ಬ್ರೇಕಿಂಗ್ ನ್ಯೂಸ್
13-03-21 12:19 pm Source: MYKHEL ಕ್ರೀಡೆ
ಮೊದಲ ಪಂದ್ಯದಲ್ಲಿ ಬೃಹತ್ ಅಂತರದ ಸೋಲನ್ನು ಅನುಭವಿಸಿದ ನಂತರ ಟೀಮ್ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಶ್ರೇಯಸ್ ಐಯ್ಯರ್ ಪ್ರತಿಕ್ರಿಯಿಸಿದ್ದಾರೆ. ಮೊದಲ ಪಂದ್ಯದದ ಸೋಲಿನ ಹಿನ್ನೆಲೆಯಲ್ಲಿ ನಾವು ನಮ್ಮ ಬ್ಯಾಟಿಂಗ್ ವಿಧಾನದಲ್ಲಿ ಬದಲಾವಣೆಯನ್ನು ಮಾಡಿಕೊಳ್ಳುವುದಿಲ್ಲ.
ತಂಡದಲ್ಲಿ ಪವರ್ಹಿಟ್ಟರ್ಸ್ ಹಾಗೂ ಖ್ಯಾತನಾಂ ಆಟಗಾರರು ಇರುವುದೇ ಇದಕ್ಕೆ ಕಾರಣ ಎಂದು ಐಯ್ಯರ್ ಹೇಳಿದ್ದಾರೆ. ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತದ ಬ್ಯಾಟಿಂಗ್ ವಿಭಾಗ ನಿಗದಿತ 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು ಕೇವಲ 124 ರನ್ಗಳಿಗೆ ಕುಸಿಯಿತು.
ಭಾರತ ತಂಡ ನೀಡಿದ ಈ ಮೊತ್ತವನ್ನು ಬೆನ್ನಟ್ಟಿದ ಇಂಗ್ಲೆಂಡ್ ಕೇವಲ 15.3 ಓವರ್ಗಳಲ್ಲಿ ಈ ಗುರಿಯನ್ನು ಎರಡು ವಿಕೆಟ್ ಕಳೆದುಕೊಂಡು ತಲುಪಿತ್ತು. ಆರ್ಚರ್ ಎಸೆತಕ್ಕೆ ರಿವರ್ಸ್ಸ್ವೀಪ್ ಸಿಕ್ಸರ್ ಬಾರಿಸಿದ ರಿಷಭ್ ಪಂತ್: ವಿಡಿಯೋ "ಟೀಮ್ ಇಂಡಿಯಾ ವಿಚಾರಕ್ಕೆ ಬರುವಾಗ ನೀವು ಯಾವ ಬ್ಯಾಟಿಂಗ್ ಸ್ಥಾನದಲ್ಲಿ ಬ್ಯಾಟಿಂಗ್ ಮಾಡುತ್ತೀರಿ ಅದಕ್ಕೆ ಹೊಂದಿಕೊಳ್ಳಬೇಕಾಗುತ್ತದೆ.
ಪ್ರಾಮಾಣಿಕವಾಗಿ ಹೇಳಬೇಕೆಂದರೆ, ನಾನು ಯಾವುದೇ ಬದಲಾವಣೆಗಳನ್ನು ಮಾಡಿಲ್ಲ. ನೀವು ಯಾವ ಕ್ರಮಾಂಕದಲ್ಲಿ ಹೋಗುತ್ತೀರಿ ಎಂಬುದಕ್ಕೆ ಮನಸ್ಥಿತಿ ಮುಖ್ಯವಾಗುತ್ತದೆ. ಪರಿಸ್ಥಿತಿಯನ್ನು ನೋಡಿಕೊಂಡು ಆಡುವುದು ತಂಡಕ್ಕೆ ಮುಖ್ಯವಾಗುತ್ತದೆ" ಎಂದಿದ್ದಾರೆ ಶ್ರೇಯಸ್ ಐಯ್ಯರ್. "ನಾನು ಪರಿಸ್ಥಿತಿಗೆ ಪೂರಕವಾಗಿ ಬ್ಯಾಟಿಂಗ್ ನಡೆಸಿದೆ. ಇವತ್ತು ಪರಿಸ್ಥಿತಿ ಸವಾಲಿನದ್ದಾಗಿತ್ತು.
ನಾವು ನಮ್ಮ ಸ್ವಾಭಾವಿಕ ಆಟವನ್ನು ಪ್ರದರ್ಶಿಸಬೇಕಾಗಿತ್ತು ಅದರ ಜೊತೆಯಲ್ಲಿಯೇ ತಂಡದ ಸ್ಕೋರ್ಬೋರ್ಡ್ನಲ್ಲ್ಇ ಏರಿಕೆ ಕಾಣುವಂತೆ ಮಾಡಬೇಕಿತ್ತು. ನಾವು ನಮ್ಮ ಬ್ಯಾಟಿಂಗ್ ವಿಧಾನದಲ್ಲಿ ಬದಲಾವಣೆ ಮಾಡಿಕೊಳ್ಳುವುದಿಲ್ಲ. ನಮ್ಮ ಬ್ಯಾಟಿಂಗ್ ಕ್ರಮಾಂಕದಲ್ಲಿ ಎಂತಾ ಪವರ್ಹಿಟ್ಟರ್ಗಳು ಇದ್ದಾರೆ ಎಂಬುದನ್ನು ಗಮನಿಸಿ" ಎಂದು ಶ್ರೇಯಸ್ ಐಯ್ಯರ್ ಪ್ರತಿಕ್ರಿಯಿಸಿದರು.
This News Article Is A Copy Of MYKHEL
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
14-10-26 02:00 pm
HK News Staffer
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm