ಬ್ರೇಕಿಂಗ್ ನ್ಯೂಸ್
07-04-21 02:52 pm Source: MYKHEL ಕ್ರೀಡೆ
ಏಪ್ರಿಲ್ 9ರಿಂದ 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭವಾಗುತ್ತಿದೆ. ಇನ್ನೇನು ಐಪಿಎಲ್ ಆರಂಭವಾಗುವ ಸಮಯ ಹತ್ತಿರ ಬರುತ್ತಿದ್ದಂತೆಯೇ ಐಪಿಎಲ್ ಟೂರ್ನಿಯಲ್ಲಿ ಭಾಗವಹಿಸುವ ಹಲವಾರು ಆಟಗಾರರಲ್ಲಿ ಕೊವಿಡ್ ಸೋಂಕು ಕಾಣಿಸಿಕೊಂಡಿತ್ತು. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆರಂಭಿಕ ಆಟಗಾರ ದೇವದತ್ ಪಡಿಕ್ಕಲ್ ಅವರಿಗೂ ಸಹ ಕೊರೊನಾ ಸೋಂಕು ತಗುಲಿತ್ತು. ಮಾರ್ಚ್ 22ರಂದು ದೇವದತ್ ಪಡಿಕ್ಕಲ್ ಅವರಿಗೆ ಕೊರೊನಾ ಸೊಂಕು ತಗುಲಿರುವುದು ದೃಢಪಟ್ಟಿತ್ತು.
ಸೋಂಕು ದೃಢಪಟ್ಟ ಬೆನ್ನಲ್ಲೇ ದೇವದತ್ ಪಡಿಕ್ಕಲ್ ಹೋಮ್ ಕ್ವಾರಂಟೈನ್ ಗೆ ಒಳಗಾದರು. ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದ್ದು ದೇವದತ್ ಪಡಿಕ್ಕಲ್ ಅವರಿಗೆ ಎರಡನೇ ಟೆಸ್ಟ್ನಲ್ಲಿ ಕೊವಿಡ್ 19 ವರದಿ ನೆಗೆಟಿವ್ ಬಂದಿರುವ ಕಾರಣ ಮತ್ತೆ ದೇವದತ್ ಪಡಿಕ್ಕಲ್ ಆರ್ಸಿಬಿ ಕ್ಯಾಂಪ್ ಸೇರಿಕೊಂಡಿದ್ದಾರೆ ಈ ಸಂತಸದ ವಿಷಯವನ್ನು ದೇವದತ್ ಪಡಿಕ್ಕಲ್ ವಿಡಿಯೋ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.
ಆರ್ಸಿಬಿ ಟ್ವಿಟರ್ ಖಾತೆಯಲ್ಲಿ ಪಡಿಕ್ಕಲ್ ಮಾತನಾಡಿರುವ ವಿಡಿಯೋವನ್ನು ಶೇರ್ ಮಾಡಲಾಗಿದೆ. ಪಡಿಕ್ಕಲ್ ಅವರಿಗೆ ಕೊರೊನಾ ವರದಿ ನೆಗೆಟಿವ್ ಬಂದಿದ್ದು ಮತ್ತೆ ಆರ್ಸಿಬಿ ಬಳಗವನ್ನು ಸೇರಿಕೊಳ್ಳುತ್ತಿದ್ದಾರೆ. ಪಡಿಕ್ಕಲ್ ಸ್ಥಿತಿ ಉತ್ತಮವಾಗಿದ್ದು ಆರೋಗ್ಯವಾಗಿದ್ದಾರೆ ಹಾಗೂ ಆಡಲು ಸಿದ್ಧವಾಗಿದ್ದಾರೆ ಎಂದು ಆರ್ಸಿಬಿ ಟ್ವೀಟ್ ಮಾಡಿದೆ.
ಈ ಸಂತಸದ ವಿಷಯವನ್ನು ದೇವದತ್ ಪಡಿಕ್ಕಲ್ ವಿಡಿಯೋ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಆರ್ಸಿಬಿ ಟ್ವಿಟರ್ ಖಾತೆಯಲ್ಲಿ ಪಡಿಕ್ಕಲ್ ಮಾತನಾಡಿರುವ ವಿಡಿಯೋವನ್ನು ಶೇರ್ ಮಾಡಲಾಗಿದೆ. ಪಡಿಕ್ಕಲ್ ಅವರಿಗೆ ಕೊರೊನಾ ವರದಿ ನೆಗೆಟಿವ್ ಬಂದಿದ್ದು ಮತ್ತೆ ಆರ್ಸಿಬಿ ಬಳಗವನ್ನು ಸೇರಿಕೊಳ್ಳುತ್ತಿದ್ದಾರೆ. ಪಡಿಕ್ಕಲ್ ಸ್ಥಿತಿ ಉತ್ತಮವಾಗಿದ್ದು ಆರೋಗ್ಯವಾಗಿದ್ದಾರೆ ಹಾಗೂ ಆಡಲು ಸಿದ್ಧವಾಗಿದ್ದಾರೆ ಎಂದು ಆರ್ಸಿಬಿ ಟ್ವೀಟ್ ಮಾಡಿದೆ.
ವಿಡಿಯೋದಲ್ಲಿ ಮಾತನಾಡಿರುವ ದೇವದತ್ ಪಡಿಕ್ಕಲ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ನಿಮ್ಮ ಹಾರೈಕೆ ಮತ್ತು ಪ್ರಾರ್ಥನೆಗಳಿಗೆ ಧನ್ಯವಾದಗಳು ಅವು ನನಗೆ ತುಂಬಾ ಪ್ರಮುಖವಾದವು ಎಂದು ಪಡಿಕ್ಕಲ್ ಹೇಳಿದರು. ಎರಡು ವಾರಗಳ ಹಿಂದೆ ಕೊವಿಡ್ ಪಾಸಿಟಿವ್ ವರದಿ ಬಂದಿತ್ತು ತದನಂತರ ಹೋಮ್ ಕ್ವಾರಂಟೈನ್ ಆಗಿದ್ದೆ ಇದೀಗ ಎರಡೂ ಟೆಸ್ಟ್ ಗಳಲ್ಲಿ ಕೊವಿಡ್ 19 ವರದಿ ನೆಗೆಟಿವ್ ಬಂದಿರುವ ಹಿನ್ನಲೆಯಲ್ಲಿ ತಂಡವನ್ನು ಸೇರಿಕೊಂಡಿದ್ದೇನೆ ಎಂದು ಪಡಿಕ್ಕಲ್ ಸಂತಸ ವ್ಯಕ್ತಪಡಿಸಿದರು.
This News Article Is A Copy Of MYKHEL
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
14-10-26 02:00 pm
HK News Staffer
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm