇಂಡಿಯಾ ಜೊತೆ ತನ್ವೀರ್ ಹೇಳಿಕೊಂಡಿದ್ದಾರೆ.
ಭಾರತದಲ್ಲಿ ಜನಿಸಿದ ಒಂದಿಷ್ಟು ಆಟಗಾರರು ಈ ಹಿಂದೆ ಆಸ್ಟ್ರೇಲಿಯಾ ತಂಡಗಳ ಪರ ಆಡಿದ್ದು ಇದೆ. ಆದರೆ ಅದು ದೇಸಿ ಕ್ರಿಕೆಟ್ ಅಥವಾ ಅಂಡರ್ 19 ತಂಡದಲ್ಲಿ. ಜೇಸನ್ ಸಂಘ, ಅರ್ಜುನ್ ನಾಯರ್, ಪರಮ್ ಉಪ್ಪಾಲ್ ಇವರೆಲ್ಲ ಭಾರತ ಮೂಲದ ಆಸ್ಟ್ರೇಲಿಯಾ ಆಟಗಾರರು. ಆದರೆ ಪಂಜಾಬ್ ಮೂಲದ ಗುರೀಂದರ್ ಸಂದು ಮತ್ತು ಸನ್ವೀರ್ ಸಂಘ ಇಬ್ಬರೇ ಆಸ್ಟ್ರೇಲಿಯಾ ರಾಷ್ಟ್ರೀಯ ತಂಡದ ಪರ ಆಯ್ಕೆಯಾದವರು.
This News Article is a Copy of MYKHEL
14-01-26 01:34 pm
Bangalore Correspondent
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm