ಬ್ರೇಕಿಂಗ್ ನ್ಯೂಸ್
30-08-21 11:30 am Mykhel: Madhukar shetty ಕ್ರೀಡೆ
ಟೋಕಿಯೋ, ಆಗಸ್ಟ್ 30: ಈ ಬಾರಿಯ ಟೋಕಿಯೋ ಪ್ಯಾರಾಲಿಂಪಿಕ್ಸ್ನಲ್ಲಿ ಭಾರತ ಕ್ರೀಡಾಪಟುಗಳು ತಮ್ಮ ಪದಕ ಬೇಟೆಯನ್ನು ಮುಂದುವರಿಸಿದ್ದಾರೆ. 10 ಮೀಟರ್ ಏರ್ ರೈಫಲ್ ಸ್ಪರ್ಧೆಯಲ್ಲಿ ಇಂದು ಭಾರತದ ಶೂಟರ್ ಅವನಿ ಲೇಖರಾ ಚಿನ್ನಕ್ಕೆ ಗುರಿಯಿಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಭಾರತ ಟೋಕಿಯೋ ಪ್ಯಾರಾಲಿಂಪಿಕ್ಸ್ನಲ್ಲಿ ಮೊದಲ ಚಿನ್ನದ ಪದಕ ಗೆದ್ದಿದೆ.
ಅವನಿ ಲೇಖರಾ ಚಿನ್ನದ ಪದಕ ಗೆಲ್ಲುವ ಮೂಲಕ ಪ್ಯಾರಾಲಿಂಪಿಕ್ಸ್ನಲ್ಲಿ ಭಾರತದ ಮಹಿಳಾ ಸ್ಪರ್ಧಿ ಗೆದ್ದ ಪ್ರಪ್ರಥಮ ಚಿನ್ನದ ಪದಕ ಎಂಬ ಐತಿಹಾಸಿಕ ಸಾಧನೆಯಾನ್ನು ತಮ್ಮದಾಗಿಸಿದ್ದಾರೆ. ಇದು ಭಾರತ ಪ್ಯಾರಾಲಿಂಪಿಕ್ಸ್ ಇತಿಹಾಸದಲ್ಲಿ ಗೆದ್ದ ಒಟ್ಟಾರೆ ಐದನೇ ಚಿನ್ನದ ಪದಕವಾಗಿದೆ.

ಅವನಿ ಲೇಖರಾ ಫೈನಲ್ನಲ್ಲಿ ಒಟ್ಟು 249.6 ಅಂಕಗಳನ್ನು ಸಂಪಾದಿಸುವ ಮೂಲಕ ವಿಶ್ವ ದಾಖಲೆಯನ್ನು ಕೂಡ ಸರಿಗಟ್ಟಿದ ಸಾಧನೆ ಮಾಡಿದ್ದಾರೆ. 2018ರ ಡಿಸೆಂಬರ್ನಲ್ಲಿ ಉಕ್ರೈನ್ನ ಇರ್ಯಾನಾ ಶೆಟ್ನಿಕ್ ಇಷ್ಟೇ ಅಂಕಗಳನ್ನು ಸಂಪಾದಿಸುವ ಮೂಲಕ ದಾಖಲೆ ಬರೆದಿದ್ದರು. ಈ ದಾಖಲೆಯನ್ನು ಭಾರತೀಯ ಶೂಟರ್ ಸರಿಗಟ್ಟಿದ್ದಾರೆ. 19ರ ಹರೆಯದ ಅವನಿ ಆರಂಭದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಲು ಸಾಧ್ಯವಾಗಿರಲಿಲ್ಲ.
ಆದರೆ ನಂತರ ತಮ್ಮ ಪ್ರದರ್ಶನವನ್ನು ಉತ್ತಮಗೊಳಿಸುತ್ತಾ ಸಾಗಿದ್ದರು. ಕ್ವಾಲಿಫಿಕೇಶನ್ ಸುತ್ತಿನಲ್ಲಿ 621.7 ಅಂಕಗಳನ್ನು ಸಂಪಾದಿಸಿ 7ನೇ ಸ್ಥಾನವನ್ನು ಪಡೆದುಕೊಂಡು ಫೈನಲ್ಗೆ ಪ್ರವೇಶ ಪಡೆದಿದ್ದರು. ಆದರೆ ಫೈನಲ್ ಹಂತದಲ್ಲಿ ದಾಖಲೆಯ ಪ್ರದರ್ಶನ ನೀಡುವಲ್ಲಿ ಅವನಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಭಾರತ ಈ ಬಾರಿಯ ಟೋಕಿಯೋ ಪ್ಯಾರಾಲಿಂಪಿಕ್ಸ್ನಲ್ಲಿ ಮೊದಲ ಚಿನ್ನದ ಪದಕವನ್ನು ಗೆದ್ದುಕೊಂಡಿದೆ.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 04:36 pm
HK News Staffer
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm