ಬ್ರೇಕಿಂಗ್ ನ್ಯೂಸ್
06-09-21 04:37 pm Mykhel: Sadashiva ಕ್ರೀಡೆ
ಕರಾಚಿ: ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ, ಮುಖ್ಯ ಕೋಚ್ ಮಿಸ್ಬಾ ಉಲ್ ಹಕ್ ಮತ್ತು ಮುಖ್ಯ ಬೌಲಿಂಗ್ ಕೋಚ್ ವಾಕರ್ ಯೂನಿಸ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಟಿ20 ವಿಶ್ವಕಪ್ ಸಮೀಪದಲ್ಲಿರುವಾಗಲೇ ಪಾಕಿಸ್ತಾನ ಕ್ರಿಕೆಟ್ ಬೋರ್ಡ್ (ಪಿಸಿಬಿ)ನಲ್ಲಿ ಪ್ರಮುಖ ಬದಲಾವಣೆಯಾಗಿದೆ. ಪಿಸಿಬಿ ಈ ಸಂಗತಿಯನ್ನು ಸೋಮವಾರ (ಸೆಪ್ಟೆಂಬರ್ 6) ತಿಳಿಸಿದೆ.
ಪಾಕಿಸ್ತಾನ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿದ್ದ ಮಿಸ್ಬಾ ಉಲ್ ಹಕ್ ಮತ್ತು ಮುಖ್ಯ ಬೌಲಿಂಗ್ ಕೋಚ್ ಆಗಿದ್ದ ಯೂನಿಸ್ ಖಾನ್ ಇಬ್ಬರೂ ಸೋಮವಾರ ಮುಂಜಾನೆ ತಮ್ಮ ನಿರ್ಧಾರ ತಿಳಿಸಿರುವುದಾಗಿ ಪಾಕಿಸ್ತಾನ ಕ್ರಿಕೆಟ್ ಬೋರ್ಡ್ ಹೇಳಿದೆ. ವೆಸ್ಟ್ ಇಂಡೀಸ್ನಲ್ಲಿರುವ ಮಿಸ್ಬಾಗೆ ಕೋವಿಡ್-19 ಪಾಸಿಟಿವ್ ಬಂದಿದೆ. ಅವರೀಗ ಐಸೊಲೇಶನ್ನಲ್ಲಿದ್ದಾರೆ.

ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ನ್ಯೂಜಿಲೆಂಡ್ ವಿರುದ್ಧ ಇದೇ ಸೆಪ್ಟೆಂಬರ್ 25ರಿಂದ ಅಕ್ಟೋಬರ್ 3ರ ವರೆಗೆ ಐದು ಟಿ20ಐ ಪಂದ್ಯ ನಡೆಯಲಿದೆ. ಪಾಕಿಸ್ತಾನಕ್ಕೆ ಪ್ರವಾಸ ಬರಲಿರುವ ಕಿವೀಸ್ ತಂಡ ಅಲ್ಲಿ ಟಿ20ಐ ಸರಣಿ ಆಡಲಿದೆ. ಅದಾಗಿ ಇಂಗ್ಲೆಂಡ್ ವಿರುದ್ಧ ಪಾಕ್ ತಂಡಕ್ಕೆ ಎರಡು ಪಂದ್ಯಗಳ ಟಿ20ಐ ಸರಣಿ ನಡೆಯಲಿದೆ. ಅಕ್ಟೋಬರ್ 13 ಮತ್ತು 14ರಂದು ಪಾಕ್ ಮತ್ತು ಇಂಗ್ಲೆಂಡ್ ಮಧ್ಯೆ ಎರಡು ಪಂದ್ಯಗಳ ಟಿ20ಐ ಸರಣಿ ನಡೆಯಲಿದೆ.
ನ್ಯೂಜಿಲೆಂಡ್, ಇಂಗ್ಲೆಂಡ್ ವಿರುದ್ಧದ ಟಿ20 ಸರಣಿ ಬಳಿಕ ಅಕ್ಟೋಬರ್-ನವೆಂಬರ್ನಲ್ಲಿ ಟಿ20 ವಿಶ್ವಕಪ್ ನಡೆಯಲಿದೆ. ಇದಕ್ಕೂ ಮುನ್ನ ಪಿಸಿಬಿ ಕೋಚಿಂಗ್ ವಿಭಾಗದಲ್ಲಿ ಬದಲಾವಣೆಯಾಗಲಿದೆ. ತೆರವಾಗಿರುವ ಸ್ಥಾನಕ್ಕೆ ತಾತ್ಕಾಲಿಕವಾಗಿ ಅಬ್ದುಲ್ ರಝಾಕ್ ಮತ್ತು ಸಕ್ಲೇನ್ ಮುಷ್ತಾಕ್ ಬರಲಿದ್ದಾರೆ. ಟಿ20 ವಿಶ್ವಕಪ್ಗೂ ಮುನ್ನ ಕೋಚ್ಗಳನ್ನು ಆರಿಸುವುದಾಗಿ ಪಿಸಿಬಿ ಹೇಳಿದೆ. ಟಿ20 ವಿಶ್ವಕಪ್ ಟೂರ್ನಿಗೆ ಸಂಬಂಧಿಸಿ ಸೋಮವಾರ ಪಾಕಿಸ್ತಾನ 15 ಜನರ ತಂಡ ಪ್ರಕಟಿಸಿತ್ತು. ಇದರ ಬೆನ್ನಲ್ಲೇ ಪಾಕ್ ತಂಡದ ಕೋಚಿಂಗ್ ಸ್ಥಾನಕ್ಕೆ ಇಬ್ಬರು ರಾಜೀನಾಮೆ ನೀಡಿರುವ ಸಂಗತಿ ಕೇಳಿ ಬಂದಿದೆ.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm