ಬ್ರೇಕಿಂಗ್ ನ್ಯೂಸ್
15-04-21 03:20 pm Source: MYKHEL ಕ್ರೀಡೆ
ಬುಧವಾರ ( ಏಪ್ರಿಲ್ 14 ) ಐಸಿಸಿ ಹೊಸ ಏಕದಿನ ಶ್ರೇಯಾಂಕ ಪಟ್ಟಿಯನ್ನು ಬಿಡುಗಡೆಗೊಳಿಸಿತು. ಈ ನೂತನ ಏಕದಿನ ಶ್ರೇಯಾಂಕ ಪಟ್ಟಿಯ ಅತ್ಯುತ್ತಮ ಬ್ಯಾಟ್ಸ್ಮನ್ ರ್ಯಾಂಕಿಂಗ್ನಲ್ಲಿ ಪಾಕಿಸ್ತಾನದ ಪ್ರತಿಭಾವಂತ ಆಟಗಾರ ಬಾಬರ್ ಅಜಂ ಇದೇ ಮೊದಲ ಬಾರಿಗೆ ಅಗ್ರ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಈ ಮೂಲಕ ಸತತವಾಗಿ 1258 ದಿನಗಳ ಕಾಲ ಅತ್ಯುತ್ತಮ ಏಕದಿನ ಬ್ಯಾಟ್ಸ್ಮನ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದ ವಿರಾಟ್ ಕೊಹ್ಲಿ ಅವರು ಎರಡನೇ ಸ್ಥಾನಕ್ಕೆ ಜಾರಿದ್ದಾರೆ. ಐಸಿಸಿ ನೂತನ ಏಕದಿನ ಶ್ರೇಯಾಂಕ ಪಟ್ಟಿಯನ್ನು ಬಿಡುಗಡೆಗೊಳಿಸಿದ ಬೆನ್ನಲ್ಲೇ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ನೂತನ ಏಕದಿನ ನಂ.1 ಬ್ಯಾಟ್ಸ್ಮನ್ ಬಾಬರ್ ಅಜಂ ತನ್ನ ಸಹ ಆಟಗಾರ ಇಮಾಮ್ ಉಲ್ ಹಕ್ ಜೊತೆ ಮಾತುಕತೆ ನಡೆಸಿರುವ ವಿಡಿಯೋವೊಂದನ್ನು ಬಿಡುಗಡೆ ಮಾಡಿತು. ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಬಿಡುಗಡೆ ಮಾಡಿರುವ ಈ ವಿಡಿಯೋದಲ್ಲಿ ಬಾಬರ್ ಅಜಂ ತಮ್ಮ ಕ್ರಿಕೆಟ್ ಜೀವನದ ಕುರಿತು ಮತ್ತು ಈ ಮಟ್ಟದ ಸಾಧನೆ ಮಾಡಿದ ಹಾದಿ ಹೇಗಿತ್ತು ಎಂಬುದನ್ನು ಹಂಚಿಕೊಂಡರು.
ಇದೇ ವೇಳೆ ಬಾಬರ್ ಅಜಂ ವಿರಾಟ್ ಕೊಹ್ಲಿ ಅವರು ನೀಡಿದ್ದ ಸಲಹೆಯೊಂದನ್ನು ಬಿಚ್ಚಿಟ್ಟಿದ್ದಾರೆ. ಹೌದು ಬಾಬರ್ ಅಜಂಗೆ ವಿರಾಟ್ ಕೊಹ್ಲಿ ಉತ್ತಮ ಬ್ಯಾಟಿಂಗ್ ಮಾಡುವುದು ಹೇಗೆ ಎಂಬುದರ ಕುರಿತು ಸಲಹೆಯನ್ನು ನೀಡಿದ್ದರು.
ನೆಟ್ ಪ್ರಾಕ್ಟೀಸ್ ಮಾಡುವ ವೇಳೆ ಗಂಭೀರವಾಗಿ ನಾನು ಅಭ್ಯಾಸದಲ್ಲಿ ತೊಡಗುತ್ತಿರಲಿಲ್ಲ ಹೀಗಾಗಿ ಪಂದ್ಯದಲ್ಲಿ ನಾನು ಹೇಗೆ ಆಟವಾಡುತ್ತೇನೆ ಅಂತ ಭಯವಿತ್ತು ಆ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಅವರ ಸಲಹೆ ಪಡೆದಿದ್ದೆ ಎಂದು ಅಜಂ ತಿಳಿಸಿದ್ದಾರೆ. ನೆಟ್ ಪ್ರಾಕ್ಟೀಸ್ ಸಮಯದಲ್ಲಿ ಗಂಭೀರವಾಗಿರಬೇಕು, ಅದನ್ನು ಪಂದ್ಯದಷ್ಟೇ ಗಂಭೀರವಾಗಿ ಪರಿಗಣಿಸಬೇಕು, ಯಾವುದೇ ಕಾರಣಕ್ಕೂ ದುಡುಕಿನ ಹೊಡೆತಕ್ಕೆ ಕೈ ಹಾಕಬಾರದು, ನೆಟ್ ಪ್ರಾಕ್ಟೀಸ್ ನಲ್ಲಿ ಯಾವ ರೀತಿ ಆಡುತ್ತೇವೋ ಅದೇ ರೀತಿ ಪಂದ್ಯದಲ್ಲಿಯೂ ಸಹ ಆಡುತ್ತೇವೆ ಎಂದು ವಿರಾಟ್ ಕೊಹ್ಲಿ ನೀಡಿದ್ದ ಸಲಹೆಯನ್ನು ಬಾಬರ್ ಅಜಂ ಹಂಚಿಕೊಂಡಿದ್ದಾರೆ
This News Article Is A Copy Of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 01:17 pm
HK News Staffer
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm