ಬ್ರೇಕಿಂಗ್ ನ್ಯೂಸ್
12-02-21 05:02 pm Source: MYKHEL Madhukara Shetty ಕ್ರೀಡೆ
ಟೀಮ್ ಇಂಡಿಯಾದ ವಿಕೆಟ್ ಕೀಪರ್ ರಿಷಭ್ ಪಂತ್ ಇತ್ತೀಚೆಗೆ ಬ್ಯಾಟಿಂಗ್ನಲ್ಲಿ ಶ್ರೇಷ್ಠ ಬ್ಯಾಟಿಂಗ್ ಪ್ರದರ್ಶನವನ್ನು ನೀಡುತ್ತಿದ್ದಾರೆ. ಆದರೆ ಪಂತ್ ವಿಕೆಟ್ ಕೀಪಿಂಗ್ ಬಗ್ಗೆ ಇನ್ನೂ ಸಾಕಷ್ಟು ಚರ್ಚೆಗಳು ನಡೆಯುತ್ತಿದೆ. ವಿಕೆಟ್ ಕೀಪರ್ ಆಗಿ ಪಂತ್ ಸಾಕಷ್ಟು ಸುಧಾರಣೆಯಾಗಬೇಕಿರುವುದು ಪ್ರದರ್ಶನದಿಂದಲೇ ಅರಿವಿಗೆ ಬರುತ್ತಿದೆ. ಈ ಬಗ್ಗೆ ಉಪನಾಯಕ ಅಜಿಂಕ್ಯ ರಹಾನೆ ಪ್ರತಿಕ್ರಿಯಿಸಿದ್ದಾರೆ.
ಅಜಿಂಕ್ಯ ರಹಾನೆ ವಿಕೆಟ್ ಕೀಪಿಂಗ್ನಲ್ಲಿ ರಿಷಭ್ ಪಂತ್ ಮೇಲೆ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ. ಭಾರತದಲ್ಲಿ ಹೆಚ್ಚಿನ ಪಂದ್ಯಗಳನ್ನು ಆಡುತ್ತಿದ್ದಂತೆಯೇ ರಿಷಭ್ ಪಂತ್ ಅವರ ವಿಕೆಟ್ ಕೀಪಿಂಗ್ ಕೌಶಲ್ಯದಲ್ಲಿ ಸುಧಾರಣೆ ಕಾಣಲಿದೆ ಎಂದಿದ್ದಾರೆ ಅಜಿಂಕ್ಯ ರಹಾನೆ.
"ವಿಕೆಟ್ ಕೀಪರ್ ಆಗಿ ರಿಷಭ್ ಪಂತ್ ಭಾರತದಲ್ಲಿ ಹೆಚ್ಚಿನ ಪಂದ್ಯಗಳನ್ನು ಆಡಿದಂತೆ ಉತ್ತಮವಾಗಲಿದ್ದಾರೆ. ಬ್ಯಾಟ್ನಲ್ಲಿ ಅವರು ಯಾವ ರೀತಿ ಸಾಧನೆ ಮಾಡಲಿದ್ದಾರೆ ಎಂಬುದು ನಮಗೆ ತಿಳಿದಿದೆ. ಅಂತಾ ಆಟಗಾರನ ಬೆಂಬಲಕ್ಕೆ ನಾವು ನಿಲ್ಲಬೇಕಿದೆ" ಎಂದು ಅಜಿಂಕ್ಯ ರಹಾನೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನು ಇದಕ್ಕೂ ಮುನ್ನ ಟೀಮ್ ಇಂಡಿಯಾದ ಅನುಭವಿ ಆಟಗಾರ ಚೇತೇಶ್ವರ್ ಪೂಜಾರ ರಿಷಭ್ ಪಂತ್ ಬ್ಯಾಟಿಂಗ್ ವೇಳೆ ಕೆಲ ಸಂದರ್ಭಗಳಲ್ಲಿ ಪರಿಸ್ಥಿತಿಯನ್ನು ಅರಿತು ಆಡುವುದನ್ನು ಅರ್ಥ ಮಾಡಿಕೊಳ್ಳಬೇಕು ಎಂದಿದ್ದರು. ಪಂತ್ ಮೊದಲ ಟೆಸ್ಟ್ನಲ್ಲಿ 88 ಎಸೆತಗಳಲ್ಲಿ 91 ರನ್ ಬಾರಿಸಿ ವಿಕೆಟ್ ಒಪ್ಪಿಸಿದ್ದರು.
ವಿಕೆಟ್ ಕೀಒರ್ ಆಗಿ ಅದ್ಭುತ ಪ್ರದರ್ಶನವನ್ನು ನೀಡಬಲ್ಲ ಸಾಮರ್ಥ್ಯ ಹೊಂದಿರುವ ಅನುಭವಿ ವೃದ್ಧೀಮಾನ್ ಸಾಹಾ ಬದಲಿಗೆ ಬ್ಯಾಟಿಂಗ್ ಸಾಮರ್ಥ್ಯದ ಕಾರಣದಿಂದ ಇಂಗ್ಲೆಂಡ್ ವಿರುದ್ಧದ ಸರಣಿಯ ಮೊದಲ ಪಂದ್ಯಕ್ಕೆ ರಿಷಭ್ ಪಂತ್ ಆಯ್ಕೆಯಾಗಿದ್ದರು. ಎರಡನೇ ಟೆಸ್ಟ್ನ ಆಡುವ ಬಳಗದಲ್ಲೂ ಪಂತ್ ಕಾಣಿಸಿಕೊಳ್ಳುವ ಬಗ್ಗೆ ಯಾವುದೇ ಅನುಮಾನಗಳಿಲ್ಲ.
This News Article is a Copy of MYKHEL
14-01-26 02:54 pm
Bangalore Correspondent
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm