ಬ್ರೇಕಿಂಗ್ ನ್ಯೂಸ್
11-05-21 04:37 pm MYKHEL: Srinivasa A ಕ್ರೀಡೆ
ಕೊರೊನಾವೈರಸ್ ಕೇವಲ ಭಾರತ ಮಾತ್ರವಲ್ಲದೆ ವಿಶ್ವದ ಹಲವಾರು ದೇಶಗಳನ್ನು ಕಾಡುತ್ತಿದೆ. ಇತ್ತೀಚೆಗಷ್ಟೇ ಇಂಡಿಯನ್ ಪ್ರೀಮಿಯರ್ ಲೀಗ್ ಬಯೋಬಬಲ್ ಒಳಗೂ ಸಹ ಕೊರೊನಾವೈರಸ್ ಪ್ರವೇಶಿಸಿದ ಕಾರಣ ಪ್ರಸ್ತುತ ಟೂರ್ನಿಯನ್ನು ಮುಂದೂಡಿರುವುದಾಗಿ ಬಿಸಿಸಿಐ ತಿಳಿಸಿತ್ತು. ವಿವಿಧ ತಂಡಗಳ ಕೆಲ ಆಟಗಾರರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಬಿಸಿಸಿಐ ಈ ನಿರ್ಧಾರವನ್ನು ಕೈಗೊಂಡಿತ್ತು.
ಇದಕ್ಕೂ ಮುನ್ನ ಮಾರ್ಚ್ ತಿಂಗಳಿನಲ್ಲಿ ಪಾಕಿಸ್ತಾನದ 6ನೇ ಆವೃತ್ತಿಯ ಪಾಕಿಸ್ತಾನ್ ಸೂಪರ್ ಲೀಗ್ ಕೂಡ ಇದೇ ಮಾದರಿಯಲ್ಲಿ ಮುಂದೂಡಲ್ಪಟ್ಟಿತ್ತು. ಪಾಕಿಸ್ತಾನ್ ಸೂಪರ್ ಲೀಗ್ ಟೂರ್ನಿಯಲ್ಲಿ ಭಾಗವಹಿಸಿದ್ದ 6 ಕ್ರಿಕೆಟಿಗರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಈ ನಿರ್ಧಾರವನ್ನು ಕೈಗೊಂಡಿತ್ತು. ಹೀಗೆ ಐಪಿಎಲ್ ಮಾದರಿಯಲ್ಲಿಯೇ ಮಾರ್ಚ್ ತಿಂಗಳಲ್ಲಿ ಪಿಎಸ್ಎಲ್ ಟೂರ್ನಿ ಕೊರೊನಾವೈರಸ್ ಕಾರಣದಿಂದಾಗಿ ಮುಂದೂಡಲ್ಪಟ್ಟಿತ್ತು.
ಹೀಗೆ ಮುಂದೂಡಲ್ಪಟ್ಟಿದ್ದ ಪಿಎಸ್ಎಲ್ ಟೂರ್ನಿಯನ್ನು ಜೂನ್ 1ರಿಂದ ಯುಎಇಯಲ್ಲಿ ಮುಂದುವರೆಸಲು ಪಿಸಿಬಿ ಚಿಂತನೆ ನಡೆಸಿತ್ತು. ಪಿಎಸ್ಎಲ್ ಟೂರ್ನಿಯ ಉಳಿದ 20 ಪಂದ್ಯಗಳನ್ನು ಯುಎಇಯಲ್ಲಿ ನಡೆಸಲು ಚರ್ಚೆಗಳು ಆರಂಭವಾಗುತ್ತಿದ್ದಂತೆಯೇ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಜಾವೇದ್ ಮಿಯಾಂದಾದ್ ಆಕ್ಷೇಪವನ್ನು ವ್ಯಕ್ತಪಡಿಸಿದ್ದಾರೆ. 'ಇದು ಕ್ರಿಕೆಟ್ ಆಡುವ ಸಮಯವಲ್ಲ, ಜೀವ ಉಳಿಸುವ ಸಮಯ. ಸೊಂಕು ಹೆಚ್ಚುತ್ತಿರುವ ಇಂತಹ ಸಂದರ್ಭದಲ್ಲಿ ನಾವೆಲ್ಲರೂ ಕ್ರಿಕೆಟ್ ಆಡುವುದರ ಬದಲು ಜೀವಗಳನ್ನು ಉಳಿಸುವ ಕಡೆ ಹೆಚ್ಚಿನ ಗಮನವನ್ನು ಹರಿಸಬೇಕು. ಇಡೀ ಪ್ರಪಂಚವೇ ಕೊರೊನಾವೈರಸ್ನಿಂದ ತೊಂದರೆಗೊಳಗಾಗಿದ್ದು, ಟಿ ಟ್ವೆಂಟಿ ವಿಶ್ವಕಪ್ ನಡೆಯಬೇಕಿದ್ದ ಭಾರತವೂ ಕೂಡ ಕೊರೊನಾ ಹೊಡೆತಕ್ಕೆ ಸಿಲುಕಿದೆ' ಎಂದು ಜಾವೇದ್ ಮಿಯಾಂದಾದ್ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ಹಾಗೂ ಪಿಎಸ್ಎಲ್ ಮುಂದುವರೆಸುವ ನಿರ್ಧಾರವನ್ನು ಕೈಗೊಂಡ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ವಿರುದ್ಧ ಜಾವೇದ್ ಮಿಯಾಂದಾದ್ ಆಕ್ರೋಶ ವ್ಯಕ್ತಪಡಿಸಿದರು. 'ಅವರು ದುಡ್ಡು ಮಾಡಿಕೊಳ್ಳುವುದಕ್ಕೋಸ್ಕರ ಹಲವಾರು ಜನರ ಜೀವವನ್ನು ಒತ್ತೆ ಇಡುತ್ತಿದ್ದಾರೆ. ಒಂದುವೇಳೆ ನಾನೇನಾದರೂ ಪಿಎಸ್ಎಲ್ ಆಯೋಜಕನಾಗಿದ್ದರೆ ಇಂತಹ ನಿರ್ಧಾರವನ್ನು ಕೈಗೊಳ್ಳುತ್ತಿರಲಿಲ್ಲ. ಅವರು ಯೋಜಿಸಿರುವಂತೆ ಪಿಎಸ್ಎಲ್ ಪಂದ್ಯಗಳನ್ನು ನಡೆಸಿ ಯಾರಿಗಾದರೂ ತೊಂದರೆಯಾದರೆ ಯಾರು ಜವಾಬ್ದಾರಿಯನ್ನು ಹೊರುತ್ತಾರೆ?' ಎಂದು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ವಿರುದ್ಧ ಜಾವೇದ್ ಮಿಯಾಂದಾದ್ ಕಿಡಿಕಾರಿದರು.
(Kannada Copy of Mykhel Kannada)
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm