ಬ್ರೇಕಿಂಗ್ ನ್ಯೂಸ್
21-04-21 11:43 am Source: MYKHEL ಕ್ರೀಡೆ
ರಾಂಚಿ: ಭಾರತದ ಮಾಜಿ ನಾಯಕ, ಈಗ ಚೆನ್ನೈ ಸೂಪರ್ ಕಿಂಗ್ಸ್ನ ನಾಯಕರಾಗಿರುವ ಎಂಎಸ್ ಧೋನಿ ಅವರ ತಂದೆ-ತಾಯಿಗೆ ಕೊರೊನಾವೈರಸ್ ಸೋಂಕು ತಗುಲಿದೆ. ಧೋನಿ ಹೆತ್ತವರಾದ ದೇವಕಿ ದೇವಿ ಮತ್ತು ಪಾನ್ ಸಿಂಗ್ಗೆ ಕೋವಿಡ್-19 ಪಾಸಿಟಿವ್ ಬಂದಿರುವುದಾಗಿ ತಿಳಿದು ಬಂದಿದೆ.
ಝಾರ್ಖಂಡ್ನ ರಾಂಚಿಯಲ್ಲಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದೇವಕಿ ದೇವಿ ಮತ್ತು ಪಾನ್ ಸಿಂಗ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಂಎಸ್ ಧೋನಿ ಸದ್ಯ 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಸಿಎಸ್ಕೆ ಮುನ್ನಡೆಸುತ್ತಿದ್ದು, ಚೆನ್ನೈ ಉತ್ತಮ ಪ್ರದರ್ಶನ ನೀಡುತ್ತಿದೆ. ಈವರೆಗೆ ಸಿಎಸ್ಕೆ ಒಟ್ಟು 3 ಪಂದ್ಯಗಳನ್ನಾಡಿದ್ದು, ಇದರಲ್ಲಿ ಎರಡರಲ್ಲಿ ಗೆಲುವು ದಾಖಲಿಸಿ ಅಂಕಪಟ್ಟಿಯಲ್ಲಿ ಸದ್ಯ 3ನೇ ಸ್ಥಾನದಲ್ಲಿದೆ. 4ನೇ ಪಂದ್ಯ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಚೆನ್ನೈ ಮಧ್ಯೆ ಮುಂಬೈಯ ವಾಂಖೆಡೆ ಸ್ಟೇಡಿಯಂನಲ್ಲಿ ಏಪ್ರಿಲ್ 21ರಂದು ನಡೆಯಲಿದೆ.
ಕಳೆದ ವರ್ಷ ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ನಡೆದಿದ್ದ 13ನೇ ಆವೃತ್ತಿಯ ಐಪಿಎಲ್ನಲ್ಲಿ ಪಾಲ್ಗೊಂಡ ಬಳಿಕ ಕೊಂಚ ಕಾಲ ಧೋನಿ ತನ್ನ ಕುಟುಂಬಸ್ಥರ ಜೊತೆ ಕಳೆದಿದ್ದರು. ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಧೋನಿ ನಿವೃತ್ತಿ ನೀಡಿರುವುದರಿಂದ ಈ ಐಪಿಎಲ್ ಸೀಸನ್ಗೂ ಮುನ್ನ ಯಾವುದೇ ಟೂರ್ನಿಗಳಲ್ಲಿ ಧೋನಿ ಆಡಿರಲಿಲ್ಲ.
This News Article IsA Copy Of MYKHEL
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
14-10-26 04:36 pm
HK News Staffer
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm