ಬ್ರೇಕಿಂಗ್ ನ್ಯೂಸ್
08-08-21 02:07 pm Headline Karnataka News Network ಕ್ರೀಡೆ
ಬೆಂಗಳೂರು, ಆಗಸ್ಟ್ 8: ಟೋಕಿಯೋ ಒಲಿಂಪಿಕ್ಸ್ ಜಾವೆಲಿನ್ ತ್ರೋ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು ಸಾಧನೆ ಮಾಡಿರುವ ನೀರಜ್ ಚೋಪ್ರಾಗೆ ಇಡೀ ದೇಶವೇ ಅಭಿನಂದನೆ ಸಲ್ಲಿಸುತ್ತಿದೆ. ಒಲಿಂಪಿಕ್ಸ್ ಕ್ರೀಡಾಕೂಟದ ಅಥ್ಲೆಟಿಕ್ಸ್ ವಿಭಾಗದಲ್ಲಿ ಚಿನ್ನ ಗೆದ್ದು ಕೊಟ್ಟಿರುವ ನೀರಜ್ಗೆ ಬಿಸಿಸಿಐ, ಹರಿಯಾಣ ರಾಜ್ಯ ಸರ್ಕಾರ, ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಸೇರಿದಂತೆ ಹಲವರು ಬಹುಮಾನ ಘೋಷಿಸಿದ್ದಾರೆ. ಇದೇ ವೇಳೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಚಿನ್ನದ ಹುಡುಗನಿಗೆ ಗೋಲ್ಡನ್ ಪಾಸ್ ನೀಡಿ ಗೌರವ ಸಲ್ಲಿಸಿದೆ.
ಕೆಎಸ್ಆರ್ಟಿಸಿ ಸಂಸ್ಥೆಯ 60 ವರ್ಷದ ಸಂಭ್ರಮಾಚರಣೆ ಸಂದರ್ಭದಲ್ಲೇ ಈ ವಿಶೇಷ ಗೌರವವನ್ನು ದೇಶಕ್ಕೆ ಕೀರ್ತಿ ತಂದ ಚೋಪ್ರಾಗೆ ಸಲ್ಲಿಸಲಾಗಿದ್ದು, ಈ ಬಗ್ಗೆ ಕೆಎಸ್ಆರ್ಟಿಸಿ ಅಧಿಕೃತ ಟ್ವಿಟರ್ ಅಕೌಂಟ್ನಲ್ಲಿ ಟ್ವೀಟ್ ಮಾಡಿದೆ.

ಅನಂತ ಅಭಿನಂದನೆಗಳು. ಚಿನ್ನದ ಹುಡುಗ ನೀರಜ್ ಚೋಪ್ರಾ ಅವರ ಅತ್ಯುನ್ನತ ಸಾಧನೆಯನ್ನು ಸಂಭ್ರಮಿಸಿ ಹಾರೈಸುತ್ತಾ, ಕೆಎಸ್ಆರ್ಟಿಸಿಯು 60 ವಸಂತಗಳನ್ನು ಪೂರೈಸಿರುವ ಸವಿನೆನಪಿನಲ್ಲಿ ನೀರಜ್ ಚೋಪ್ರಾ ಅವರಿಗೆ ಕೆಎಸ್ಆರ್ಟಿಸಿ ಗೋಲ್ಡನ್ ಪಾಸ್ ನೀಡಲಾಗುವುದು ಎಂದು ಟ್ವೀಟ್ ನಲ್ಲಿ ತಿಳಿಸಿದೆ.

ಗೋಲ್ಡನ್ ಪಾಸ್ ವಿಶೇಷ ಏನು?
ಕೆಎಸ್ಆರ್ಟಿಸಿ ಕೊಡಮಾಡುವ ಗೋಲ್ಡನ್ ಪಾಸ್ ಮೂಲಕ ನಿಗಮದ ಯಾವುದೇ ಬಸ್ಸಿನಲ್ಲಿ ರಾಜ್ಯ ಹಾಗೂ ಅಂತಾರಾಜ್ಯಗಳಲ್ಲಿ ಜೀವಿತಾವಧಿ ವರೆಗೆ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಇದು ಗೌರವ ಸೂಚಕವಾಗಿ ಕೊಡಲಾಗುವ ಸವಲತ್ತು ಆಗಿದ್ದು, ಒಲಿಂಪಿಕ್ಸ್ನಲ್ಲಿ ಚಿನ್ನ ಗೆದ್ದು ಭಾರತೀಯರು ಹೆಮ್ಮೆ ಪಡುವಂತೆ ಮಾಡಿದ ಕಾರಣಕ್ಕಾಗಿ ನೀರಜ್ ಚೋಪ್ರಾ ಅವರಿಗೆ ಇದನ್ನು ಕೆಎಸ್ಆರ್ಟಿಸಿ ನೀಡಿದೆ.

ಅದಿತಿ ಅಶೋಕ್ಗೂ ಉಚಿತ ಪಾಸ್
ಪದಕ ಗೆಲ್ಲುವುದು ಸಾಧ್ಯವಾಗದಿದ್ದರೂ ಗಾಲ್ಫ್ ಕ್ರೀಡೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹೃದಯ ಗೆದ್ದ ಕನ್ನಡತಿ ಅದಿತಿ ಅಶೋಕ್ ಅವರಿಗೂ ಕೆಎಸ್ಆರ್ಟಿಸಿಯಿಂದ ಉಚಿತ ಪಾಸ್ ನೀಡುವುದಾಗಿ ಘೋಷಿಸಿದೆ. ಒಲಿಂಪಿಕ್ನಲ್ಲಿ ಅದ್ಭುತ ಆಟವಾಡಿದ ಕನ್ನಡದ ಕುವರಿ, ಅರ್ಜುನ ಪ್ರಶಸ್ತಿ ವಿಜೇತೆ ಅದಿತಿ ಅಶೋಕ್ ಅವರಿಗೆ ಕೆಎಸ್ಆರ್ಟಿಸಿ ಉಚಿತ ಪಾಸ್ ನೀಡುವ ಮೂಲಕ ಅಭಿನಂದನೆ ಸಲ್ಲಿಸುತ್ತದೆ ಎಂದು ಟ್ವೀಟ್ ಮೂಲಕ ತಿಳಿಸಲಾಗಿದೆ.
— KSRTC (@KSRTC_Journeys) August 7, 2021
KSRTC Announces Golden Pass for Tokyo Olympic Gold Medallist Neeraj Chopra lifetime pass for Aditi Ashok.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 04:36 pm
HK News Staffer
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm