ಬ್ರೇಕಿಂಗ್ ನ್ಯೂಸ್
02-08-21 07:00 pm Mykhel Kannada ಕ್ರೀಡೆ
ಟೋಕಿಯೋ ಒಲಿಂಪಿಕ್ಸ್ ಪೂಲ್ ಹಂತದ ಮೊದಲ 3 ಪಂದ್ಯಗಳಲ್ಲಿ ಸತತವಾಗಿ ಸೋಲುವುದರ ಮೂಲಕ ಭಾರೀ ದೊಡ್ಡ ಮಟ್ಟದ ನಿರಾಸೆಯನ್ನು ಹುಟ್ಟುಹಾಕಿದ್ದ ಭಾರತೀಯ ವನಿತೆಯರ ಹಾಕಿ ತಂಡ ಕೊನೆಯ 2 ಪಂದ್ಯಗಳನ್ನು ಗೆಲ್ಲುವುದರ ಮೂಲಕ ಕ್ವಾರ್ಟರ್ ಫೈನಲ್ ಪ್ರವೇಶವನ್ನು ಪಡೆದುಕೊಂಡಿತು. ಹೀಗೆ ಕ್ವಾರ್ಟರ್ ಫೈನಲ್ ಪ್ರವೇಶ ಪಡೆದ ಭಾರತೀಯ ವನಿತೆಯರ ಹಾಕಿ ತಂಡ ಬಲಿಷ್ಠ ಆಸ್ಟ್ರೇಲಿಯಾ ವನಿತೆಯರ ಹಾಕಿ ತಂಡದ ವಿರುದ್ಧ 1-0 ಅಂತರದಲ್ಲಿ ಜಯ ಗಳಿಸುವುದರ ಮೂಲಕ ಸೆಮಿಫೈನಲ್ ಹಂತವನ್ನು ಪ್ರವೇಶಿಸಿದೆ.
ಕ್ವಾರ್ಟರ್ ಫೈನಲ್ 3 ಪಂದ್ಯದಲ್ಲಿ ಸೆಣಸಾಡಿದ ಬಲಿಷ್ಠ ಆಸ್ಟ್ರೇಲಿಯ ಮಹಿಳಾ ತಂಡ ಮತ್ತು ಭಾರತ ಮಹಿಳಾ ಹಾಕಿ ತಂಡಗಳ ನಡುವಿನ ಪಂದ್ಯದಲ್ಲಿ ಆಸ್ಟ್ರೇಲಿಯ ಮೇಲುಗೈ ಸಾಧಿಸಲಿದೆ ಎಂದು ಎಲ್ಲರೂ ಊಹಿಸಿದ್ದರು. ಪ್ರಸ್ತುತ ನಡೆಯುತ್ತಿರುವ ಟೋಕಿಯೋ ಒಲಿಂಪಿಕ್ಸ್ನಲ್ಲಿ ಇದುವರೆಗೆ ಯಾವುದೇ ಪಂದ್ಯದಲ್ಲಿಯೂ ಸೋಲದೆ ಯಶಸ್ವಿ ಹಾದಿಯಲ್ಲಿ ಮುನ್ನೆಡೆದು ಬಂದಿದ್ದ ಆಸ್ಟ್ರೇಲಿಯಾ ವನಿತೆಯರ ಹಾಕಿ ತಂಡಕ್ಕೆ ಭಾರತೀಯ ವನಿತೆಯರ ಹಾಕಿ ತಂಡ
ಈ ಮೂಲಕ ಒಲಿಂಪಿಕ್ಸ್ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಭಾರತೀಯ ವನಿತೆಯರ ಹಾಕಿ ತಂಡ ಸೆಮಿಫೈನಲ್ ಪ್ರವೇಶಿಸಿದೆ. ಹೌದು ಇತಿಹಾಸದಲ್ಲಿಯೇ ಇದುವರೆಗೂ ಭಾರತೀಯ ವನಿತೆಯರ ಹಾಕಿ ತಂಡ ಯಾವುದೇ ಒಲಿಂಪಿಕ್ಸ್ನಲ್ಲಿಯೂ ಸೆಮಿಫೈನಲ್ ಹಂತವನ್ನು ಪ್ರವೇಶಿಸುವಲ್ಲಿ ಯಶಸ್ವಿಯಾಗಿರಲಿಲ್ಲ. ಆದರೆ ಇದೇ ಮೊದಲ ಬಾರಿಗೆ ಒಲಿಂಪಿಕ್ಸ್ನಲ್ಲಿ ಭಾರತ ವನಿತೆಯರ ಹಾಕಿ ತಂಡ ಸೆಮಿಫೈನಲ್ ಪ್ರವೇಶಿಸಿದ್ದು ಎಲ್ಲೆಡೆ ದೊಡ್ಡ ಮಟ್ಟದ ಪ್ರಶಂಸೆ ವ್ಯಕ್ತವಾಗುತ್ತಿದೆ.
ಭಾರತ ವನಿತೆಯರ ಹಾಕಿ ತಂಡ ಗೆದ್ದು ಬಂದ ಹಾದಿ
ಪ್ರಸ್ತುತ ನಡೆಯುತ್ತಿರುವ ಟೋಕಿಯೋ ಒಲಿಂಪಿಕ್ಸ್ನಲ್ಲಿ ಆರಂಭದ 3ಪಂದ್ಯಗಳಲ್ಲಿ ಸತತವಾಗಿ ಸೋಲುವ ಮೂಲಕ ನಿರಾಸೆಯನ್ನು ಮೂಡಿಸಿದೆ ಭಾರತೀಯ ವನಿತೆಯರ ಹಾಕಿ ತಂಡ ಪೂಲ್ ಹಂತದ ಕೊನೆಯ 2 ಪಂದ್ಯಗಳಲ್ಲಿ ಜಯ ಸಾಧಿಸುವುದರ ಮೂಲಕ ಕ್ವಾರ್ಟರ್ ಫೈನಲ್ ಪ್ರವೇಶಿಸುವಲ್ಲಿ ಯಶಸ್ವಿಯಾಗಿತ್ತು. ಕಳೆದ ಶುಕ್ರವಾರದಂದು ನಡೆದ ಪಂದ್ಯದಲ್ಲಿ ಐರ್ಲೆಂಡ್ ಮಹಿಳಾ ಹಾಕಿ ತಂಡದ ವಿರುದ್ಧ ಭಾರತ ಮಹಿಳಾ ಹಾಕಿ ತಂಡ ಜಯ ಸಾಧಿಸಿತು, ನಂತರ ಶನಿವಾರ ನಡೆದ ಪೂಲ್ ಹಂತದ ಕೊನೆಯ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಮಹಿಳಾ ಹಾಕಿ ತಂಡದ ವಿರುದ್ಧ ಭಾರತೀಯ ವನಿತೆಯರು 4-3 ಅಂತರದಲ್ಲಿ ಜಯ ಸಾಧಿಸುವುದರ ಮೂಲಕ ಕ್ವಾರ್ಟರ್ ಫೈನಲ್ ಪ್ರವೇಶಿಸುವ ಕನಸನ್ನು ಜೀವಂತವಾಗಿರಿಸಿಕೊಂಡಿತ್ತು. ಕೊನೆಗೆ ಐರ್ಲೆಂಡ್ ವಿರುದ್ಧ ಗ್ರೇಟ್ ಬ್ರಿಟನ್ ಮಹಿಳಾ ಹಾಕಿ ತಂಡ ಗೆಲುವು ಸಾಧಿಸಿದ ಕಾರಣ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೇರಿದೆ ಭಾರತೀಯ ವನಿತೆಯರ ತಂಡ ಕ್ವಾರ್ಟರ್ ಫೈನಲ್ ಪ್ರವೇಶಿಸುವ ಅವಕಾಶ ಪಡೆದುಕೊಂಡಿತು. ಹೀಗೆ ಕ್ವಾರ್ಟರ್ ಫೈನಲ್ಸ್ ಹಂತದಲ್ಲಿ ಆಸ್ಟ್ರೇಲಿಯಾ ವನಿತೆಯರ ಹಾಕಿ ತಂಡದ ವಿರುದ್ಧ ಸೆಣಸಾಡಿದ ಭಾರತೀಯ ಮಹಿಳಾ ಹಾಕಿ ತಂಡ 1-0 ಅಂತರದಿಂದ ಜಯ ಗಳಿಸುವುದರ ಮೂಲಕ ಸೆಮಿಫೈನಲ್ ಪ್ರವೇಶ ಮಾಡಿದೆ.
ಇದೇ ಮೊದಲ ಬಾರಿಗೆ ಸೆಮಿಫೈನಲ್ ಪ್ರವೇಶಿಸಿದ ಭಾರತೀಯ ವನಿತೆಯರ ಹಾಕಿ ತಂಡ
ಆಸ್ಟ್ರೇಲಿಯಾ ವಿರುದ್ಧ ಕ್ವಾರ್ಟರ್ ಫೈನಲ್ ಸುತ್ತಿನಲ್ಲಿ 1-0 ಅಂತರದಿಂದ ಜಯ ಸಾಧಿಸುವುದರ ಮೂಲಕ ಭಾರತೀಯ ವನಿತೆಯರ ಹಾಕಿ ತಂಡ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಒಲಿಂಪಿಕ್ಸ್ನಲ್ಲಿ ಸೆಮಿಫೈನಲ್ ಪ್ರವೇಶ ಮಾಡುವ ಮೂಲಕ ದಾಖಲೆ ಬರೆದಿದೆ. ಮೊದಲ ಬಾರಿಗೆ ಒಲಿಂಪಿಕ್ಸ್ ಇತಿಹಾಸದಲ್ಲಿ ಸೆಮಿಫೈನಲ್ ಪ್ರವೇಶಿಸಿರುವ ಭಾರತ ವನಿತೆಯರ ಹಾಕಿ ತಂಡಕ್ಕೆ ದೊಡ್ಡ ಮಟ್ಟದ ಪ್ರಶಂಸೆಗಳು ವ್ಯಕ್ತವಾಗುತ್ತಿವೆ.
Indian women’s hockey team made history on Monday as they defeated Australia 1-0 to book their place in the semi-final for the first time in the Olympics. Gurjit Kaur’s goal from a penalty corner in the second quarter was enough for India to win the quarter-final against Australia.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm