ಬ್ರೇಕಿಂಗ್ ನ್ಯೂಸ್
10-03-21 03:58 pm Source: MYKHEL ಕ್ರೀಡೆ
ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವೆ ನಡೆಯುವ ಐದು ಪಂದ್ಯಗಳ ಟಿ20 ಸರಣಿಯ ಹಿನ್ನೆಲೆಯಲ್ಲಿ ಇಂಗ್ಲೆಂಡ್ ತಂಡದ ಬ್ಯಾಟ್ಸ್ಮನ್ ಜೋಸ್ ಬಟ್ಲರ್ ಪ್ರತಿಕ್ರಿಯೆ ನೀಡಿದ್ದಾರೆ. ಟೀಮ್ ಇಂಡಿಯಾ ಎಲ್ಲಾ ಮಾದರಿಯ ಕ್ರಿಕೆಟ್ನಲ್ಲಿ ಅತ್ಯಂತ ಬಲಿಷ್ಠ ತಂಡವಾಗಿದ್ದು ಅದರಲ್ಲೂ ತವರಿನಲ್ಲಿ ಸೋಲಿಸುವುದು ಅತ್ಯಂತ ಕಠಿಣ ಎಂಬ ಮಾತನ್ನು ಅವರು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಜೊಸ್ ಬಟ್ಲರ್ ಮುಂಬರುವ ಟಿ20 ವಿಶ್ವಕಪ್ನಲ್ಲಿ ಕಪ್ ಗೆಲ್ಲುವ ಫೇವರೀಟ್ ತಂಡ ಭಾರತ ಎಂಬ ಮಾತನ್ನು ಬಟ್ಲರ್ ಹೇಳಿದ್ದಾರೆ. ಮುಂಬರುವ ಅಕ್ಟೋಬರ್- ನವೆಂಬರ್ ತಿಂಗಳನಲ್ಲಿ ಭಾರತ ಈ ಮಹತ್ವದ ಟೂರ್ನಿಯನ್ನು ಆಯೋಜನೆ ಮಾಡಲಿದೆ. ವಿರಾಟ್ ಕೊಹ್ಲಿ ಪಡೆ ಸೇರಿಕೊಳ್ಳಲಿದ್ದಾರೆ ಯುವ ಸ್ಪಿನ್ನರ್ ರಾಹುಲ್ ಚಾಹರ್ 2013ರರಲ್ಲಿ ಭಾರತ ಚಾಂಪಿಯನ್ಸ್ ಟ್ರೋಫಿ ಗೆದ್ದ ಬಳಿಕ ಯಾವುದೇ ಐಸಿಸಿ ಟೂರ್ನಿಯನ್ನು ಗೆದ್ದಿಲ್ಲ.
ಹೀಗಾಗಿ ಈ ಮಹತ್ವದ ಟೂರ್ನಿಯ ಮೇಲೆ ಭಾರತ ಕಣ್ಣಿಟ್ಟಿದೆ. ಮತ್ತೊಂದೆಡೆ ಟಿ20 ವಿಶ್ವಕಪ್ ಜಯಿಸಿ ಭಾರತ ದಶಕದ ಮೇಲಾಗಿದೆ. ಹೀಗಾಗಿ ಈ ಟೂರ್ನಿ ಗೆಲ್ಲಲು ಭಾರತ ತನ್ನೆಲ್ಲಾ ಪ್ರಯತ್ನವನ್ನು ನಡೆಸಲಿದೆ. 2007ರಲ್ಲಿ ನಡೆದ ಟಿ20 ಉದ್ಘಾಟನಾ ಟೂರ್ನಿಯಲ್ಲಿ ಭಾರತ ಪ್ರಶಸ್ತಿಯನ್ನು ಗೆದ್ದಿತ್ತು. "ವಿಶ್ವಕಪ್ನಂತಾ ಟೂರ್ನಿಯಲ್ಲಿ ಭಾರತ ಬಲಿಷ್ಠವಾಗಿರುತ್ತದೆ. ಅದರಲ್ಲೂ ಈ ಬಾರಿ ಭಾರತದಲ್ಲೇ ಈ ಟೂರ್ನಿ ನಡೆಯುತ್ತಿರುವುದು ಭಾರತ ಈ ಟೂರ್ನಿಯನ್ನು ಗೆಲ್ಲುವ ಫೇವರೀಟ್ ತಂಡ" ಎಂದು ಜೋಸ್ ಬಟ್ಲರ್ ಹೇಳಿಕೆಯನ್ನು ನೀಡಿದ್ದಾರೆ.
"ಸಾಕಷ್ಟು ಅತ್ಯುತ್ತಮ ತಂಡಗಳು ಇವೆ. ಕಳೆದ ಕೆಲ ವಿಶ್ವಕಪ್ಗಳನ್ನು ಗಮನಸಿದರೆ ಆಯೋಜನಾ ತಂಡಗಳು ಅತ್ಯುತ್ತಮ ಪ್ರದರ್ಶನಗಳನ್ನು ನೀಡಿಕೊಂಡು ಬಂದಿದ್ದಾರೆ. ಭಾರತ ಖಂಡಿತವಾಗಿಯೂ ಪ್ರತಿಯೊಂದು ಮಾದರಿಯಲ್ಲೂ ಬಲಿಷ್ಠವಾದ ತಂಡವಾಗಿದೆ. ಟಿ20ಯಲ್ಲೂ ಅದು ಭಿನ್ನವಾಗಿಲ್ಲ. ಭಾರತದಲ್ಲಿ ಆಡುವಾಗ ಭಾರತ ಯಾವಾಗಲೂ ಫೇವರೀಟ್ ತಂಡವಾಗಿರುತ್ತದೆ" ಎಂದು ಜೋಸ್ ಬಟ್ಲರ್ ಹೇಳಿಕೆಯನ್ನು ನೀಡಿದ್ದಾರೆ.
This News Article Is A Copy Of MYKHEL
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
14-10-26 02:00 pm
HK News Staffer
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm