ಬ್ರೇಕಿಂಗ್ ನ್ಯೂಸ್
28-08-21 10:52 am Mykhel: Srinivas ಕ್ರೀಡೆ
ಟೋಕಿಯೋ, ಆಗಸ್ಟ್ 28: ಟೋಕಿಯೊ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಟೇಬಲ್ ಟೆನಿಸ್ ಆಟಗಾರ್ತಿ ಭವೀನಾಬೆನ್ ಹೊಸ ಇತಿಹಾಸವನ್ನು ನಿರ್ಮಿಸಿದ್ದಾರೆ. ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಇತ್ತೀಚಿಗಷ್ಟೆ ಸೆಮಿಫೈನಲ್ ಹಂತವನ್ನು ಪ್ರವೇಶಿಸುವುದರ ಮೂಲಕ ಹೊಸ ಇತಿಹಾಸವನ್ನು ನಿರ್ಮಿಸಿದ್ದ ಭವೀನಾಬೆನ್ ಇದೀಗ ಸೆಮಿಫೈನಲ್ ಹಂತದ ಪಂದ್ಯದಲ್ಲಿಯೂ ಸಹ ಜಯ ಸಾಧಿಸುವುದರ ಮೂಲಕ ಫೈನಲ್ ಪ್ರವೇಶಿಸಿ ಪ್ಯಾರಾಲಿಂಪಿಕ್ಸ್ ಇತಿಹಾಸದಲ್ಲಿಯೇ ಟೇಬಲ್ ಟೆನಿಸ್ ವಿಭಾಗದಲ್ಲಿ ಫೈನಲ್ ಪ್ರವೇಶಿಸಿದ ಭಾರತದ ಮೊದಲ ಕ್ರೀಡಾಪಟು ಎಂಬ ದಾಖಲೆಯನ್ನು ಬರೆದಿದ್ದಾರೆ.
ಕ್ವಾರ್ಟರ್ಫೈನಲ್ನಲ್ಲಿ ಭವೀನಾಬೆನ್ ಪಟೇಲ್ ಮಹಿಳೆಯರ ಕ್ಲಾಸ್ 4 ಇವೆಂಟ್ನಲ್ಲಿ ವಿಶ್ವದ ನಂಬರ್ 5 ಆಟಗಾರ್ತಿ ಸರ್ಬಿಯಾದ ಬೊರಿಸ್ಲೇವಾ ಪೆರಿಕ್ ರಾಂಕೋವಿಕ್ ವಿರುದ್ಧ ಗೆಲುವು ಸಾಧಿಸಿದ್ದರು. 34ರ ಹರೆಯದ ಭಾರತದ ಆಟಗಾರ್ತಿ ಸರ್ಬಿಯಾದ ಎದುರಾಳಿಯ ವಿರುದ್ಧ 11-5 11-6 11-7 ನೇರ ಸೆಟ್ಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಈ ಮೂಲಕ ಸೆಮಿಫೈನಲ್ಗೆ ಪ್ರವೇಶ ಪಡೆದುಕೊಂಡಿದ್ದರು.

ಹೀಗೆ ಯಶಸ್ವಿಯಾಗಿ ಸೆಮಿಫೈನಲ್ ಪ್ರವೇಶಿಸಿದ್ದ ಭಾರತದ ಟೇಬಲ್ ಟೆನಿಸ್ ಆಟಗಾರ್ತಿ ಭವೀನಾಬೆನ್ ಭಾರತಕ್ಕೆ ಪದಕ ಖಚಿತಪಡಿಸಿದ್ದರು. ಇನ್ನು ಸೆಮಿಫೈನಲ್ ಹಂತದಲ್ಲಿ ಭಾರತದ ಟೆನಿಸ್ ಆಟಗಾರ್ತಿ ಭವೀನಾಬೆನ್ ಚೀನಾದ ಟೆನಿಸ್ ಆಟಗಾರ್ತಿ ಝಾಂಗ್ ಮಿಯಾವೋ ವಿರುದ್ಧ ಶನಿವಾರ ( ಆಗಸ್ಟ್ 27 ) ನಡೆದ ಪಂದ್ಯದಲ್ಲಿ ಸೆಣಸಾಟ ನಡೆಸಿದ್ದಾರೆ. ವಿಶ್ವದ ನಂಬರ್ 3 ಟೇಬಲ್ ಟೆನಿಸ್ ಆಟಗಾರ್ತಿ ಝಾಂಗ್ ಮಿಯಾವೋ ವಿರುದ್ಧ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಭಾರತದ ಟೇಬಲ್ ಟೆನಿಸ್ ಆಟಗಾರ್ತಿ ಭವೀನಾಬೆನ್ ಮೊದಲ ಸುತ್ತಿನಲ್ಲಿಯೇ ಸೋಲುವುದರ ಮೂಲಕ ಕೆಟ್ಟ ಆರಂಭವನ್ನು ಪಡೆದುಕೊಂಡರು.
ಸೆಮಿಫೈನಲ್ ಹಂತದ ಮೊದಲನೇ ಸುತ್ತಿನಲ್ಲಿ ಭಾರತದ ಟೇಬಲ್ ಟೆನಿಸ್ ಆಟಗಾರ್ತಿ ಭವೀನಾಬೆನ್ ವಿರುದ್ಧ ಚೀನಾದ ಝಾಂಗ್ ಮಿಯಾವೋ 7-11 ಅಂತರದ ಸೆಟ್ನಿಂದ ಜಯ ಸಾಧಿಸುವುದರ ಮೂಲಕ ಉತ್ತಮ ಆರಂಭವನ್ನು ಪಡೆದುಕೊಂಡರು. ಹೀಗೆ ಮೊದಲನೇ ಸುತ್ತಿನಲ್ಲಿ ಹಿನ್ನಡೆ ಅನುಭವಿಸುವ ಮೂಲಕ ಆಟವನ್ನು ಆರಂಭಿಸಿದ ಭಾರತದ ಟೇಬಲ್ ಟೆನಿಸ್ ಆಟಗಾರ್ತಿ ಭವೀನಾಬೆನ್ ನಂತರ ನಡೆದ ಸೆಟ್ಗಳಲ್ಲಿ ಉತ್ತಮ ಪ್ರದರ್ಶನ ನೀಡುವುದರ ಮೂಲಕ ಚೀನಾದ ಟೇಬಲ್ ಟೆನಿಸ್ ಆಟಗಾರ್ತಿ ಝಾಂಗ್ ಮಿಯಾವೋ ವಿರುದ್ಧ 3-2 ಅಂತರದಲ್ಲಿ ಜಯ ಸಾಧಿಸುವುದರ ಮೂಲಕ ಫೈನಲ್ ಸುತ್ತಿಗೆ ಲಗ್ಗೆ ಇಟ್ಟಿದ್ದಾರೆ. ಭಾರತದ ಟೇಬಲ್ ಟೆನಿಸ್ ಆಟಗಾರ್ತಿ ಭವೀನಾಬೆನ್ ಮತ್ತು ಚೀನಾದ ಟೇಬಲ್ ಟೆನಿಸ್ ಆಟಗಾರ್ತಿ ಝಾಂಗ್ ಮಿಯಾವೋ ನಡುವೆ 34 ನಿಮಿಷಗಳ ಕಾಲ ನಡೆದ ಟೇಬಲ್ ಟೆನಿಸ್ ಸೆಮಿಫೈನಲ್ ಪಂದ್ಯದಲ್ಲಿ ಚೀನಾದ ಝಾಂಗ್ ಮಿಯಾವೋ ವಿರುದ್ಧ 7-11, 11-7, 11-4, 9-11 ಮತ್ತು 11-8 ಸೆಟ್ಗಳ ಅಂತರದಲ್ಲಿ ಭಾರತದ ಟೇಬಲ್ ಟೆನಿಸ್ ಆಟಗಾರ್ತಿ ಭವೀನಾಬೆನ್ ಜಯ ಸಾಧಿಸಿ ಇತಿಹಾಸ ನಿರ್ಮಿಸಿದ್ದಾರೆ.

ಹೀಗೆ ಪ್ಯಾರಾಲಿಂಪಿಕ್ಸ್ ಮಹಿಳಾ ಟೇಬಲ್ ಟೆನಿಸ್ ವಿಭಾಗದಲ್ಲಿ ಫೈನಲ್ ಹಂತವನ್ನು ಪ್ರವೇಶಿಸಿದೆ ಭಾರತೀಯ ಕ್ರೀಡಾಪಟು ಭವೀನಾಬೆನ್ ಭಾರತಕ್ಕೆ ಚಿನ್ನ ಅಥವಾ ಬೆಳ್ಳಿ ಪದಕ ಲಭಿಸುವುದನ್ನು ಖಚಿತಪಡಿಸಿದ್ದಾರೆ. ಫೈನಲ್ ಹಂತದಲ್ಲಿ ಭವೀನಾಬೆನ್ ಗೆಲುವು ಸಾಧಿಸಿದರೆ ಚಿನ್ನದ ಪದಕ ಲಭಿಸಿದೆ, ಒಂದುವೇಳೆ ಸೋಲುಂಡರೆ ಬೆಳ್ಳಿ ಪದಕಕ್ಕೆ ಭವೀನಾಬೆನ್ ತೃಪ್ತಿಪಟ್ಟುಕೊಳ್ಳಬೇಕಾಗುತ್ತದೆ.
(Kannada Copy of Boldsky Kannada)
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 04:36 pm
HK News Staffer
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm