ಬ್ರೇಕಿಂಗ್ ನ್ಯೂಸ್
09-03-21 01:34 pm Source: MYKHEL ಕ್ರೀಡೆ
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟಿ20 ಸರಣಿಯಿಂದ ಇಂಗ್ಲೆಂಡ್ ವೇಗಿ ಜೋಫ್ರಾ ಆರ್ಚರ್ ಹೊರಗುಳಿಯಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿತ್ತು. ಆರ್ಚರ್ಗೆ ಟೆಸ್ಟ್ ಸರಣಿಯ ಸಂದರ್ಭದಲ್ಲಿ ಕಾಡಿದ ಗಾಯದ ಸಮಸ್ಯೆಯ ಕಾರಣದಿಂದಾಗಿ ಚುಟುಕು ಸರಣಿಯಿಂದ ಹೊರಗುಳಿಯುವ ಆತಂಕವನ್ನು ಎದುರಿಸಿದ್ದರು.
ಆದರೆ ಆರ್ಚರ್ ಮೊದಲ ಟಿ20 ಪಂದ್ಯದಲ್ಲಿ ಆಡಲು ಸಮರ್ಥರಾಗಿದ್ದಾರೆ ಎನ್ನಲಾಗಿದೆ. ಜೋಫ್ರಾ ಆರ್ಚರ್ ಮೊದಲ ಟೆಸ್ಟ್ ಪಂದ್ಯದಲ್ಲಿ ಆಡಲು ಲಭ್ಯರಾಗುವ ಬಗ್ಗೆ ಇನ್ನಷ್ಟೇ ಅಧಿಕೃತ ಘೋಷಣೆಯಾಗಬೇಕಿದೆ. ಆದರೆ ಕಳೆದ ಭಾನುವಾರ ಹಾಗೂ ಸೋಮವಾರ ಜೋಫ್ರಾ ಆರ್ಚರ್ ಅವರು ನೆಟ್ಸ್ನಲ್ಲಿ ಅಭ್ಯಾಸ ನಡೆಸುವಾಗ ಅವರ ಚೇತರಿಕೆಯ ಮೇಲೆ ವೈದ್ಯಕೀಯ ತಂಡ ನಿಗಾವಹಿಸಿತ್ತು.
25ರ ಹರೆಯದ ಆಲ್ರೌಂಡರ್ ಭಾರತದ ವಿರುದ್ಧಧ ಟೆಸ್ಟ್ ಸರಣಿಯ ಅಂತಿಮ ಪಂದ್ಯವನ್ನು ಗಾಯದ ಕಾರಣದಿಂದಾಗಿ ತಪ್ಪಿಸಿಕೊಂಡಿದ್ದರು. ಮೊಣಕೈ ನೋವಿಗೆ ಒಳಗಾಗಿದ್ದ ಆರ್ಚರ್ ಒಳಗಾಗಿದ್ದರು. ನಾಲ್ಕು ಪಂದ್ಯಗಳ ಈ ಟೆಸ್ಟ್ ಸರಣಿಯನ್ನು ಭಾರತ 3-1 ಅಂತರದಿಂದ ಗೆದ್ದು ಬೀಗಿದೆ.
ಪ್ರವಾಸಿ ಇಂಗ್ಲೆಂಡ್ ತಂಡ ಈಗ ಸಂಪೂರ್ಣ ಪ್ರಮಾಣದ ತಂಡದೊಂದಿಗೆ ಸೀಮಿತ ಓವರ್ಗಳ ಸರಣಿಗೆ ಸಿದ್ದವಾಗುತ್ತಿದೆ. ಈ ಸರಣಿಗಾಗಿ ಇಂಗ್ಲೆಂಡ್ ತಂಡದ ಚಿಕ್ಕಾಣಿಯನ್ನು ಇಯಾನ್ ಮಾರ್ಗನ್ ವಹಿಸಿಕೊಳ್ಳಲಿದ್ದಾರೆ. ಐದು ಟಿ20 ಹಾಗೂ 3 ಏಕದಿನ ಪಂದ್ಯಗಳ ಸರಣಿ ಭಾರತದ ವಿರುದ್ಧ ಇಂಗ್ಲೆಂಡ್ ಆಡಲಿದೆ.
ಜೋಫ್ರಾ ಆರ್ಚರ್ ಗಾಯ ರಾಜಸ್ಥಾನ್ ರಾಯಲ್ಸ್ ತಂಡಕ್ಕೂ ಆತಂಕವನ್ನುಂಟು ಮಾಡಿದೆ. ಆರ್ಆರ್ ತಂಡದ ಪ್ರಮುಖ ವೇಗಿಯಾಗಿರುವ ಆರ್ಚರ್ ಈ ಬಾರಿಯ ಐಪಿಎಲ್ನಲ್ಲಿಯೂ ಆಡುವ ಬಗ್ಗೆ ಅನುಮಾನಗಳು ಳುವಂತೆ ಮಾಡಿತ್ತು. ಆದರೆ ಭಾರತದ ವಿರುದ್ಧದ ಟಿ20 ಸರಣಿಗೆ ಲಭ್ಯರಾಗಲಿದ್ದಾರೆ ಎಂಬ ಸುದ್ಧಿ ಒಂದಷ್ಟು ನಿರಾಳತೆ ಮೂಡುವಂತೆ ಮಾಡಿದೆ.
This News Article Is A Copy Of MYKHEL
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
14-10-26 02:00 pm
HK News Staffer
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm