ಬ್ರೇಕಿಂಗ್ ನ್ಯೂಸ್
01-09-20 10:52 am Headline Karnataka News Network ಕ್ರೀಡೆ
ಅಬುಧಾಬಿ: ಐಪಿಎಲ್ ಆರಂಭಿಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬದಲು ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ತಂಡ ಆಡಲಿದೆ ಎಂದು ಹೇಳಲಾಗಿದೆ.
ಸೆಪ್ಟೆಂಬರ್ 19ರಿಂದ ಐಪಿಎಲ್ ಆರಂಭವಾಗಲಿದೆ. ವಾಡಿಕೆಯಂತೆ ಕಳೆದ ಐಪಿಎಲ್ನ ಫೈನಲ್ನಲ್ಲಿ ಮುಖಾಮುಖಿಯಾಗಿದ್ದ ಸಿಎಸ್ಕೆ ಮತ್ತು ಮುಂಬೈ ತಂಡದ ಈ ಟೂರ್ನಿಯ ಮೊದಲ ಪಂದ್ಯವನ್ನು ಆಡಬೇಕಿತ್ತು. ಆದರೆ ಸಿಎಸ್ಕೆ ತಂಡದ ಕೆಲ ಸಹಾಯಕ ಸಿಬ್ಬಂದಿ ಮತ್ತು ಇಬ್ಬರು ಆಟಗಾರರಿಗೆ ಕೊರೊನಾ ಬಂದ ಕಾರಣ ಚೆನ್ನೈ ತಂಡ ಮೊದಲ ಪಂದ್ಯವನ್ನು ಆಡಲು ಸಾಧ್ಯವಿಲ್ಲ ಎಂದು ಹೇಳಲಾಗಿದೆ.
ಐಪಿಎಲ್ನ ಆರಂಭಿಕ ಪಂದ್ಯದಲ್ಲಿ ನಾಲ್ಕು ಬಾರಿ ಐಪಿಎಲ್ ಟ್ರೋಫಿ ಗೆದ್ದ ಮುಂಬೈ ತಂಡ ಮತ್ತು ಮೂರು ಬಾರಿ ಚಾಂಪಿಯನ್ ಆಗಿರುವ ಚೆನ್ನೈ ತಂಡವನ್ನು ಆಡಿಸಲು ಬಿಸಿಸಿಐ ತೀರ್ಮಾನ ಮಾಡಿತ್ತು. ಆದರೆ ಈ ನಡುವೆ ಈ ಪಂದ್ಯಕ್ಕೆ ಕೊರೊನಾ ಅಡ್ಡಗಾಲು ಹಾಕಿದ್ದು, ಸೆಪ್ಟೆಂಬರ್ 19ರೊಳಗೆ ಸಿಎಸ್ಕೆ ತಂಡದ ಆಟಗಾರರು ಸೋಂಕಿನಿಂದ ಹೊರಬರುವುದು ಡೌಟು ಎನ್ನಲಾಗಿದೆ. ಈ ಕಾರಣಕ್ಕೆ ಐಪಿಎಲ್ನಲ್ಲಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ಆರ್ಸಿಬಿ ತಂಡ ಆರಂಭಿಕ ಪಂದ್ಯವನ್ನು ಆಡಲಿದೆ ಎನ್ನಲಾಗಿದೆ.
ಈ ವಿಚಾರವಾಗಿ ಬಿಸಿಸಿಐ ಉನ್ನತ ಮೂಲಗಳಿಂದ ಮಾಹಿತಿ ಹೊರಬಿದ್ದಿದ್ದು, ಈ ಬಾರಿ ಐಪಿಎಲ್ ಆರಂಭಿಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯುವುದು ಬಹುತೇಕ ಪಕ್ಕಾ ಆಗಿದೆ. ಮೊದಲ ಪಂದ್ಯದಲ್ಲಿ ಸ್ಟಾರ್ ಆಟಗಾರರು ಮೈದಾನಕ್ಕೆ ಇಳಿದರೆ, ಆಟದ ಕ್ರೇಜ್ ಜಾಸ್ತಿಯಾಗುತ್ತದೆ. ಒಂದು ಕಡೆ ರೋಹಿತ್ ಸಿದ್ಧವಾಗಿದ್ದಾರೆ. ಆದರೆ ಧೋನಿಯವರ ತಂಡ ಆಡುವುದು ಅನುಮಾನವಾಗಿದೆ. ಹೀಗಾಗಿ ಕೊಹ್ಲಿ ನೇತೃತ್ವದ ಆರ್ಸಿಬಿ ತಂಡವನ್ನು ಆಡಿಸಲು ತಯಾರಿ ನಡೆದಿದೆ ಎಂದು ತಿಳಿದು ಬಂದಿದೆ.
ಸೆ.19ರ ವೇಳೆಗೆ ಚೆನ್ನೈ ತಂಡ ಪೂರ್ಣ ಪ್ರಮಾಣದಲ್ಲಿ ಕೊರೊನಾದಿಂದ ಚೇತರಿಸಿಕೊಳ್ಳುವುದು ಕಷ್ಟಸಾಧ್ಯ ಎಂಬ ಅಭಿಪ್ರಾಯ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಟೂರ್ನಿಯ ಶೆಡ್ಯೂಲ್ನಲ್ಲಿ ಸಣ್ಣ ಬದಲಾವಣೆ ಮಾಡಿ ಮೊದಲ ಪಂದ್ಯದಲ್ಲಿ ಆರ್ಸಿಬಿ ತಂಡವನ್ನು ಕಣಕ್ಕೆ ಇಳಿಸಲು ಚಿಂತನೆ ನಡೆಸಲಾಗಿದೆ. ಇತ್ತ ಎರಡು ದಿನಗಳ ಅವಧಿಯಲ್ಲಿ ಚೆನ್ನೈ ತಂಡದಲ್ಲಿ 12 ಕೊರೊನಾ ಪ್ರಕರಣಗಳು ಪತ್ತೆಯಾಗಿವುದರಿಂದ ಮತ್ತಷ್ಟು ಪಾಸಿಟಿವ್ ಪ್ರಕರಣಗಳು ವರದಿಯಾಗುವ ನಿರೀಕ್ಷೆ ಇದೆ.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm