ಬ್ರೇಕಿಂಗ್ ನ್ಯೂಸ್
07-03-21 04:11 pm Source: MYKHEL Madhukara Shetty ಕ್ರೀಡೆ
ಐಪಿಎಲ್ನ 14ನೇ ಆವೃತ್ತಿಯ ವೇಳಾಪಟ್ಟಿ ಬಿಡುಗಡೆಯಾಗಿದೆ. ಈ ಮೂಲಕ ಐಪಿಎಲ್ ಆರಂಭದ ಚಟುವಟಿಕೆಗಳು ಮತ್ತಷ್ಟು ಗರಿಗೆದರಲು ಆರಂಭವಾಗಿದೆ. ಈ ವೇಳಾಪಟ್ಟಿ ಬಿಡುಗಡೆಯಾಗುವ ಮೂಲಕ ಸಾಕಷ್ಟು ಕುತೂಹಲಕಾರಿ ಪ್ರಶ್ನೆಗಳಿಗೆ ಉತ್ತರಗಳೂ ದೊರೆತಿದೆ.
ಭಾರತ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ಅಂತ್ಯವಾಗಿ 19 ದಿನಗಳ ಬಳಿಕ ಈ ಮಹತ್ವದ ಟೂರ್ನಿಗೆ ಚಾಲನೆ ದೊರೆಯಲಿದೆ. ಐಪಿಎಲ್ ಯಾವಾಗ ಆರಂಭವಾಗಲಿದೆ ಎಂಬುದರಿಂದ ಹಿಡಿದು ಈ ಬಾರಿಯ ಐಪಿಎಲ್ಗೆ ಆತಿಥ್ಯವಹಿಸುವ ಕ್ರೀಡಾಂಗಣಗಳು ಯಾವುದು? ಯಾವಾಗ ಫೈನಲ್ ಪಂದ್ಯ ನಡೆಯಲಿದೆ? ಪ್ರೇಕ್ಷಕರಿಗೆ ಕ್ರೀಡಾಂಗಣಕ್ಕೆ ಅವಕಾಶಗಳು ದೊರೆಯಲಿದೆಯಾ ಎಂಬುದು ಸೇರಿದಂತೆ ಹಲವಾರು ಪ್ರಶ್ನೆಗಳು ಅಭಿಮಾನಿಗಳಲ್ಲಿ ಮೂಡಿತ್ತು. ಈ ಬಗೆಗಿನ ಉತ್ತರಕ್ಕಾಗಿ ಅಭಿಮಾನಿಗಳು ಕಾದು ಕುಳಿತಿದ್ದರು.
ಈ ಪ್ರಶ್ನೆಗಳಿಗೆ ಉತ್ತರಗಳು ದೊರೆಯುವ ಜೊತೆಗೆ ಕೆಲ ಕುತೂಹಲಕಾರಿ ಸಂಗತಿಗಳು ಕೂಡ ಬೆಳಕಿಗೆ ಬಂದಿದೆ.
ಆರು ಕ್ರೀಡಾಂಗಣದಲ್ಲಿ ಪಂದ್ಯಗಳು
ಭಾರತದಲ್ಲಿ ಪ್ರತಿ ಬಾರಿಯೂ ಪಂದ್ಯಗಳು ನಡೆಯುವಾಗ ಪ್ರತಿ ತಂಡಗಳಿಗೂ ತವರು ಅಂಗಳಗಳು ಇದ್ದು ತವರು ಹಾಗೂ ಹೊರಗಿನ ಅಂಗಳದಲ್ಲಿ ಪಂದ್ಯಗಳನ್ನು ಆಡುವುದು ಸಾಮಾನ್ಯವಾಗಿದೆ. ಆದರೆ ಈ ಬಾರಿ ಕೊರೊನಾ ವೈರಸ್ನ ಕಾರಣದಿಂದಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಕೇವಲ 6 ಅಂಗಳಗಳಲ್ಲಿ ಪಂದ್ಯಗಳು ನಡೆಯಲಿದೆ. ಚೆನ್ನೈ, ಮುಂಬೈ, ಅಹ್ಮದಾಬಾದ್, ಡೆಲ್ಲಿ, ಬೆಂಗಳೂರು ಹಾಗೂ ಕೊಲ್ಕತ್ತಾ ಕ್ರೀಡಾಂಗಣಗಳಲ್ಲಿ ಪಂದ್ಯಗಳು ನಡೆಯಲಿದೆ
ತವರು ಅಂಗಳದಲ್ಲಿ ಆಡಲ್ಲ ತಂಡಗಳು
ಮತ್ತೊಂದು ಕುತೂಹಲಕಾರಿ ಸಂಗತಿಯೆಂದರೆ ಈ ಬಾರಿಯ ಐಪಿಎಲ್ನಲ್ಲಿ ಯಾವುದೇ ತಂಡಗಳು ಕೂಡ ತವರು ಕ್ರೀಡಾಂಗಣದಲ್ಲಿ ಎದುರಾಳಿಯನ್ನು ಎದುರಿಸುವುದಿಲ್ಲ. ಅಂದರೆ ಉದಾಹರಣೆಗೆ ಆರ್ಸಿಬಿ ತಂಡ ಬೆಂಗಳೂರಿನ ಕ್ರೀಡಾಂಗಣದಲ್ಲಿ ಒಂದೇ ಒಂದು ಪಂದ್ಯವನ್ನೂ ಆಡುವುದಿಲ್ಲ. ಪ್ರತಿಯೊಂದು ತಂಡಕ್ಕೂ ಇದೇ ರೀತಿಯಲ್ಲಿ ಪಂದ್ಯಗಳನ್ನು ಆಯೋಜಿಸಲಾಗಿದೆ. ಹೀಗಾಗಿ ಪ್ರತಿಯೊಂದು ಪಂದ್ಯವೂ ಕೂಡ ತಟಸ್ಥ ಕೇಂದ್ರಗಳಲ್ಲಿಯೇ ನಡೆಯಲಿದೆ. ಹೆಚ್ಚಿನ ಪ್ರಯಾಣವನ್ನು ತಪ್ಪಿಸುವುದು ಹಾಗೂ ಪ್ರತಿ ಫ್ರಾಂಚೈಸಿಗೂ ಸಮಾನ ಅವಕಾಶವನ್ನು ನಿಡುವ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಮೊದಲಾರ್ಧದಲ್ಲಿ ಖಾಲಿ ಕ್ರೀಡಾಂಗಣದಲ್ಲಿ ಪಂದ್ಯ
ಕೊರೊನಾ ವೈರಸ್ನ ಮುಂಜಾಗ್ರಥಾ ಕ್ರಮವಾಗಿ ಈ ಬಾರಿಯ ಐಪಿಎಲ್ನ ಮೊದಲಾರ್ಧದ ಪಂದ್ಯಗಳು ಮುಚ್ಚಿದ ಕ್ರೀಡಾಂಗಣಗಳಲ್ಲಿಯೇ ನಡೆಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಮೊದಲಾರ್ಧ ಅಂತ್ಯದ ಬಳಿಕ ಮತ್ತೊಮ್ಮೆ ಪರಿಶೀಲನೆಯನ್ನು ನಡೆಸಿ ಪ್ರೇಕ್ಷಕರಿಗೆ ಅವಕಾಶ ಮಾಡಿಕೊಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ತೀರ್ಮಾನಿಸಲಾಗಿದೆ.
This News Article Is A Copy Of MYKHEL
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 10:33 pm
HK News Desk
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
14-10-25 10:36 pm
Mangalore Correspondent
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
ಬಿ.ಸಿ ರೋಡ್ ; ಹೆದ್ದಾರಿ ಬದಿ ಕಾರು ರಿಪೇರಿ ಮಾಡುತ್...
14-10-25 05:46 pm
14-10-25 04:44 pm
HK News Desk
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm