ಬ್ರೇಕಿಂಗ್ ನ್ಯೂಸ್
11-02-21 01:47 pm Source: MYKHEL Madhukara Shetty ಕ್ರೀಡೆ
ಟೀಮ್ ಇಂಡಿಯಾ ಅನುಭವಿ ಆಲ್ರೌಂಡರ್ ರವೀಂದ್ರ ಜಡೇಜಾ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಎಲ್ಲಾ ಪಂದ್ಯಗಳಿಂದಲೂ ಹೊರಗುಳೀಯುವ ಸಾಧ್ಯತೆ ಕಂಡು ಬರುತ್ತಿದೆ. ಗಾಯದಿಂದಾಗಿ ಬೆರಳು ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಜಡೇಜಾ ಅವರ ಚೇತರಿಕೆಗೆ ನಿರೀಕ್ಷೆಗಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತಿರುವುದೇ ಇದಕ್ಕೆ ಕಾರಣ ಎನ್ನಲಾಗಿದೆ. ಅಹ್ಮದಾಬಾದ್ನಲ್ಲಿ ನಡೆಯುವ ಮೂರು ಹಾಗೂ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಪಾಲ್ಗೊಳ್ಳುವ ದೃಷ್ಟಿಯಲ್ಲಿ ರವೀಂದ್ರ ಜಡೇಜಾ ಅವರನ್ನು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ(ಎನ್ಸಿಎ)ಯ ವೈದ್ಯಕೀಯ ಸಿಬ್ಬಂದಿಗಳು ಮೇಲ್ವಿಚಾರಣೆ ನಡೆಸುತ್ತಿದ್ದಾರೆ.
ರವೀಂದ್ರ ಜಡೇಜಾ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಸಿಡ್ನಿಯಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಕೈ ಬೆರಳಿಗೆ ಕಾಯವಾಗಿತ್ತು. ಹೀಗಾಗಿ ಬ್ರಿಸ್ಬೇನ್ನಲ್ಲಿ ನಡೆದ ನಿರ್ಣಾಯ ಟೆಸ್ಟ್ ಪಂದ್ಯದಿಂದಲೂ ಅವರು ಹೊರಗುಳಿದಿದ್ದರು. ಆಸ್ಟ್ರೇಲಿಯಾದಲ್ಲೇ ಶಸ್ತ್ರಚಿಕಿತ್ಸೆಗೆ ಒಳಗಾಗಿ ಭಾರತಕ್ಕೆ ಮರಳಿದ್ದರು ರವೀಂದ್ರ ಜಡೇಜಾ.
ರವೀಂದ್ರ ಜಡೇಜಾ ಟೆಸ್ಟ್ ಸರಣಿಯ ಅಂತಿಮ ಎರಡು ಪಂದ್ಯಗಳಿಗೆ ಲಭ್ಯತೆಯ ಬಗ್ಗೆ ಅನುಮಾನಗಳು ಉಳಿದಿರುವಂತೆಯೇ ಸೀಮಿತ ಓವರ್ಗಳ ಸರಣಿಯಲ್ಲಿ ಪಾಲ್ಗೊಳ್ಳುವ ಬಗ್ಗೆಯೂ ಸ್ಪಷ್ಟತೆಯಿಲ್ಲ. ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ ಅಂತಿಮವಾದ ಬಳಿಕ ಐದು ಪಂದ್ಯಗಳ ಟಿ20 ಸರಣಿ ಹಾಗೂ 3 ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ರವೀಂದ್ರ ಜಡೇಜಾ ಅವರ ಅಲಭ್ಯರಾಗುಗುವುದು ಖಚಿತವಾದರೆ ಮೂರು ಹಾಗೂ ನಾಲ್ಕನೇ ಟೆಸ್ಟ್ ಪಂದ್ಯದಲ್ಲೂ ಟೀಮ್ ಇಂಡಿಯಾಗೆ ತಂಡದ ಸಂಯೋಜನೆ ಕಠಿಣವೆನಿಸಲಿದೆ.
ಮೊದಲ ಪಂದ್ಯದಲ್ಲಿ ನದೀಮ್ ಅವಕಾಶವನ್ನು ಪಡೆದು ಎರಡು ಇನ್ನಿಂಗ್ಸ್ಗಳಲ್ಲಿ ನಾಲ್ಕು ವಿಕೆಟ್ ಪಡೆದರಾದರೂ ರನ್ ಬಿಟ್ಟುಕೊಡುವುದರಲ್ಲಿ ನಿಯಂತ್ರಣ ಸಾಧಿಸಲು ವಿಫಲರಾದರು. 3.8ರ ಸರಾಸರಿಯಲ್ಲಿ ಮೊದಲ ಇನ್ನಿಂಗ್ಸ್ನಲ್ಲಿ ರನ್ ಬಿಟ್ಟುಕೊಟ್ಟರೆ ಎರಡನೇ ಇನ್ನಿಂಗ್ಸ್ನಲ್ಲಿ 4.4ರ ಸರಾಸರಿಯಲ್ಲಿ ರನ್ ಬಿಟ್ಟುಕೊಟ್ಟರು.
ಎರಡನೇ ಟೆಸ್ಟ್ ಪಂದ್ಯ ಶನಿವಾರ ಆರಂಭವಾಗಲಿದ್ದು ಟೀಮ್ ಇಂಡಿಯಾಗೆ ತಂಡದ ಆಯ್ಕೆ ಸವಾಲಾಗಿದೆ. ಮೊದಲ ಪಂದ್ಯದಲ್ಲಿನ ಸೋಲು ತಂಡಕ್ಕೆ ಹಿನ್ನಡೆಯನ್ನುಂಟು ಮಾಡಿದ್ದರೆ ಇಂಗ್ಲೆಂಡ್ಗೆ ಸಹಜವಾಗಿಯೇ ಇದು ದೊಡ್ಡ ಉತ್ಸಾಹವನ್ನು ತುಂಬಿದೆ.
This News Article is a Copy of MYKHEL
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 10:57 am
HK News Staffer
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm