ಬ್ರೇಕಿಂಗ್ ನ್ಯೂಸ್
30-08-21 11:06 am Mykhel: Madhukar shetty ಕ್ರೀಡೆ
ಟೋಕಿಯೋ, ಆಗಸ್ಟ್ 30: ಪ್ಯಾರಾಲಿಂಪಿಕ್ಸ್ನಲ್ಲಿ ಭಾರತದ ಅಥ್ಲೀಟ್ಗಳ ಪದಕದ ಬೇಟೆ ಮುಂದುವರಿದಿದೆ. ಜಾವೆಲಿನ್ ಎಸೆತದಲ್ಲಿ ಭಾರತ ಎರಡು ಪದಕಗಳನ್ನು ತನ್ನದಾಗಿಸಿಕೊಂಡಿದೆ. ಈ ಮೂಲಕ ಕಳೆದ 24 ಗಂಟೆಗಳ ಅಂತರದಲ್ಲಿ ಭಾರತ ಪ್ಯಾರಾಲಿಂಪಿಕ್ಸ್ನಲ್ಲಿ 7ನೇ ಪದಕವನ್ನು ಗೆದ್ದುಕೊಂಡಂತಾಗಿದೆ. ಜಾವೆಲಿನ್ ಎಸೆತದಲ್ಲಿ ಭಾರತದ ದೇವೇಂದ್ರ ಝಝಾರಿಯಾ ಹಾಗೂ ಸುಂದರ್ ಸಿಂಗ್ ಬೆಳ್ಳಿ ಹಾಗೂ ಕಂಚಿನ ಪದಕವನ್ನು ಗೆಲ್ಲುವ ಮೂಲಕ ಈ ಸಾಧನೆ ಮಾಡಿ ಮಿಂಚಿದ್ದಾರೆ.
ಎರಡು ಬಾರಿ ಪ್ಯಾರಾಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಗೆದ್ದು ಸಾಧನೆ ಮಾಡಿರುವ ದೇವೇಂದ್ರ ಝಝಾರಿಯಾ ಈ ಬಾರಿಯೂ ಭಾರತದ ಕ್ರೀಡಾಭಿಮಾನಿಗಳು ಗೆಮ್ಮೆ ಪಡುವಂತಾ ಸಾಧನೆ ಮಾಡಿದ್ದಾರೆ. ಫೈನಲ್ನಲ್ಲಿ ದೇವೇಂದ್ರ ಅವರು 64.35 ಎಸೆಯುವ ಮೂಲಕ ತಮ್ಮ ವೈಯಕ್ತಿಕ ಅತ್ಯುನ್ನತ ಸಾಧನೆ ಮಾಡಿದ್ದಾರೆ. ಈ ಮೂಲಕ ಬೆಳ್ಳಿಯ ಪದಕವನ್ನು ಗೆದ್ದು ಬೀಗಿದ್ದಾರೆ.
ಇನ್ನು ಇದೇ ಸ್ಪರ್ಧೆಯಲ್ಲಿ ಭಾರತದ ಸುಂದರ್ ಸಿಂಗ್ ಗುರ್ಜಾರ್ ಕಂಚಿನ ಪದಕವನ್ನು ಗೆದ್ದುಕೊಂಡಿದ್ದಾರೆ. 64.01 ಮೀಟರ್ ದೂರಕ್ಕೆ ಜಾವೆಲಿನ್ ಎಸೆಯುವ ಮೂಲಕ ಸುಂದರ್ ಸಿಂಗ್ ಗುರ್ಜಾರ್ ಈ ಬಾರಿಯ ಪ್ಯಾರಾಲಿಂಪಿಕ್ಸ್ನಲ್ಲಿ ಭಾರತ 7ನೇ ಪದಕಕ್ಕೆ ಕೊರಳೊಡ್ಡುವಂತೆ ಮಾಡಿದ್ದಾರೆ. ಈ ಸ್ಪರ್ಧೆಯಲ್ಲಿ ಶ್ರೀಲಂಕಾದ ಜಾವೆಲಿನ್ ಎಸೆತಗಾರ ಹೆರಾತ್ ಮುಡಿಯನ್ಸ್ ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ. 67.79 ಮೀಟರ್ ದೂರಕ್ಕೆ ಎಸೆದು ಈ ಸಾಧನೆ ಮಾಡಿದ್ದಾರೆ ಶ್ರೀಲಂಕಾದ ಈ ಕ್ರೀಡಾಪಟು.

ಈ ಜಾವೆಲಿನ್ ಎಸೆತ ಸ್ಪರ್ಧೆಯಲ್ಲಿ ಭಾರತದ ಮೂವರು ಕ್ರೀಡಾಒಟುಗಳು ಭಾಗವಹಿಸಿದ್ದರು. ದೇವೇಂದ್ರ ಜಜಾರಿಯಾ, ಅಜೀತ್ ಸಿಂಗ್ ಮತ್ತು ಸುಂದರ್ ಸಿಂಗ್ ಗುರ್ಜಾರ್ ಸರ್ಧೆಯನ್ನು ಮಾಡಿದ್ದರು. ಸ್ಪರ್ಧೆಗೆ ಮುನ್ನವೇ ಭಾರತದ ದೇವೇಂದ್ರ ತಮ್ಮ ಹೆಸರಿನಲ್ಲಿ ಎಫ್ 46 ವಿಭಾಗದ ವಿಶ್ವ ದಾಖಲೆಯನ್ನು ಹೊಂದಿದ್ದರು. ಅಲ್ಲದೆ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಎರಡು ಚಿನ್ನದ ಪದಕವನ್ನು ಗೆದ್ದಿರುವ ಏಕೈಕ ಕ್ರೀಡಾಪಟು ಎಂಬ ಸಾಧನೆಯನ್ನು ಕೂಡ ಮಾಡಿದ್ದಾರೆ. ಈಗ ಇವರ ಈ ಸಾಧನೆಗೆ ಬೆಳ್ಳಿಯ ಪದಕ ಕೂಡ ಸೇರ್ಪಡೆಗೊಂಡಿದೆ.
ಈ ಬಾರಿಯ ಪ್ಯಾರಾಲಿಂಪಿಕ್ಸ್ನಲ್ಲಿ ಭಾರತ 8 ಕ್ರೀಡಾಪಟುಗಳ ಪ್ರಬಲ ತಂಡವನ್ನು ಕಳುಹಿಸಿದೆ. ಇದರಲ್ಲಿ ದೇವೇಂದ್ರ ಝಝಾರಿಯಾ ಪದಕ ಗೆಲ್ಲವು ಪ್ರಮುಖ ಸ್ಪರ್ಧಿಯಾಗಿದ್ದರು. ಸಂದೀಪ್ ಚೌಧರಿ (ಎಫ್ 44 ವಿಭಾಗ), ಸುಮಿತ್ ಆಂಟಿಲ್ (ಎಫ್ 64 ವಿಭಾಗ), ಸುಂದರ್ ಸಿಂಗ್ ಗುರ್ಜಾರ್ (ಎಫ್ 46 ವಿಭಾಗ), ಅಜೀತ್ ಸಿಂಗ್ ಯಾದವ್ (ಎಫ್ 46 ವಿಭಾಗ), ನವದೀಪ್ (ಎಫ್ 41 ವಿಭಾಗ) ಮತ್ತು ರಂಜೀತ್ ಭಾಟಿ (ಎಫ್ 57 ವಿಭಾಗ)ದಲ್ಲಿ ಸ್ಪರ್ಧಿಸುತ್ತಿದ್ದಾರೆ.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 04:36 pm
HK News Staffer
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm